ಕೈಗೂಡಿದ ಪ್ರತ್ಯೇಕ ವಿವಿ ಆಸೆ

ರಾಯಚೂರು-ಯಾದಗಿರಿ ಜಿಲ್ಲೆ ವಿದ್ಯಾರ್ಥಿಗಳಿಗೆ ಅನುಕೂಲ

Team Udayavani, May 6, 2020, 3:30 PM IST

Udayavani Kannada Newspaper

ರಾಯಚೂರು: ಬಹುವರ್ಷಗಳ ಬೇಡಿಕೆಯಾಗಿದ್ದ ರಾಯಚೂರು ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಫನೆಗೆ ಕೊನೆಗೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಆ ಮೂಲಕ ಈ ಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗೆ ಇತಿ ಹಾಡಿದಂತಾಗಿದೆ.

ಅಂದುಕೊಂಡಂತೆ ಆಗಿದ್ದರೆ 2017ರಲ್ಲಿಯೇ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕಿತ್ತು. ಆದರೆ, ಆಗಿನ ಕಾಂಗ್ರೆಸ್‌ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ರಾಜ್ಯಪಾಲರು ತಿರಸ್ಕರಿಸುವ ಮೂಲಕ ನನೆಗುದಿಗೆ ಬೀಳುವಂತಾಯಿತು. ಅದಾದ ಬಳಿಕ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ಮುಂದಾದರೂ ರಾಜ್ಯಪಾಲರು ತಿರಸ್ಕರಿಸಿದ್ದು, ಅಚ್ಚರಿ ಮೂಡಿಸಿತ್ತು. ಅಷ್ಟರಲ್ಲೇ ಸರ್ಕಾರ ಬದಲಾಗಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೂ ಪ್ರತ್ಯೇಕ ವಿವಿ ಬೇಡಿಕೆ ಈಡೇರಲಿಲ್ಲ. ಆದರೆ, ಪ್ರತಿ ಶೈಕ್ಷಣಿಕ ವರ್ಷ ಬಂದಾಗಲೂ ಪ್ರತ್ಯೇಕ ವಿವಿ ಸ್ಥಾಪನೆ ಬೇಡಿಕೆ ಮುನ್ನೆಲೆಗೆ ಬರುತ್ತಿತ್ತು. ಈಗ ಅನಿರೀಕ್ಷಿತವಾಗಿ ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ತಿದ್ದುಪಡಿ ಅಧಿನಿಯಮ 2020ಕ್ಕೆ ಅಂಕಿತ ಹಾಕುವ ಮೂಲಕ ವಿವಿ ಸ್ಥಾಪನೆಗೆ ಮುಂದಾಗಿದ್ದಾರೆ.

ಸಿಬ್ಬಂದಿ-ಸೌಲಭ್ಯ ಕೊರತೆ: ಈಗಾಗಲೇ ಯರಗೇರಾ ಸ್ನಾತಕೋತ್ತರ ಕೇಂದ್ರದಲ್ಲಿ 17 ಕೋರ್ಸ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ, ಇಲ್ಲಿರುವುದು ಕೇವಲ ಮೂವರು ಕಾಯಂ ಪ್ರಾಧ್ಯಾಪಕರಿದ್ದಾರೆ. 70 ಅತಿಥಿ ಉಪನ್ಯಾಸಕರ ನೆರವಿನಿಂದಲೇ ಬೋಧಿಸಲಾಗುತ್ತಿದೆ. ಬಹುಶ ಈ ವರ್ಷದಿಂದ ವಿವಿ ಆರಂಭವಾದರೂ ಪರಿಪೂರ್ಣ ಪ್ರಮಾಣದಲ್ಲಿ ಸೇವೆ ನೀಡುವುದು ಕಷ್ಟಸಾಧ್ಯ. ಪ್ರತ್ಯೇಕ ವಿವಿ ಸ್ಥಾಪನೆ ಆದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆ ವ್ಯಾಪ್ತಿಯ 156ಕ್ಕೂ ಅಧಿಕ ಕಾಲೇಜ್‌ಗಳು ಒಳಪಡಲಿವೆ. ಈಗ ಇರುವ ಕಟ್ಟಡಗಳಲ್ಲೇ ಎಲ್ಲ ಕೋರ್ಸ್‌ ನಡೆಸಲಾಗುತ್ತಿದೆ. ಎಲ್ಲ ವಿಭಾಗಗಳಿಗೆ ಕಾಯಂ ಸಿಬ್ಬಂದಿ ನೇಮಕ, ಅಗತ್ಯ ಮೂಲ ಸೌಲಭ್ಯ ಸೇರಿದಂತೆ ಸಾಕಷ್ಟು ಸೌಲಭ್ಯ ನೀಡಬೇಕಿದ್ದು, ಅದಕ್ಕೆ ಇನ್ನೊಂದೆರಡು ವರ್ಷ ಬೇಕು ಎನ್ನಲಾಗುತ್ತಿದೆ.

ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದೆ. ಸರ್ಕಾರ ಪ್ರಸಕ್ತ ವರ್ಷದ ಶೈಕ್ಷಣಿಕ ವರ್ಷದಿಂದಲೇ ರಾಯಚೂರು ಪ್ರತ್ಯೇಕ ವಿವಿ ಆರಂಭಿಸಲಿದೆ. ಕೋವಿಡ್ ನಿಂದಾಗಿ ಶೈಕ್ಷಣಿಕ ವರ್ಷವನ್ನು ಸೆಪ್ಟೆಂಬರ್‌ನಿಂದ ಆರಂಭಿಸಲು ಯುಜಿಸಿ ಸೂಚಿಸಿದ್ದರಿಂದ ಅಗತ್ಯ ಸೌಲಭ್ಯ ಕಲ್ಪಿಸಲು ಕಾಲಾವಕಾಶ ಸಿಗಲಿದೆ.
ಡಾ| ಶಿವರಾಜ ಪಾಟೀಲ,
ನಗರ ಶಾಸಕ

ಯರಗೇರಾ ಸ್ನಾತಕೋತ್ತರ ಕೇಂದ್ರದಲ್ಲಿ 17 ಕೋರ್ಸ್‌ಗಳಿದ್ದು, ಮುಖ್ಯವಾಗಿ ಸಿಬ್ಬಂದಿ ಕೊರತೆ ಇದೆ. ಬಹುಶಃ ಈ ವರ್ಷ ವಿವಿ ಸ್ಥಾಪನೆಯಾದರೂ ಮುಂದಿನ ವರ್ಷದಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭವಾಗಬಹುದು.
ಪ್ರೊ| ಪಾರ್ವತಿ ಸಿ.ಎಸ್‌.,
ವಿಶೇಷಾಧಿಕಾರಿ ಯರಗೇರಾ ಪಿಜಿ ಸೆಂಟರ್

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21police

ಡಿವೈಎಸ್ಪಿ ದೇವರಾಜ ಅಧಿಕಾರ ಸ್ವಿಕಾರ

20bus

ಬಸ್‌ ಸೌಲಭ್ಯ ಕಲ್ಪಿಸಲು ಕಕ ಸಾರಿಗೆ ನಿಗಮಕ್ಕೆ ಮನವಿ

19lack

ಸಂತ್ರಸ್ತ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಭರವಸೆ

18covid

ಲಸಿಕಾಕರಣದಲ್ಲಿ ಭಾರತ ಐತಿಹಾಸಿಕ ಸಾಧನೆ

15mahatoshree

ಅನುಭಾವದ ಸಾಹಿತ್ಯಕ್ಕೆ ಮನ್ನಣೆ: ಮಾತೋಶ್ರೀ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.