ಗಬ್ಬೂರು ತಾಲೂಕು ಕೇಂದ್ರ ರಚನೆಗೆ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ಸಮಿತಿ ಪ್ರತಿಭಟನೆ28ರಂದು ಗಬ್ಬೂರಿನಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ

Team Udayavani, Feb 26, 2020, 3:02 PM IST

26-February-17

ರಾಯಚೂರು: ಗಬ್ಬೂರನ್ನು ತಾಲೂಕು ಕೇಂದ್ರವನ್ನಾಗಿ ಕೂಡಲೇ ಘೋಷಿಸಲು ಆಗ್ರಹಿಸಿ ಗಬ್ಬೂರು ತಾಲೂಕು ರಚನೆ ಹೋರಾಟ ಸಮಿತಿ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಗಬ್ಬೂರು ಹೋಬಳಿ ಕೇಂದ್ರವಾಗಿ ಗುರುತಿಸಿಕೊಂಡಿದ್ದು, ಶೈಕ್ಷಣಿಕ ಮತ್ತು ವಾಣಿಜ್ಯ ಕೇಂದ್ರವಾಗಿದೆ. ತಾಲೂಕು ಕೇಂದ್ರವನ್ನಾಗಿ ಮಾಡಿದರೆ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಕೂಡಲೇ ಗಬ್ಬೂರು ತಾಲೂಕು ಕೇಂದ್ರ ರಚಿಸಿ ಘೋಷಿಸಬೇಕೆಂದು ಆಗ್ರಹಿಸಿದರು.

ದೇವದುರ್ಗ ತಾಲೂಕಿನ ಗಬ್ಬೂರು ಅತ್ಯಂತ ದೊಡ್ಡ ಹೋಬಳಿಯಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ವ್ಯವಹಾರಕ್ಕಾಗಿ ಗಬ್ಬೂರಿಗೆ ಆಗಮಿಸುತ್ತಾರೆ. ಈ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 100ಕ್ಕೂ ಅಧಿಕ ಗ್ರಾಮಗಳನ್ನೊಳಗೊಂಡಿದೆ. ನಾಡಕಚೇರಿ, ಆರೋಗ್ಯಕೇಂದ್ರ, ರೈತ ಸಂಪರ್ಕ ಕೇಂದ್ರ, ಪಶು ಆಸ್ಪತ್ರೆ, ಸಹಕಾರ ಸಂಘಗಳು, ವಾಣಿಜ್ಯ ಕೇಂದ್ರಗಳು, ನೀರಾವರಿ ಪ್ರದೇಶ, ಪೊಲೀಸ್‌ ಠಾಣೆ, ಶಾಲಾ ಕಾಲೇಜುಗಳು ಸೇರಿ ಎಲ್ಲ ಸೌಲಭ್ಯಗಳನ್ನು ಹೊಂದಿದೆ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದೆ. ಎಲ್ಲವೂ ಅನುಕೂಲಕರವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಪದವಿ ಕಾಲೇಜು ಪ್ರಾರಂಭವಾಗಬೇಕು. ಪ್ರಾಥಮಿಕ ಶಾಲೆಯಿಂದ ಪದವಿವರೆಗೆ ಮಹಿಳಾ ಶಾಲಾ ಕಾಲೇಜು ಸ್ಥಾಪಿಸಬೇಕು, ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ವೈದ್ಯರು ಮತ್ತು ಸಿಬ್ಬಂದಿ ನೇಮಿಸಬೇಕು. ಎನ್‌ಆರ್‌ಬಿಸಿ 18ನೇ ಉಪ ಕಾಲುವೆಯಿಂದ ಕೆಳ ಭಾಗದ ಜಮೀನುಗಳಿಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಐತಿಹಾಸಿಕ ಪ್ರದೇಶವಾದ ಗಬ್ಬೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸಬೇಕು ಎಂದು ಆಗ್ರಹಿಸಿದರು.

