16 ಪಾಸಿಟಿವ್ ಪ್ರಕರಣ ದೃಢ: 631ಕ್ಕೆ ಸೋಂಕಿತರ ಸಂಖ್ಯೆ ಏರಿಕೆ
Team Udayavani, Jul 10, 2020, 12:07 PM IST
ರಾಯಚೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 16 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 631 ಆಗಿದ್ದು, 442 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇನ್ನೂ 183 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ದೇವದುರ್ಗ ತಾಲೂಕಿನಿಂದ 84, ಲಿಂಗಸುಗೂರು ತಾಲೂಕಿನಿಂದ 57, ಮಾನ್ವಿ ತಾಲೂಕಿನಿಂದ 132, ಸಿಂಧನೂರು ತಾಲೂಕಿನಿಂದ 186 ಮತ್ತು ರಾಯಚೂರು ತಾಲೂಕಿನಿಂದ 154 ಸೇರಿದಂತೆ ಒಟ್ಟು 613 ಶಂಕಿತರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಲಾಗಿದ್ದ ವರದಿಗಳಲ್ಲಿ 317 ನೆಗೆಟಿವ್ ಆಗಿವೆ. ಈವರೆಗೆ 27,001 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸ ಲಾಗಿದ್ದು, ಅವುಗಳಲ್ಲಿ 23,916 ವರದಿಗಳು ನೆಗೆಟಿವ್ ಆಗಿವೆ. 2,447 ಸ್ಯಾಂಪಲ್ ಗಳ ಫಲಿತಾಂಶ ಬರಬೇಕಿದೆ.
ಫಿವರ್ ಕ್ಲಿನಿಕ್ಗಳಲ್ಲಿ ಗುರುವಾರ 688 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ. 135 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!