34 ಸೋಂಕಿತರು ಗುಣಮುಖ-ಬಿಡುಗಡೆ

ರೋಗಿಗಳ ಮುಖದಲ್ಲಿ ಮಂದಹಾಸ |ನಿಟ್ಟುಸಿರು ಬಿಟ್ಟ ಎಡೆದೊರೆ ನಾಡಿನ ಜನರು

Team Udayavani, Jun 1, 2020, 10:45 AM IST

01-June-24

ಸಾಂದರ್ಭಿಕ ಚಿತ್ರ

ರಾಯಚೂರು: ಒಪೆಕ್‌ ಆಸ್ಪತ್ರೆ ಐಸೋಲೇಶನ್‌ ವಾರ್ಡ್‌ನಲ್ಲಿ ದಾಖಲಾಗಿದ್ದ 34 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ರವಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ರೋಗಿಗಳ ಮುಖದಲ್ಲಿ ಮಂದಹಾಸ ಮೂಡಿದ್ದರೆ, ಜಿಲ್ಲೆಯ ಜನ ನಿಟ್ಟುಸಿರು ಬಿಡುವಂತಾಗಿದೆ.

ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ರೋಗಿಗಳ ಮೇಲೆ ಪುಷ್ಪವೃಷ್ಟಿ ಮಾಡಿ ಆಸ್ಪತ್ರೆಯಿಂದ ಬೀಳ್ಕೊಟ್ಟರು. ಬಳಿಕ ಆಂಬುಲೆನ್ಸ್‌ ಮೂಲಕ ಅವರ ಮನೆಗೆ ಕಳುಹಿಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ಜಿಲ್ಲೆಯಲ್ಲಿ ಮೇ 17ರಿಂದ ಸೋಂಕು ಹರಡಿದೆ. ಸೋಂಕಿತರನ್ನು ಒಪೆಕ್‌ ಆಸ್ಪತ್ರೆಯಲ್ಲಿರುವ ಐಸೋಲೇಶನ್ ವಾರ್ಡ್‌ಗೆ ಸ್ಥಳಾಂತರಿಸಿ 14 ದಿನ ಚಿಕಿತ್ಸೆ ನೀಡಲಾಗಿತ್ತು. ಅದರಲ್ಲಿ 34 ಜನ ಸಂಪೂರ್ಣ ಗುಣಮುಖರಾಗಿದ್ದಾರೆ. ಎರಡನೇ ವರದಿ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ನಂತರ ಗುಣಮುಖರಾದವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ರಾಯಚೂರು ನಗರ, ಆಟೋ ನಗರ, ಮಡ್ಡಿಪೇಟೆ, ಮಂದಕಲ್‌ ಗ್ರಾಮಕ್ಕೆ ಸೇರಿದ ಕೋವಿಡ್ ಸೋಂಕಿತರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಹೊಂದಿರುವವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರೆಂಟೈನ್‌ ನಲ್ಲಿಯೇ ಇರಬೇಕು. ಅವರ ಕೈಗಳ ಮೇಲೆ ಮುದ್ರೆ ಹಾಕಿ ಕಳುಹಿಸಲಾಗುತ್ತಿದೆ. ಹೊರಗೆ ಓಡಾಡಿದಲ್ಲಿ ಜನರಿಗೆ ತಿಳಿಯುತ್ತದೆ. ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಬಿಡುಗಡೆ ಹೊಂದಿರುವ ಸೋಂಕಿತರು ಮನೆಯಲ್ಲಿರಬೇಕು. ಯಾರ ಸಂಪರ್ಕಕ್ಕೆ ಹೋಗಬಾರದು. ಅವರ ಮೇಲೆ ನಿಗಾವಹಿಸಲು ಪೊಲೀಸರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ನಿತ್ಯ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸುವರು. ಸಂಬಂಧಿಸಿದವರಿಗೆ ಬಿಡುಗಡೆಯಾದವರ ಪಟ್ಟಿ ಈಗಾಗಲೇ ನೀಡಲಾಗಿದೆ. ರಾಯಚೂರು ತಾಲೂಕಿನ ಹೊಸ ಮಲಿಯಬಾದ್‌ ಗ್ರಾಮದ ಎರಡು ವರ್ಷದ ಬಾಲಕಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಮಲಿಯಬಾದ್‌ ಗ್ರಾಮದಲ್ಲಿ ಕಂಟೆನ್ಮೆಂಟ್‌ ಝೋನ್‌ 28 ದಿನ ಮುಂದುವರಿಯಲಿದೆ. ಇನ್ನೂ ಮಹಾರಾಷ್ಟ್ರದಿಂದ ಇನ್ನೂ ಜಿಲ್ಲೆಗೆ ಆಗಮಿಸಲು 200ಕ್ಕೂ ಹೆಚ್ಚು ಅರ್ಜಿಗಳು ಬಾಕಿಯಿವೆ. ಸರಿ ಸುಮಾರು 1500 ಜನ ಬರುವ ನಿರೀಕ್ಷೆಯಿದೆ ಎಂದು ಹೇಳಿದರು.

