ಪ್ಲಾಸ್ಟಿಕ್ ಧ್ವಜ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯ
Team Udayavani, Jan 23, 2022, 6:09 PM IST
ರಾಯಚೂರು: ಹೈಕೋರ್ಟ್ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕು ವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ರಾಷ್ಟ್ರಧ್ವಜಕ್ಕೆ ದೇಶದ ಪ್ರತಿ ನಾಗರಿಕರು ಗೌರವ ಸಲ್ಲಿಸಬೇಕಿದೆ. ಆದರೆ, ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವದ ವೇಳೆಯಲ್ಲಿ ಪ್ಲಾಸ್ಟಿಕ್ ಧ್ವಜ ಬಳಸಿ ಆನಂತರ ರಸ್ತೆ ಮೇಲೆ ಹಾಗೂ ಚರಂಡಿ ಹಾಗೂ ಕಸದ ಬುಟ್ಟಿಯಲ್ಲಿ ಹಾಕುವ ಮೂಲಕ ಅಪಮಾನ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಧ್ವಜದ ಉತ್ಪಾದನೆ ಮತ್ತು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಧ್ವಜದ ಮಾಸ್ಕ್ ಧರಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ರಾಮನಗರದ ಬಳಿ 100 ಎಕರೆ ಜಮೀನಿನಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪಿಸುತ್ತಿರುವ ಕಾರ್ಯ ಶ್ಲಾಘನೀಯ. ಸಂಸ್ಕೃತವೂ ಪ್ರಾಚೀನ ಭಾಷೆಯಾಗಿದ್ದು ಕನ್ನಡ, ತೆಲುಗು ತಮಿಳು ಹಾಗೂ ಇತರೆ ಭಾರತೀಯ ಭಾಷೆಗಳ ಜನನಿ ಸಂಸ್ಕೃತವಾಗಿದೆ. ಡಾ| ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯಾಗಿಸಲು ಇಂಗಿತ ವ್ಯಕ್ತಪಡಿಸಿದ್ದರು.
ಇದಕ್ಕೆ ಅನೇಕ ಸಂಸದರೂ ಸಹಮತ ವ್ಯಕ್ತಪಡಿಸಿದ್ದರು. ಆದರೆ, ಇಂದು ಕಾಂಗ್ರೆಸ್ ನಾಯಕರು ಸಂಸ್ಕೃತ ವಿವಿಗೆ ವಿರೋಧಿಸುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತನ್ನ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಒತ್ತಾಯಿಸಿದರು. ಈ ವೇಳೆ ಸಮಿತಿ ಮುಖಂಡ ಡಾ| ಆನಂದ್ ಫಡ್ನಿàಸ್, ಸುವರ್ಣ, ಕೃಷ್ಣವೇಣಿ, ಜಯಶ್ರೀ, ಶಿವರಾಜ ಮಸ್ಕಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಜಿ.ಪಂ., ತಾ.ಪಂ. ಚುನಾವಣೆ ಶೀಘ್ರ ನಡೆಸಲಿ: ಸಲೀಂ ಅಹ್ಮದ್
ಅಡಿಕೆ ಎಲೆ ಹಳದಿ ರೋಗ: ಸರಕಾರದ ನಿರ್ಲಕ್ಷ್ಯ: ಹರಿಪ್ರಸಾದ್