26ರವರೆಗೆ ಎಪಿಎಂಸಿ ವಹಿವಾಟು ಸ್ಥಗಿತ

ಇತಿಹಾಸದಲ್ಲೇ ಮೊದಲ ಬಾರಿಗೆ ಆರು ದಿನ ರಾಯಚೂರು ಎಪಿಎಂಸಿ ಗಂಜ್‌ ಸ್ತಬ್ಧ

Team Udayavani, Mar 22, 2020, 5:13 PM IST

22-March-17

ರಾಯಚೂರು: ರಾಜ್ಯದಲ್ಲೇ ಅತಿ ದೊಡ್ಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಎನಿಸಿಕೊಂಡ ರಾಯಚೂರಿನ ರಾಜೇಂದ್ರ ಗಂಜ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಆರು ದಿನಗಳ ಕಾಲ ವಹಿವಾಟು ಸ್ಥಗಿತಗೊಳಿಸಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾ.21ರಿಂದ 26ವರೆಗೆ ಎಪಿಎಂಸಿ ವಹಿವಾಟು ಸ್ಥಗಿತಗೊಳಿಸಲಾಗಿದೆ.

ಬೇರೆ ಬೇರೆ ಕಾರಣಗಳಿಗೆ ಒಂದೆರಡು ದಿನಗಳ ಮಟ್ಟಿಗೆ ಗಂಜ್‌ ಬಂದ್‌ ಮಾಡಿದ್ದರೂ ಒಂದು ಕಾಯಿಲೆಗೋಸ್ಕರ ಬಂದ್‌ ಮಾಡುತ್ತಿರುವುದು ಮಾತ್ರ ಇದೇ ಮೊದಲ ಬಾರಿಗೆ ಎನ್ನುವುದು ವಿಶೇಷ. ಆ ಮೂಲಕ ಕೊರೊನಾ ಪರಿಣಾಮ ಎಪಿಎಂಸಿಗೂ ತಟ್ಟಿದೆ.

ಜಿಲ್ಲೆಯಲ್ಲಿ 2.37 ಲಕ್ಷ ಹೆಕ್ಟೇರ್‌ಗೂ ಅಧಿಕ ಕೃಷಿ ಭೂಮಿ ಇದೆ. ನೀರಾವರಿ ಆಶ್ರಿತ ಪ್ರದೇಶವೂ ಒಳಪಟ್ಟಿರುವುದರಿಂದ ಭತ್ತ ಹೆಚ್ಚಾಗಿ ಬೆಳೆಯುತ್ತಾರೆ. ಅದರ ಜತೆಗೆ ಜೋಳ, ತೊಗರಿ, ಹತ್ತಿ ಇಲ್ಲಿನ ಪ್ರಮುಖ ಬೆಳೆ. ಜಿಲ್ಲೆ ಮಾತ್ರವಲ್ಲದೇ ಪಕ್ಕದ ಯಾದಗಿರಿ ಜಿಲ್ಲೆಯ ಜನರೂ ಇದೇ ಗಂಜ್‌ಗೆ ಬರುತ್ತಾರೆ. ಆಂಧ್ರ, ತೆಲಂಗಾಣದ ಸಾಕಷ್ಟು ರೈತರು ರಾಯಚೂರು ಎಪಿಎಂಸಿ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಈಗ ಎಪಿಎಂಸಿ ವಹಿವಾಟು ಸ್ಥಗಿತಗೊಳಿಸಿದ್ದರಿಂದ ಸಾವಿರಾರು ರೈತರಿಗೆ ಸಮಸ್ಯೆ ಸೃಷ್ಟಿಸಿದೆ.

2.37 ಕೋಟಿ ವಹಿವಾಟು: ರಾಯಚೂರು ಎಪಿಎಂಸಿ ಗಂಜ್‌ನಲ್ಲಿ ಸರಾಸರಿ 2.30 ಕೋಟಿಗೂ ಅಧಿಕ ವಹಿವಾಟು ನಡೆಯುತ್ತದೆ. ಕೆಲವೊಮ್ಮೆ ಈ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಕಡಿಮೆಯಾಗುತ್ತದೆ. ಸರಾಸರಿಯಷ್ಟು ವಹಿವಾಟು ನಡೆದಲ್ಲಿ ಗಂಜ್‌ಗೆ 3.35 ಲಕ್ಷ ರೂ. ಶುಲ್ಕ ಸಂಗ್ರಹವಾಗಲಿದೆ. ಇನ್ನು ಹತ್ತಿ ಮಾರುಕಟ್ಟೆ ನಿರ್ವಹಣೆ ಕೂಡ ಇಲ್ಲಿಂದಲೇ ಆಗುವುದರಿಂದ ನಿತ್ಯ 4.33 ಲಕ್ಷ ರೂ. ವಹಿವಾಟು ನಡೆಯುತ್ತಿದ್ದು, 97 ಸಾವಿರ ರೂ. ಶುಲ್ಕ ಸಂಗ್ರಹವಾಗುತ್ತಿದೆ.

ಶೇಂಗಾ, ತೊಗರಿ, ಜೋಳ: ಎಪಿಎಂಸಿಯಲ್ಲಿ 100ಕ್ಕೂ ಅಧಿಕ ವರ್ತಕರ ಮಳಿಗೆಗಳಿವೆ. ಈಗ ಮಾರುಕಟ್ಟೆ ಶೇಂಗಾ, ತೊಗರಿ, ಜೋಳದಂಥ ಬೆಳೆಗಳು ಆವಕವಾಗುತ್ತಿವೆ. ಸಾಕಷ್ಟು ರೈತರು ದೂರದೂರುಗಳಿಂದ ಬಂದು ತಮ್ಮ ಧಾನ್ಯ ಮಾರಾಟ ಮಾಡುತ್ತಿದ್ದಾರೆ. ಆದರೆ, ಈಗ ಒಂದು ವಾರಗಳ ಕಾಲ ಎಪಿಎಂಸಿ ಸ್ಥಗಿತಗೊಂಡಿರುವುದು ರೈತರಿಗೆ ಮಾತ್ರ ನುಂಗಲಾರದ ತುತ್ತಾಗಿದೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.