ವಾರದ ಬಳಿಕ ವಹಿವಾಟಿಗೆ ಎಪಿಎಂಸಿ ಮುಕ್ತ

Team Udayavani, Mar 31, 2020, 12:48 PM IST

ವಾರದ ಬಳಿಕ ವಹಿವಾಟಿಗೆ ಎಪಿಎಂಸಿ ಮುಕ್ತ

ಸಾಂದರ್ಭಿಕ ಚಿತ್ರ

ರಾಯಚೂರು: ಕೋವಿಡ್19 ಎಫೆಕ್ಟ್ ನಿಂದ ಒಂದು ವಾರಗಳ ಸ್ಥಗಿತಗೊಂಡಿದ್ದ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೋಮವಾರದಿಂದ ಕಾರ್ಯಾರಂಭಿಸಿದೆ. ಆದರೆ, ಮೊದಲ ದಿನ ಮಾಹಿತಿ ಕೊರತೆಯಿಂದ ಸಾಕಷ್ಟು ರೈತರು ಬಂದಿರಲಿಲ್ಲ.

ರಾಜ್ಯದಲ್ಲೇ ದೊಡ್ಡ ಮಾರುಕಟ್ಟೆ ಎನಿಸಿಕೊಂಡ ಈ ಎಪಿಎಂಸಿಯಲ್ಲಿ ನಿತ್ಯ ಏನಿಲ್ಲವೆಂದರೂ ಎರಡರಿಂದ ಎರಡೂವರೆ ಕೋಟಿ ವಹಿವಾಟು ನಡೆಯುತ್ತದೆ. ಅಲ್ಲದೇ, ಈಗ ಬೆಳೆ ಕಟಾವಾಗಿದ್ದು, ರೈತರು ಅದನ್ನು ಇಟ್ಟುಕೊಳ್ಳುವುದು ಕಷ್ಟವಾಗುತ್ತಿದೆ. ಮೆಣಸಿನಕಾಯಿ ಬೆಳೆದ ರೈತರಂತೂ ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ತುಂಬಿಸಿದ್ದಾರೆ. ಕೋವಿಡ್19 ಭೀತಿ ಇನ್ನೂ ಹಾಗೆ ಇರುವ ಕಾರಣ ಜಿಲ್ಲಾ ಧಿಕಾರಿ ಸೂಕ್ತ ನಿರ್ದೇಶನ ನೀಡಿದ್ದು, ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ವರ್ತಕರು ಕೂಡ ತಮ್ಮ ಹಮಾಲಿಗಳಿಗೆ ಸೂಚನೆ ನೀಡಿದ್ದಾರೆ. ರೈತರು ಮಾರುಕಟ್ಟೆಗೆ ಬಂದ ಮೇಲೆ ವಾಸ್ತವ ಸ್ಥಿತಿ ಅರಿವಾಗಲಿದೆ. ಜಿಲ್ಲೆಗೆ ಈವರೆಗೆ 174 ಜನ ವಿದೇಶದಿಂದ ಹಿಂದಿರುಗಿದ್ದು, ಅವರು ಮತ್ತು ಅವರ ಕುಟುಂಬದ 719ರನ್ನು ಹೋಮ್‌ ಕ್ವಾರಂಟೈನ್‌ ನಲ್ಲಿ ಇಡಲಾಗಿದೆ. ಈವರೆಗೆ 9 ಮಾದರಿಗಳನ್ನು ಲ್ಯಾಬ್‌ಗ ಕಳುಹಿಸಿದ್ದು, ಅದರಲ್ಲಿ 5 ನೆಗೆಟಿವ್‌ ಬಂದರೆ, ಎರಡು ತಿರಸ್ಕೃತಗೊಂಡಿವೆ. ಇನ್ನೆರಡು ಬರಬೇಕಿದೆ. ಆರು ಜನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇನ್ನೂ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಸರಕು ಸಾಗಣೆಗೆ ಅವಕಾಶ ನೀಡಿದ್ದು, ಪಾಸ್‌ಗಳನ್ನು ಪಡೆದು ಓಡಾಡುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲೂ ಜನ ಸಂಚಾರ ತುಸು ಹೆಚ್ಚಾಗಿದ್ದು, ಎಲ್ಲರೂ ವ್ಯಾಪಾರ, ವಹಿವಾಟಿನ ಉದ್ದೇಶಕ್ಕೆ ಪಾಸ್‌ ಪಡೆದು ಸಂಚರಿಸುತ್ತಿದ್ದಾರೆ. ಅನಗತ್ಯವಾಗಿ ಜನ ಓಡಾಡುವುದಕ್ಕೆ ಅವಕಾಶ ನೀಡಿಲ್ಲ.

ಪೆಟ್ರೋಲ್‌ ಬಂಕ್‌ಗಳಲ್ಲಿ 200 ರೂ. ಗಿಂತ ಅಧಿಕ ಪೆಟ್ರೋಲ್‌, 500 ರೂ.ಗಿಂತ ಅಧಿಕ ಡೀಸೆಲ್‌ ಹಾಕಿಸಬೇಕು ಎಂದರೂ ಕೆಲವೆಡೆ ಬೇಕಾಬಿಟ್ಟಿ ಹಾಕಲಾಗುತ್ತಿತ್ತು. ಕ್ಯಾನ್‌ ಗಳಲ್ಲಿ ಹಾಕಬಾರದು ಎಂದರೂ ಆದೇಶ ಮೀರಲಾಯಿತು. ಪಾಸ್‌ ಇದ್ದವರಿಗೆ ಮಾತ್ರ ಪೆಟ್ರೋಲ್‌ ಹಾಕಲಾಯಿತು. ನಾನಾ ಕೆಲಸಗಳಿಗಾಗಿ ಜಿಲ್ಲಾಡಳಿತ ಕಚೇರಿಗೆ ಅಗಮಿಸಿದ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರಣ ಪೊಲೀಸರು ಲಾಠಿ ಬೀಸಿ ಚದುರಿಸಿದ ಪ್ರಸಂಗ ನಡೆಯಿತು.

ಡ್ರೋಣ್‌ ಬಳಕೆ: ಮುಖ್ಯ ರಸ್ತೆಗಳು ಭಣಗುಡುತ್ತಿದ್ದರೂ ಬಡಾವಣೆಗಳಲ್ಲಿ ಜನ ರಾಜಾರೋಷವಾಗಿ ಗುಂಪಾಗಿ ಕೂಡುವುದು, ಓಡಾಡುವುದು ಮಾಡುತ್ತಿದ್ದಾರೆ. ಪೊಲೀಸರು ಪೆಟ್ರೋಲಿಂಗ್‌ ಮಾಡಿದಾಗ ಮಾತ್ರ ಚದುರುವುದು ಅವರು ಮುಂದೆ ಹೋಗುತ್ತಿದ್ದಂತೆ ಪುನಃ ಜಮಾಯಿಸುವುದನ್ನು ಗಮನಿಸಿದ ಪೊಲೀಸ್‌ ಇಲಾಖೆ ಡ್ರೋಣ್‌ ಮೂಲಕ ಜನರ ಚಲನ ವಲನ ಸೆರೆ ಹಿಡಿಯಲು ಮುಂದಾಗಿದೆ. ಸಿಯಾತಲಾಬ್‌ನಲ್ಲಿ ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ಡ್ರೋಣ್‌ಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.