ಸುಗಮವಾಗಿ ಜರುಗಿದ ಎಸ್ಸೆಸ್ಸೆಲ್ಸಿಪರೀಕ್ಷೆ

ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಜಿಪಂ ಸಿಇಒ ಭೇಟಿ ಕೈಕೊಟ್ಟ ಥರ್ಮಲ್‌ ಸ್ಕ್ಯಾನರ್‌-ಪರೀಕ್ಷಾ ಕೇಂದ್ರದಲ್ಲಿ ಗೊಂದಲ

Team Udayavani, Jun 26, 2020, 12:26 PM IST

26-June-07

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಯಚೂರು: ಕೋವಿಡ್ ವೈರಸ್‌ ಹರಡದಂತೆ ಸಾಕಷ್ಟು ಮುಂಜಾಗ್ರತೆ ವಹಿಸುವ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿದರೂ ಅಲ್ಲಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾದವು.

ಗುರುವಾರದಿಂದ ಶುರುವಾದ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಪರೀಕ್ಷೆಗೆ ಮಕ್ಕಳನ್ನು ಬಿಡಲು ಬಂದ ಪಾಲಕ, ಪೋಷಕರಿಂದಲೇ ಸಾಮಾಜಿಕ ಅಂತರ ಮರೆಯಾಗಿತ್ತು. ಜಿಲ್ಲೆಯ 77 ಮುಖ್ಯ ಆರು ಉಪಕೇಂದ್ರ ಸೇರಿ 83 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಭಾಷೆ ಕನ್ನಡ ಮತ್ತು ಇಂಗ್ಲಿಷ್‌ ವಿಷಯದ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟಾರೆ 27,544 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರ ಪೈಕಿ 26,137 ವಿದ್ಯಾರ್ಥಿಗಳು ಹಾಜರಾಗಿದ್ದು, 1407 ವಿದ್ಯಾರ್ಥಿಗಳು ಗೈರಾಗಿದ್ದರು.

ಯಾವುದೇ ಡಿಬಾರ್‌ ಪ್ರಕರಣಗಳು ವರದಿಯಾಗಿಲ್ಲ. ಬಹುತೇಕ ಮಕ್ಕಳು ಮನೆಯಿಂದಲೇ ಮಾಸ್ಕ್ ಧರಿಸಿಕೊಂಡು ಬಂದಿದ್ದು ಕಂಡು ಬಂತು. ಯಾರು ತಂದಿಲ್ಲವೋ ಅವರಿಗೆ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲೇ ವಿತರಿಸಲಾಯಿತು. ಆದರೆ, ಮಕ್ಕಳನ್ನು ಸಾರಿಗೆ ಬಸ್‌ನಲ್ಲಿ ಕಳುಹಿಸದ ಪಾಲಕರು ಸ್ವಂತ ವಾಹನಗಳಲ್ಲೇ ಕರೆ ತಂದಿದ್ದರು.

ಪಾಲಕರು ಮಾತ್ರ ಮಾಸ್ಕ್ ಧರಿಸದೆ ಪರೀಕ್ಷಾ ಕೇಂದ್ರದ ಆವರಣದಲ್ಲಿ ಸಾಮಾಜಿಕ ಅಂತರವಿಲ್ಲದೇ ನಿಂತಿದ್ದು ಕಂಡು ಬಂತು. ಬಾಲಕಿಯರ ಪ್ರೌಢಶಾಲೆ ಮುಂಭಾಗ ಹೀಗೆ ಗುಂಪಾಗಿ ನಿಂತಿದ್ದ ಜನರನ್ನು ಪೊಲೀಸರು ಲಘು ಲಾಠಿ ಬೀಸುವ ಮೂಲಕ ಚದುರಿಸಬೇಕಾಯಿತು. ನಿಗದಿತ ಅವಧಿಗೆ ಪರೀಕ್ಷೆ ಶುರುವಾಯಿತಾದರೂ ಹಾಲ್‌ ಟಿಕೆಟ್‌ ನಲ್ಲಿ ಪರೀಕ್ಷಾ ಕೇಂದ್ರ ಹಾಗೂ ನೋಂದಣಿ ಸಂಖ್ಯೆ ತಪ್ಪಾಗಿ ದಾಖಲಿಸಿದ್ದಕ್ಕೆ ಕೆಲ ಪರೀಕ್ಷಾರ್ಥಿಗಳು ಪರದಾಡಿದ ಪ್ರಸಂಗ ನಡೆಯಿತು.

