Raichur; ಖಾಸಗಿ ಬಸ್ – ಇನ್ನೋವಾ ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Team Udayavani, Feb 18, 2024, 12:58 PM IST
ರಾಯಚೂರು: ತಾಲೂಕಿನ ಕಸಬೆ ಕ್ಯಾಂಪ್ ಬಳಿ ಖಾಸಗಿ ಬಸ್ ಮತ್ತು ಇನ್ನೋವಾ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.
ಗದಗದಿಂದ ರಾಯಚೂರಿಗೆ ಬರುತ್ತಿದ್ದ ಇನ್ನೋವಾ ಕಾರು ಹಾಗೂ ಹೈದರಾಬಾದ್ ನಿಂದ ಸಿಂಧನೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ.
ಇನ್ನೋವಾ ಕಾರಿನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಮೃತಪಟ್ಟಿದ್ದಾರೆ.
ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದು, ಉಳಿದ ಐವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!