Udayavni Special

ರಿಮ್ಸ್‌ ಎದುರು ಧರಣಿ


Team Udayavani, Aug 29, 2017, 3:40 PM IST

ray 2.jpg

ರಾಯಚೂರು: ವಜಾಗೊಳಿಸಿದ ರಿಮ್ಸ್‌ನ 36 ನರ್ಸಿಂಗ್‌ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು, ವೇತನ ಹೆಚ್ಚಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಯುಸಿಐ ನೇತೃತ್ವದಲ್ಲಿ ಟಿಪ್ಪು ಸುಲ್ತಾನ್‌ ಉದ್ಯಾನವನದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿ, ಕಾರ್ಮಿಕ ಕಾಯ್ದೆ ಹಾಗೂ ಸರ್ಕಾರ ನಿಯಮ ಉಲ್ಲಂಘಿಸಿ 36 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ವೇತನ ಹೆಚ್ಚಿಸುವಂತೆ ಕೇಳಿದ ಮಾತ್ರಕ್ಕೆ ಹೀಗೆ ಕಾರ್ಮಿಕರನ್ನು ಅತಂತ್ರಗೊಳಿಸಿರುವುದು ಖಂಡನೀಯ ಎಂದು ಧರಣಿ ನಿರತರು ದೂರಿದರು. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಚನೆಯಾದ ವೇತನ ತಾರತಮ್ಯ ನಿವಾರಣಾ ಸಮಿತಿಯು ನರ್ಸಿಂಗ್‌ ಸಿಬ್ಬಂದಿಗೆ ಮಾಸಿಕ 15ರಿಂದ 22 ಸಾವಿರ ರೂ. ವೇತನ ನೀಡಬೇಕು ಎಂದು ಶಿಫಾರಸು ಮಾಡಿದೆ. ಆದರೂ ರಿಮ್ಸ್‌ ಪ್ರಭಾರ ನಿರ್ದೇಶಕಿ ಡಾ| ಕವಿತಾ ಪಾಟೀಲ ಅದರಂತೆ ನಡೆದುಕೊಳ್ಳುತ್ತಿಲ್ಲ. ರಿಮ್ಸ್‌, ಓಪೆಕ್‌ ಆಸ್ಪತ್ರೆ ಹಾಗೂ ಮೆಡಿಕಲ್‌ ಕಾಲೇಜಿನಲ್ಲಿ ದುಡಿಯುವ ಸಿ ಹಾಗೂ ಡಿ ಗ್ರೂಪ್‌ ಕಾರ್ಮಿಕರಿಗೆ ಭದ್ರತೆ ಇಲ್ಲ. ಕಾಯ್ದೆ ಉಲ್ಲಂಘಿಸಿ ಕಡಿಮೆ ಕೂಲಿ ನೀಡುತ್ತಿದ್ದು, ಹೆಚ್ಚು ಕಾಲ ದುಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು. 1.27 ಕೋಟಿ ರೂ. ವೆಚ್ಚದಲ್ಲಿ ರಿಮ್ಸ್‌ನಲ್ಲಿ ಬೆಂಗಳೂರು ಮೂಲದ ದೀಪಾ ಲೈಟಿಂಗ್‌ ಸಿಸ್ಟಮ್‌ ಕಂಪೆನಿಯಿಂದ 1,217 ಸೋಲಾರ್‌ ಹೋಮ್‌ ಲೈಟ್ಸ್‌ ಹಾಗೂ 89 ಸೋಲಾರ್‌ ಸ್ಟ್ರೀಟ್‌ ಲೈಟ್‌ ಖರೀದಿಸಿ ಅಳವಡಿಸಲಾಗಿದೆ. ಈ ಕುರಿತು ಥರ್ಡ್‌ಪಾರ್ಟಿ
ಸಮೀಕ್ಷೆ ನಡೆಸಿಲ್ಲ. ಟೆಂಡರ್‌ ಕರೆಯದೆ ಖರೀದಿ ಆದೇಶ ಹೊರಡಿಸಲಾಗಿದೆ ಎಂದು ದೂರಿದರು. ನಿರ್ದೇಶಕಿ ಡಾ| ಕವಿತಾ ಪಾಟೀಲ ಕಾರ್ಮಿಕ ವಿರೋಧಿ  ಧೋರಣೆ ಅನುಸರಿಸುತ್ತಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕು. ಸೋಲಾರ್‌ ದೀಪಗಳ ಖರೀದಿ ಕುರಿತು ತನಿಖೆ ನಡೆಸಬೇಕು. ರಿಮ್ಸ್‌ ಎಲ್ಲ ಸಿ ಹಾಗೂ ಡಿ ಗ್ರೂಪ್‌ ಕಾರ್ಮಿಕರಿಗೆ ನಿಗದಿತ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು. ಟಿಯುಸಿಐ ರಾಜ್ಯಾಧ್ಯಕ್ಷ ಆರ್‌.ಮಾನಸಯ್ಯ, ಜಿಲ್ಲಾಧ್ಯಕ್ಷ ಜಿ.ಅಮರೇಶ, ಜಿ.ಅಡವಿರಾವ್‌ ಕುಲಕರ್ಣಿ, ಸಿಬ್ಬಂದಿ ಭಾಗ್ಯಮ್ಮ, ಶಶಿಕಲಾ, ಅಕ್ಕನಾಗಮ್ಮ ರಾಕೇಶ ಇತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

shrikrishna gmail com movie review

ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

ಅರಕೇರಾ ತಾಲೂಕು ಕೇಂದ್ರ ಕೈ ಬಿಡಲು ಒತ್ತಾಯ

16

ಕೋವಿಡ್‌ ಭತ್ಯೆ ಬಾಕಿ ವಿತರಣೆಗೆ ಆಗ್ರಹ

15

18ಕ್ಕೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

13

ಕರಿಯಪ್ಪನವರ ಸಮಾಜಸೇವೆ ಶ್ಲಾಘನೀಯ

12

ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ಚಾಲನೆ

ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

ಎಂ.ಎ.ಹೆಗಡೆರಿಗೆ ಮರಣೋತ್ತರ ಚಂದುಬಾಬು‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.