ದೇವದುರ್ಗ ತಾಲೂಕು ಕೋತಿ ಗುಡ್ಡದಲ್ಲಿ ಮೃತ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ ನಿಯಾವಳಿಯಂತೆ ಶವಸಂಸ್ಕಾರ ಮಾಡಲಾಗಿದೆ. ಶವ ಸಂಸ್ಕಾರ ದಲ್ಲಿ ಭಾಗಿಯಾದವರ ಮೇಲೆ ನಿಗಾವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ರಿಮ್ಸ್ ಡೀನ್‌ ಡಾ| ಬಸವರಾಜ ಪೀರಾಪುರ, ಒಪೆಕ್‌ ವಿಶೇಷಾಧಿಕಾರಿ ಡಾ| ನಾಗರಾಜ ಗದ್ವಾಲ್‌, ಜಿಲ್ಲಾ ಸರ್ಜನ್‌ ಡಾ| ವಿಜಯ ಶಂಕರ, ಡಿಎಸ್‌ಒ ಡಾ| ನಾಗರಾಜ ಇದ್ದರು.

ಟಾಪ್ ನ್ಯೂಸ್

Kane Williamson

ಐಸಿಸಿ ವರ್ಷದ ಟೆಸ್ಟ್ ತಂಡ ಪ್ರಕಟ: 3 ಭಾರತೀಯರಿಗೆ ಸ್ಥಾನ, ವಿರಾಟ್ ಗೆ ಜಾಗವಿಲ್ಲ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

cm-bomm

ನೈಟ್ ಕರ್ಫ್ಯೂ ಸಡಿಲಿಕೆ : ಇಕ್ಕಟ್ಟಿನಲ್ಲಿ ಸಿಎಂ,ಬೆಂಬಲಕ್ಕೆ ಅಶೋಕ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16crushed

ಬಿರುಗಾಳಿಗೆ ನೆಲಕಚ್ಚಿದ ಜೋಳ

15corn

ಜೋಳದ ನಿರ್ಬಂಧ ತೆರವಿಗೆ ಚರ್ಚೆ

14covid

ರಾಯಚೂರಿನಲ್ಲಿ ಸೋಂಕಿನ ವೇಗ ಹೆಚ್ಚಾ ದರೂ ತೀವ್ರತೆ ಕಡಿಮೆ

ರತಯುಇಒಕಜಹಗ್ದಸ

ಪುರಸಭೆ ಅಧ್ಯಕ್ಷೆಯಾಗಿ ಸುನೀತಾ ಆಯ್ಕೆ

ದರತಯುಇತುಕಮಬವಚಷ

ನಿವೃತ್ತ ನೌಕರರಿಗೆ ವಂಚಕರ ಹೊಂಚು!

MUST WATCH

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

ಹೊಸ ಸೇರ್ಪಡೆ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

Kane Williamson

ಐಸಿಸಿ ವರ್ಷದ ಟೆಸ್ಟ್ ತಂಡ ಪ್ರಕಟ: 3 ಭಾರತೀಯರಿಗೆ ಸ್ಥಾನ, ವಿರಾಟ್ ಗೆ ಜಾಗವಿಲ್ಲ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.