ನಗರದತ್ತ ಹರಿದು ಬಂದ ಜನಸಂದಣಿ

ಅಂಗಡಿ ಮಳಿಗೆಗಳಿಗೆ ಹಸಿರು-ಹಳದಿ-ಕೆಂಪು ಗುರುತುಕಲರ್‌ ಕೋಡ್‌ ಮೂಲಕ ವಹಿವಾಟಿಗೆ ಸೂಚನೆ 

Team Udayavani, Apr 30, 2020, 12:11 PM IST

30-April-06

ರಾಯಚೂರು: ವ್ಯಾಪಾರ ಮಳಿಗೆ ಮುಂಭಾಗ ಹಸಿರು ಬಣ್ಣ ಬಳಿದ ನಗರಸಭೆ ಸಿಬ್ಬಂದಿ.

ರಾಯಚೂರು: ಲಾಕ್‌ಡೌನ್‌ ಸಿಡಿಲಿಕೆಗಾಗಿ ಕಾದು ಕುಳಿತಿದ್ದ ಜನರು ಬುಧವಾರ ನಗರಕ್ಕೆ ಪುಂಖಾನುಪುಂಖವಾಗಿ ಆಗಮಿಸಿದರು. ಸಾಕಷ್ಟು ವ್ಯವಹಾರಗಳಿಗೆ ಆಸ್ಪದ ನೀಡದಿದ್ದರೂ ನಗರದಲ್ಲಿ ಜನದಟ್ಟಣೆಗೆ ಕೊರತೆ ಕಂಡು ಬರಲಿಲ್ಲ.

ಚಂದ್ರಮೌಳೇಶ್ವರ, ತೀನ್‌ ಕಂದಿಲ್‌, ಸ್ಟೇಶನ್‌ ರಸ್ತೆ, ಮಹಾವೀರ ಸರ್ಕಲ್‌ ಸೇರಿ ವಿವಿಧ ಸ್ಥಳಗಳಲ್ಲಿ ಜನಜಂಗುಳಿ ಹೆಚ್ಚಾಗಿತ್ತು. ಈ ಮುಂಚೆ ಕೃಷಿ ಮತ್ತು ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಬಳಿಕ ಕೊರೊನಾ ವೈರಸ್‌ ಪ್ರಕರಣಗಳಿಲ್ಲದ ಕಾರಣಕ್ಕೆ ಹಸಿರು ವಲಯವನ್ನಾಗಿ ಗುರುತಿಸಿದ್ದರಿಂದ ಕೆಲವೊಂದು ಷರತ್ತುಗಳನ್ವಯ ಲಾಕ್‌ಡೌನ್‌ ಸಡಿಲಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಹಿವಾಟು ನಡೆಸಬೇಕು ಎಂಬ ಕಟ್ಟೆಚ್ಚರ ನೀಡಲಾಗಿದೆ.

ಇದರಿಂದ ಅನೇಕ ಅಂಗಡಿ ಮುಂಗಟ್ಟುಗಳನ್ನು ತೆರಯಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಸಾಲುಗಟ್ಟಿದ್ದಾರೆ. ಮಾಲ್‌ಗ‌ಳು ಭರ್ತಿಯಾಗಿದ್ದವು. ಬೈಕ್‌, ಕಾರುಗಳ ಓಡಾಟ ಹೆಚ್ಚಾಗಿತ್ತು. ಆದರೆ, ಆಟೋಗಳಾಗಲಿ, ಸಾರಿಗೆ ಬಸ್‌ಗಳಾಗಲಿ ರಸ್ತೆಗೆ ಇಳಿಯಲಿಲ್ಲ. ಬಟ್ಟೆ ಅಂಗಡಿಗಳಾಗಲಿ, ಆಭರಣ ಅಂಗಡಿಗಳಾಗಲಿ ತೆರೆಯದ ಕಾರಣ ತುಸು ನಿರಾಳತೆ ಕಂಡು ಬಂತು.

