ನಾನು ಡಿಸಿಎಂ ಆಗಬೇಕೆನ್ನುವುದು ಜನರ ಆಸೆ: ಬಹಿರಂಗವಾಗಿಯೇ ಬೇಡಿಕೆಯಿಟ್ಟ ಶ್ರೀರಾಮುಲು
Team Udayavani, Nov 30, 2020, 2:41 PM IST
ರಾಯಚೂರು: ಮೊಳಕಾಲ್ಮೂರು ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಬೇಕು ಎನ್ನುವುದು ಹೋರಾಟಗಾರರ ಬೇಡಿಕೆಯಾಗಿದ್ದು, ಆ ವಿಚಾರದಲ್ಲಿ ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಮಸ್ಕಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀರಾಮುಲು, ಅರಣ್ಯ ಸಚಿವ ಆನಂದ್ ಸಿಂಗ್ ರಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಉಪಮುಖ್ಯಮಂತ್ರಿ ಆಗಬೇಕು ಎನ್ನುವುದು ಜನರ ಬೇಡಿಕೆಯಾಗಿದೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಡಿಸಿಎಂ ವಿಚಾರ ಪಕ್ಷದ ವೇದಿಕೆಯಲ್ಲಿ ನಿರ್ಧರಿಸಲಾಗುವುದು ಎಂದರು.
ಸಚಿವ ಆನಂದ ಸಿಂಗ್ ಮಾತನಾಡಿ, ಕಂಪ್ಲಿ ಬಳ್ಳಾರಿಗೆ ಸೇರಿಸುವ ಕೂಗೆದ್ದಿದೆ. ಎಲ್ಲರಿಗೂ ಹೋರಾಟದ ಮೂಲಕ ಬೇಡಿಕೆ ಸಲ್ಲಿಸುವ ಹಕ್ಕಿದೆ. ಈ ವಿಚಾರ ಕಾನೂನಾತ್ಮಕವಾಗಿ ನಿರ್ಧಾರವಾಗಲಿದೆ ಎಂದರು.
ಇದನ್ನೂ ಓದಿ:ನೀತಿಸಂಹಿತೆ ಜಾರಿ: ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರು ಹತ್ತಿದ ಮೂವರು ಸಚಿವರು
ಕಂಪ್ಲಿ ಶಾಸಕ ಗಣೇಶ ತೊಡೆ ತಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಅವರು; ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444