ಸಮರ್ಪಕ ನೀರು ಹರಿಸಲು ಆಗ್ರಹಿಸಿ ಸಚಿವರ ನಿವಾಸ ಎದುರು ಪ್ರತಿಭಟನೆ

Team Udayavani, Aug 14, 2018, 12:19 PM IST

ray-4.jpg

ಸಿಂಧನೂರು: ತುಂಗಭದ್ರಾ ಎಡದಂಡೆ ನಾಲೆಯ 40ನೇ ಉಪ ಕಾಲುವೆಗೆ ಸಮರ್ಪಕ ನೀರು ಹರಿಸದಿರುವುದನ್ನು ಖಂಡಿಸಿ ವಿವಿಧ ಗ್ರಾಮಗಳ ನೂರಾರು ರೈತರು ಸೋಮವಾರ ಸಚಿವ ವೆಂಕಟರಾವ್‌ ನಾಡಗೌಡರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

40ನೇ ಕಾಲುವೆ ವ್ಯಾಪ್ತಿಯ ಅರಳಹಳ್ಳಿ, ಹಟ್ಟಿ ಕ್ಯಾಂಪ್‌, ಮಲ್ಲದಗುಡ್ಡ, ವಿರೂಪಾಪುರ, ನಾಲ್ಕು ಹಾಗೂ ಮೂರನೇ ಮೈಲ್‌ ಕ್ಯಾಂಪ್‌ಗ್ಳ ನೂರಾರು ರೈತರು ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ರೈತ ವೆಂಕಟೇಶ ಮಾತನಾಡಿ, 40ನೇ ಉಪ ಕಾಲುವೆ ಮೇಲ್ಭಾಗದ ರೈತರು ಅಕ್ರಮ ತೂಬುಗಳನ್ನು ಮಾಡಿಕೊಂಡು ನೀರು ಪಡೆಯುತ್ತಿದ್ದಾರೆ. ಇವುಗಳ ತೆರವಿಗೆ ನೂರಾರು ಸಲ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನೀರುಗಳ್ಳರೊಂದಿಗೆ ಶಾಮಿಲಾಗಿದ್ದಾರೆ. ಹೀಗಾಗಿ ಕಳೆದ ಮೂರು ವರ್ಷದಿಂದ ಕನಿಷ್ಠ ಜೋಳ ಬೆಳೆಯಲು ಕೂಡ ನೀರು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ರೈತರ ಮನವಿ ಆಲಿಸಿದ ಸಚಿವ ವೆಂಕಟರಾವ್‌ ನಾಡಗೌಡ, ಅನಧಿಕೃತ ಪೈಪ್‌, ಪಂಪ್‌ಸೆಟ್‌ ಹಾಕಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಲ್ಲಿಯವರೆಗೆ ನೀರಾವರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸರಿಯಾಗಿ ನೀರು ನಿರ್ವಹಣೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈಗ ಅಧಿಕಾರಿಗಳನ್ನು ಹಾಕಿಕೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ರೈತ ಮುಖಂಡರಾದ ಶರಣಬಸವ, ಅಮರೇಶ, ಬಸಪ್ಪ, ಬಸವರಾಜ, ಅಮರೇಗೌಡ, ಉಮೇಶ, ಸಿದ್ದನಗೌಡ, ಮಲ್ಲಿಕಾರ್ಜುನಯ್ಯ, ವೀರಭದ್ರಯ್ಯ, ಹನುಮಂತ, ರಾಮಲಿಂಗಪ್ಪ, ಮಲ್ಲಪ್ಪ, ನಿಜಗುಣಯ್ಯ ಮುಂತಾದವರು
ಇದ್ದರು. 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.