ನೀರಾವರಿ, ಆರೋಗ್ಯ, ಶಿಕ್ಷಣ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಫೆ.28ರಿಂದ ಗಬ್ಬೂರು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್‌ ಕಾಲ್ನಡಿಗೆ ಜಾಥಾ ನಡೆಸಲಾಗುವುದು ಎಂದು ತಿಳಿಸಿದರು.

ಹೋರಾಟ ಸಮಿತಿ ಮುಖಂಡರಾದ ಮಲ್ಲಪ್ಪಗೌಡ ಮಾಲಿಪಾಟೀಲ, ಬೂದಯ್ಯಸ್ವಾಮಿ ಹಿರೇಮಠ, ಶಾಂತಕುಮಾರ, ಬೂದಯ್ಯಸ್ವಾಮಿ, ಚೆನ್ನಪ್ಪಗೌಡ ಕಾತರಕಿ, ರಾಮಣ್ಣಕುಣಿ, ಶಿವರಾಜ, ನರಸಪ್ಪ, ರಾಜಪ್ಪ, ಪ್ರಭಾಕರ ಪಾಟೀಲ, ಸಿದ್ದಣ್ಣ, ಮಹೆಬೂಬ್‌, ಶಿವಣ್ಣ, ಶಂಕರಗೌಡ, ರಾಜಪ್ಪ ಶಿರವಾರಕರ್‌, ಮಾರೆಪ್ಪ ಹೊನ್ನಟಗಿ, ಉಮ್ಮಣ್ಣ ನಾಯಕ, ಬಸವರಾಜ, ಮಹೇಶ, ಗೋಪಾಲ ಇತರರು ಇದ್ದರು.

ಟಾಪ್ ನ್ಯೂಸ್

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

heavy rain; holiday for schools in dharwad

ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಶಕದ ಪ್ರಯತ್ನದ ಫಲ ಆರ್‌ಡಿಎ ಕಚೇರಿ

ದಶಕದ ಪ್ರಯತ್ನದ ಫಲ ಆರ್‌ಡಿಎ ಕಚೇರಿ

ಕೊಟ್ಟಿಗೆ ಗೊಬ್ಬರಕ್ಕೆ ಭಾರೀ ಬೇಡಿಕೆ

ಕೊಟ್ಟಿಗೆ ಗೊಬ್ಬರಕ್ಕೆ ಭಾರೀ ಬೇಡಿಕೆ

18water

ಕೊಚ್ಚೆ ನೀರು ನಿಲ್ಲದಂತೆ ಎಚ್ಚರ ವಹಿಸಿ

16JDS

ಶಾಸಕ ಶಿವನಗೌಡ ಅಸಭ್ಯ ವರ್ತನೆಗೆ ಜೆಡಿಎಸ್‌ ಖಂಡನೆ

ಮತ್ತೆ ಅಧಿಕಾರಿ ಮೇಲೆ ಶಾಸಕ ಶಿವನಗೌಡ ದರ್ಪ

ಮತ್ತೆ ಅಧಿಕಾರಿ ಮೇಲೆ ಶಾಸಕ ಶಿವನಗೌಡ ದರ್ಪ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

2

ಎಸ್ಸೆಸ್ಸೆಲ್ಸಿ; ಶೇ.84.95 ಫಲಿತಾಂಶ ದಾಖಲು- ಎ ಗ್ರೇಡ್ ಪಟ್ಟಿಯಲ್ಲಿ ಸ್ಥಾನ ಪಡೆದ ಧಾರವಾಡ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

bc-road

ಬಿ.ಸಿ.ರೋಡ್‌: ನೀರಲ್ಲೇ ಬಸ್‌ಗೆ ಕಾಯಬೇಕಾದ ಸ್ಥಿತಿ

manikkara

ಅಂದು ಬಿಸಿಲಾಯಿತು ಇಂದು ಮಳೆಗೆ ಒದ್ದೆಯಾಗಿ ಪಾಠ ಕೇಳುವ ಸ್ಥಿತಿ

kallumutlu

ವಿವಿಧೆಡೆ ಮುಂದುವರಿದ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.