ಬಹುತೇಕ ಪರೀಕ್ಷಾ ಕೇಂದ್ರ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ನಗರದ ಟ್ಯಾಗೋರ್‌ ಸ್ಮಾರಕ ಮಹಾವಿದ್ಯಾಲಯ, ಲಯನ್ಸ್‌ ಕ್ಲಬ್ ಇಂಟರ್‌ನ್ಯಾಷನಲ್‌ ಸ್ಕೂಲ್‌, ಪೊಲೀಸ್‌ ಕಾಲೋನಿಯ ಸರಕಾರಿ ಉರ್ದು ಹಿರಿಯ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿ ಕಾರಿ ಆರ್‌.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷಿ¾àಕಾಂತ್‌ ರೆಡ್ಡಿ ಮತ್ತು ಬಿಇಒ ಚಂದ್ರಶೇಖರ ದೊಡ್ಡಮನಿ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.

ಟ್ಯಾಗೋರ್‌ ಪ.ಪೂ. ಕಾಲೇಜಿನ ಪರೀಕ್ಷಾ ಕೇಂದ್ರದ ಮುಂಭಾಗದಲ್ಲಿ ಜಿಲ್ಲಾಧಿಕಾರಿಗಳೆ ಖುದ್ದು ಥರ್ಮಲ್‌ ಸ್ಕ್ರೀನಿಂಗ್‌ ಮಷಿನ್‌ ಹಿಡಿದು ಪರೀಕ್ಷಿಸಿದರು. ನಂತರ ಎಲ್ಲ ಪರೀಕ್ಷಾ ಕೊಠಡಿಗಳನ್ನು ಪರೀಶಿಲಿಸಿದರು. ಅನುಮಾನ ವ್ಯಕ್ತವಾದ ವಿದ್ಯಾರ್ಥಿಗಳ ಉತ್ತರ ಹಾಗೂ ಪ್ರಶ್ನೆ ಪತ್ರಿಕೆ ಮತ್ತು ಹಾಲ್‌ ಟಿಕೆಟ್‌ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಸಿಸಿ ಕ್ಯಾಮೆರಾ ಕೊಠಡಿಗೆ ತೆರಳಿ ದೃಶ್ಯಗಳನ್ನು ವೀಕ್ಷಿಸಿದರು.

ಸೇವೆಯಿಂದ ಬಿಡುಗಡೆ: ಪೊಲೀಸ್‌ ಕಾಲೊನಿಯ ಸರ್ಕಾರಿ ಉರ್ದು, ಕನ್ನಡ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೆಂಕಟೇಶಕುಮಾರ, ಪರೀಕ್ಷಾ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಕೇಂದ್ರದಿಂದ ಹೊರಗೆ ಕಳುಹಿಸಿದರು. ಕೆಲವು ನಕಲು ಚೀಟಿ ಹಾಗೂ ಡೈಜಿಸ್ಟ್‌ ಗಳು ಬಿದ್ದಿರುವುದು ಕಂಡುಬಂತು. ಕೂಡಲೇ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಮೇಲ್ವಿಚಾರಕರನ್ನು ತರಾಟೆಗೆ ತೆಗೆದುಕೊಂಡರು. ಕೊಠಡಿ ಮೇಲ್ವಿಚಾರಕಿ ಶೀಲಾರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಸೂಚಿಸಿದರು. ಅವರ ವಿರುದ್ಧ ವರದಿ ನೀಡುವಂತೆ ಬಿಇಒಗೆ ಸೂಚಿಸಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.