ಕಲರ್‌ ಕೋಡ್‌ ಜಾರಿ
ಲಾಕ್‌ಡೌನ್‌ ವಿನಾಯಿತಿ ನೀಡಿದ ಮಾತ್ರಕ್ಕೆ ಮೈ ಮರೆಯದ ಜಿಲ್ಲಾಡಳಿತ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜನ ಮತ್ತು ವರ್ತಕರ ಹಿತದೃಷ್ಟಿಯಿಂದ ಕಲರ್‌ ಕೋಡ್‌ ಪದ್ಧತಿ ಜಾರಿಗೊಳಿಸಿದೆ. ನಗರದಲ್ಲಿರುವ ಅಂಗಡಿ ಮಳಿಗೆಗಳಿಗೆ ಹಸಿರು, ಹಳದಿ, ಕೆಂಪು ಬಣ್ಣಗಳ ಗುರುತು ಹಾಕಲಾಗುತ್ತಿದೆ. ಯಾವ ಬಣ್ಣದ ಗುರುತು ಉಳ್ಳವರು ಯಾವ ದಿನ ವಹಿವಾಟು ನಡೆಸಬೇಕು ಎಂದು ನಿರ್ದೇಶನ ನೀಡಿದೆ. ಆ ಮೂಲಕ ಜನದಟ್ಟಣೆ ಕಡಿಮೆ ಮಾಡುವ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ತಂತ್ರ ಅನುಸರಿಸಿದೆ. ಹಸಿರು ಬಣ್ಣ ಬಳಿದಿರುವ ಅಂಗಡಿಗಳು ಸೋಮವಾರ ಮತ್ತು ಗುರುವಾರ ತೆರೆಯಬೇಕು. ಹಳದಿ ಬಣ್ಣ ಬಳೆದಿರುವ ಅಂಗಡಿಗಳು ಮಂಗಳವಾರ ಮತ್ತು ಶುಕ್ರವಾರ, ಕೆಂಪು ಬಣ್ಣ ಬಳೆದಿರುವ ಅಂಗಡಿಗಳು ಬುಧವಾರ, ಶನಿವಾರ ತೆರೆಯಬೇಕು ವಹಿವಾಟು ನಡೆಸಬೇಕು ಎಂದು ತಿಳಿಸಲಾಗಿದೆ.

ನಗರದ ಮೂರು ಸಾವಿರಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳಿಗೆ ಹಸಿರು, ಕೆಂಪು, ಹಳದಿ ಬಣ್ಣ ಬಳಿದು ವ್ಯಾಪಾರ ವಹಿವಾಟಿಗೆ ಅನುವು ಮಾಡಿಕೊಡಲಾಗು ವುದು. ಎಲ್ಲ ವ್ಯಾಪಾರಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾನಿಟೈಸರ್‌ ಬಳಸ ಬೇಕು. ಅಂಗಡಿ ಮಾಲೀಕರು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ತಿಳಿಸಲಾಗುತ್ತಿದೆ.
ಡಾ| ದೇವಾನಂದ ದೊಡ್ಡಮನಿ,
ನಗರಸಭೆ ಪೌರಾಯುಕ್ತ

ಟಾಪ್ ನ್ಯೂಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18social

ಶಿಕ್ಷಣದಿಂದ ಮಾತ್ರ ಸಮಾಜ ಅಭಿವೃದ್ದಿ

17report

20ರಂದು ಮಾನ್ವಿ ಬಂದ್‌ಗೆ ಕರೆ

16education

ಶಿಕ್ಷಣದಿಂದ ವ್ಯಕ್ತಿಯ ಸಮಗ್ರ ಅಭಿವೃದ್ದಿ

15water

ಅನಧಿಕೃತ ಶುದ್ಧ ನೀರಿನ ಘಟಕಕ್ಕೆ ವಿದ್ಯುತ್‌ ಸ್ಥಗಿತ

14economic

ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಕೊಡುಗೆ ಅಪಾರ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

1

2.08 ಲಕ್ಷ ಕ್ವಿಂಟಲ್‌ ಕಡಲೆ ಖರೀದಿ

bottadka

ಕಡಬ:ಬೊಟ್ಟಡ್ಕದಲ್ಲಿ ಆಗಬೇಕಿದೆ ರೈಲ್ವೇ ಅಂಡರ್‌ಪಾಸ್‌

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.