23ರಂದು ಜಿಲ್ಲಾಮಕ್ಕಳ ಸಾಹಿತ್ಯ ಸಮ್ಮೇಳನ


Team Udayavani, Jan 17, 2020, 1:34 PM IST

Udayavani Kannada Newspaper

ರಾಯಚೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದಿಂದ ಜ.23ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‌ ಜಿಲ್ಲಾ ಗೌರವಾಧ್ಯಕ್ಷ ಪರಮೇಶ್ವರ ಸಾಲಿಮಠ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಬೆಳೆಸಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರಲ್ಲಿ ಅಡಗಿದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಬೇಕು ಎನ್ನುವ ಕಾರಣಕ್ಕೆ ನಗರದಲ್ಲಿ ಮೊದಲ ಬಾರಿಗೆ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಮಾನ್ವಿ ಕಲ್ಮಠ ಪದವಿ ಪೂರ್ವ ಕಾಲೇಜಿನ ಭಾರ್ಗವಿ ದೇಸಾಯಿ ಅವರನ್ನು ಸಮ್ಮೇಳನಾಧ್ಯಕ್ಷೆಯನ್ನಾಗಿ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಅಯ್ಯಪ್ಪಯ್ಯ ಹುಡಾ ಅವರನ್ನು ಆಯ್ಕೆ ಮಾಡಲಾಗಿದೆ.

ಸಮ್ಮೇಳನದ ಸಹ ಅಧ್ಯಕ್ಷರ್‍ನಾಗಿ ಕವಿತಾಳದ ಬಸಲಿಂಗಪ್ಪ, ಬಾಯಿದೊಡ್ಡಿಯ ಸವಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ವೇದಿಕೆಗೆ ಶ್ರೀ ಸಿದ್ಧಯ್ಯ ಪುರಾಣಿಕರ ಹೆಸರಿಡಲಾಗಿದೆ ಎಂದು ವಿವರಿಸಿದರು.

ಮೊದಲ ಬಾರಿಗೆ ಹಮ್ಮಿಕೊಂಡ ಕಾರ್ಯಕ್ರಮ ಇದಾಗಿದ್ದು, ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಅಂದು ಬೆಳಗ್ಗೆ 9ಕ್ಕೆ ನಗರದ ಡಾ| ಅಂಬೇಡ್ಕರ್‌ ವೃತ್ತದಿಂದ ರಂಗಮಂದಿರದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಮೆರವಣಿಗೆಗೆ ನಗರ ಶಾಸಕ ಡಾ| ಶಿವರಾಜ ಪಾಟೀಲ ಚಾಲನೆ ನೀಡುವರು. ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಧಾರವಾಡದ ಕಾದಂಬರಿಕಾರ ಡಾ| ಬಸು ಬೇವಿನ ಗಿಡದ ಉದ್ಘಾಟಿಸುವರು. ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಗಾಯಕಿ ಸೋಮನಮರಡಿಯ ಮೋನಮ್ಮ, ಪ್ರಧಾನಿ ಜತೆ ಚಂದ್ರಯಾನ ವೀಕ್ಷಿಸಿದ ವೈಷ್ಣವಿ ಅವರನ್ನು ವಿಶೇಷ ಆಹ್ವಾನಿತರನ್ನಾಗಿ ಆಯ್ಕೆ ಮಾಡಲಾಗಿದೆ. ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕರಾದ ಡಾ| ಶಿವರಾಜ ಪಾಟೀಲ, ದದ್ದಲ್‌ ಬಸವನಗೌಡ, ಕೆ.ಶಿವನಗೌಡ ನಾಯಕ, ವೆಂಕಟರಾವ್‌ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಡಿ.ಎಸ್‌.ಹೂಲಗೇರಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ
ಸೇರಿ ಇತರ ಗಣ್ಯರು ಆಗಮಿಸುವರು ಎಂದು ತಿಳಿಸಿದರು.

ಮಕ್ಕಳೇ ಪ್ರತಿಯೊಂದು ಚಟುವಟಿಕೆ ನಿರ್ವಹಣೆ ಮಾಡುವುದು ಈ ಸಮ್ಮೇಳನದ ವಿಶೇಷತೆ. ವಿಚಾರಗೋಷ್ಠಿ, ಕವಿಗೋಷ್ಠಿ, ಚಿತ್ರಕಲಾ ಪ್ರದರ್ಶನ, ಕವನ ಸಂಕಲನ ಬಿಡುಗಡೆ, ಮಕ್ಕಳ ಕಥಾ ಸಂಕಲನ ಲೋಕಾರ್ಪಣೆ ಸೇರಿದಂತೆ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಶಿಕ್ಷಕರಿಗೆ ಒಂದು ದಿನ ರಜೆ ನೀಡಲು ಶಿಕ್ಷಣ ಇಲಾಖೆ ಸಮ್ಮತಿಸಿದೆ ಎಂದು ತಿಳಿಸಿದರು. ಮಕ್ಕಳ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಶಂಕರದೇವರು ಹಿರೇಮಠ, ಸದಸ್ಯರಾದ ವೆಂಕಟೇಶ, ಬ್ರಹ್ಮಾನಂದರೆಡ್ಡಿ, ಈರಣ್ಣ ಬೆಂಗಾಲಿ ಇತರರಿದ್ದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.