ತವರಿಗೆ ಬಂದವರ ಕ್ವಾರಂಟೈನ್‌ ಕಡ್ಡಾಯ

Team Udayavani, May 13, 2020, 6:01 AM IST

ತವರಿಗೆ ಬಂದವರ ಕ್ವಾರಂಟೈನ್‌ ಕಡ್ಡಾಯ

ರಾಯಚೂರು: ಹಸಿರು ವಲಯಗಳಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡಿರುವುದರಿಂದ ಅಂತಾರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರ ಮೇಲೆ ಹದ್ದಿನ ಕಣ್ಣಿಡಬೇಕು. ಹೊರ ಜಿಲ್ಲೆ, ರಾಜ್ಯಗಳಿಂದ ಯಾರೇ ಬರಲಿ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿ ಇರಿಸುವಂತೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌ ತಿಳಿಸಿದರು.

ನಗರದ ಡಿಸಿ ಕಚೇರಿಯಲ್ಲಿ ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡ ವಿಡಿಯೋ ಕಾನ್ಫೆರೆನ್ಸ್‌ನಲ್ಲಿ ನಿರ್ದೇಶನ ನೀಡಿದರು. ಗುಜರಾತ್‌ನ ಅಹಮದಾಬಾದ್‌, ನವದೆಹಲಿ, ಅಜ್ಮೇರ್‌, ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಿಗೆ ವಲಸೆ ಹೋದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಿಂದಿರುಗುತ್ತಿದ್ದಾರೆ. ಅಂತರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರ ಮೇಲೆ ಹೆಚ್ಚಿನ ನಿಗಾವಹಿಸಿ ಅವರ ಸಂಪೂರ್ಣ ಮಾಹಿತಿ ಕಲೆ ಹಾಕಬೇಕು. ಅಂಥವರನ್ನು 14 ದಿನ ಕ್ವಾರಂಟೈನ್‌ನಲ್ಲಿಡಬೇಕು ಎಂದರು.

ಕ್ವಾರಂಟೈನ್‌ನಲ್ಲಿದ್ದವರ ಕುಟುಂಬ ಸಮೇತ ಮಾದರಿ ಸಂಗ್ರಹಿಸಬೇಕು. ಗಿಲ್ಲೆಸೂಗುರು, ಲಿಂಗಸುಗೂರು, ತಿಂಥಿಣಿ ಬ್ರಿಜ್‌ ಬಳಿ ಬಳಿಮಾದರಿ ಸಂಗ್ರಹ ಘಟಕ ಸ್ಥಾಪಿಸಲಾಗಿದೆ. ಕಳೆದ 3-4 ದಿನದಲ್ಲಿ 1500 ಬಸ್‌ ಮೂಲಕ ಅಂತರ ರಾಜ್ಯಗಳಿಂದ ಸಾವಿರಾರು ಜನ ಜಿಲ್ಲೆಗೆ ಆಗಮಿಸಿದ್ದಾರೆ. ಕ್ವಾರಂಟೈನ್‌ನಲ್ಲಿದ್ದ ನಿತ್ಯ 200 ಸ್ಯಾಂಪಲ್‌ ಸಂಗ್ರಹಿಸಬೇಕು ಎಂದರು.

ಮಳೆಗಾಲ ಶುರುವಾಗುತ್ತಿದ್ದು, ಕೋವಿಡ್ ಜತೆಗೆ ಮಲೇರಿಯಾ, ಡೆಂಘೀ, ಚಿಕೂನ್‌ ಗುನ್ಯಾ ರೋಗ ಹರಡುವ ಸಾಧ್ಯತೆ ಇದೆ. ಆದ್ದರಿಂದ ತಹಶೀಲ್ದಾರ್‌ ನೋಡಲ್‌ ಅಧಿಕಾರಿಗಳನ್ನು ನೇಮಿಸಿ ಸ್ವಚ್ಛತೆಗೆ ಒತ್ತು ಕೊಡಬೇಕು. ರಾಜ್ಯದ ಅನ್ಯ ಜಿಲ್ಲೆಗಳಲ್ಲಿರುವ ಕಾರ್ಮಿಕರು, ಉದ್ಯೋಗಿಗಳನ್ನು ಕರೆತರಲು ಜಿಲ್ಲಾಡಳಿತ ಈವರೆಗೂ ಎಷ್ಟು ಜನರಿಗೆ ಪಾಸ್‌ ನೀಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ನಗರದಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಲೀಕರಿಗೆ ನೋಟಿಸ್‌ ನೀಡಬೇಕು. ನಿಯಮ ಮೀರಿದ ಎಷ್ಟು ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದೆ ಎಂಬ ಮಾಹಿತಿ ಸಂಗ್ರಹಿಸುವಂತೆ ಎಡಿಸಿಗೆ ಸೂಚಿಸಿದರು.

ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ಮಾತನಾಡಿ, ಅಜ್ಮೇರಕ್ಕೆ ಹೋಗಿ ಬಂದವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಅಂಥವರನ್ನು ಗುರುತಿಸಬೇಕು. ಯಾದಗಿರಿ ಮತ್ತು ಸುರಪುರ ತಾಲೂಕಿನಲ್ಲಿ ಈಗಾಗಲೇ ಕೋವಿಡ್ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಅಂತರ ರಾಜ್ಯಗಳ ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣು ಇಡುವಂತೆ ಸೂಚಿಸಿದರು.

ಜಿಪಂ ಸಿಇಒ ಜಿ.ಲಕ್ಷ್ಮೀಕಾಂತ ರೆಡ್ಡಿ, ಎಡಿಸಿ ದುರುಗೇಶ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಶ್ರೀಹರಿಬಾಬು, ಎಸಿ ಸಂತೋಷ ಕಾಮಗೌಡ, ತಹಶೀಲ್ದಾರ್‌ ಡಾ.ಹಂಪಣ್ಣ, ನಗರಸಭೆ ಪೌರಾಯುಕ್ತ ದೊಡ್ಡಮನಿ, ರಿಮ್ಸ್‌ ನಿರ್ದೇಶಕ ಡಾ.ಬಸವರಾಜ ಪೀರಾಪುರ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.