ವೇಮನ ವಚನಗಳು ಬದುಕಿಗೆ ಮಾರ್ಗದರ್ಶಿ

ಸಸಿ ನೆಟ್ಟು ಮಹಾಯೋಗಿಯ ಜಯಂತಿ ಆಚರಣೆ-ಭಾವಚಿತ್ರ ಮೆರವಣಿಗೆ ವೇಮನ ಭಾವಚಿತ್ರಕ್ಕೆ ಗಣ್ಯರ ಗೌರವ

Team Udayavani, Jan 20, 2020, 1:20 PM IST

20-January-8

ರಾಯಚೂರು: ಸಮಾಜ ಸುಧಾರಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಅನೇಕ ಮಹಾಮಹಿಮರಲ್ಲಿ ಮಹಾಯೋಗಿ ಶ್ರೀ ವೇಮನರು ಕೂಡ ಒಬ್ಬರು. ಸಮಾಜಕ್ಕಾಗಿ ಅವರು ಮಾಡಿದ ಶ್ರಮ ಎಂದಿಗೂ ಮರೆಯಬಾರದು ಎಂದು ಕಲಬುರಗಿ ಲೇಖಕ ಮಹಿಪಾಲರೆಡ್ಡಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರವಿವಾರ ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹಾಯೋಗಿ ವೇಮನ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಮಹಾಯೋಗಿ ಶ್ರೀ ವೇಮನರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಅವರು ಇಡೀ ಮನುಕುಲಕ್ಕೆ ಒಳಿತು ಮಾಡಿದ ಮಹಾನುಭಾವರು ಎಂದರು.

ವೇಮನ ಅವರು ತೆಲುಗು ಭಾಷೆಯಲ್ಲಿ 15 ಸಾವಿರಕ್ಕೂ ಅಧಿಕ ಪದ್ಯಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಬಹುತೇಕವನ್ನು ಇಂಗ್ಲಿಷ್‌ ಭಾಷೆಗೆ ಅನುವಾದ ಮಾಡಲಾಗಿದೆ. ಬ್ರಿಟಿಷ್‌ ಅಧಿಕಾರಿ ಸಿ.ಟಿ.ಬ್ರೌನ್‌ ಅವರು ವೇಮನರ ಪದ್ಯಗಳನ್ನು ಇಂಗ್ಲಿಷ್‌ಗೆ ಅನುವಾದ ಮಾಡುವ ಮೂಲಕ ಇಡೀ ವಿಶ್ಚಕ್ಕೆ ಪರಿಚಯಿಸಿದ್ದಾರೆ ಎಂದರು.

ವೇಮನರು ಐದು ಸಾವಿರ ವಚನಗಳನ್ನು ಬರೆದಿದ್ದಾರೆ. ಅವರು ಬರೆದ ವಚನಗಳು ಮತ್ತು ಪದ್ಯಗಳು ಇಡೀ ಜಗತ್ತಿಗೆ ಬೆಳಕು ನೀಡಿವೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ವಿಶ್ವವಿದ್ಯಾಲಯ ಒಂದಕ್ಕೆ ವೇಮನ ಅವರ ಹೆಸರಿಡಲಾಗಿದೆ. ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಹೇಮರೆಡ್ಡಿ ಮಲ್ಲಮ್ಮ ಅವರ ಅಧ್ಯಯನ ಪೀಠ ಸ್ಥಾಪಿಸಿದ್ದರೆ, ಧಾರವಾಡದ ವಿಶ್ವವಿದ್ಯಾಲಯದಲ್ಲಿ ವೇಮನರ ಅಧ್ಯಯನ ಪೀಠ ಸ್ಥಾಪಿಸುವ ಮೂಲಕ ಅವರ ಕುರಿತು ಅಧ್ಯಯನ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌ ಮಾತನಾಡಿ, ಮಹಾಯೋಗಿ ವೇಮನರು ಒಂದು ಸಮುದಾಯದ ಆಸ್ತಿಯಲ್ಲ, ಅವರು ಇಡೀ ಭಾರತದ ಆಸ್ತಿ. ಸರ್ಕಾರ ಮಹಾನ್‌ ನಾಯಕರ ಜಯಂತಿಗಳನ್ನು ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವಂತೆ ತಿಳಿಸುತ್ತಿದೆ. ಇಂದಿನ ಆಧುನಿಕ ಯುಗದಲ್ಲಿ ಅಂಥವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು.

ನಗರ ಶಾಸಕ ಡಾ| ಶಿವರಾಜ ಪಾಟೀಲ ಮಾತನಾಡಿ, ಇಂಥ ಕಾರ್ಯಕ್ರಮಗಳಿಗೆ ಇತರೆ ಸಮುದಾಯದ ಮುಖಂಡರನ್ನು ಸಹ ಆಹ್ವಾನಿಸಬೇಕು ಎಂದರು. ಎಡಿಸಿ ದುರುಗೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳಾ ನಾಯಕ, ಸಮಾಜದ ಮುಖಂಡರಾದ ರಾಮಚಂದ್ರರೆಡ್ಡಿ, ಜಿ.ಗೋಪಾಲರೆಡ್ಡಿ, ಗಿರೀಶ ಪಾಟೀಲ, ನಗರಸಭೆ ಸದಸ್ಯ ರಮೇಶ, ಬಸನಗೌಡ ಇತರರಿದ್ದರು.

ಭಾವಚಿತ್ರ ಮೆರವಣಿಗೆ: ಶ್ರೀ ಮಹಾಯೋಗಿ ವೇಮನರ ಜಯಂತಿ ಅಂಗವಾಗಿ ವಿಜೃಂಭಣೆಯಿಂದ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಮಹಾಯೋಗಿ ವೇಮನ ಭಾವಚಿತ್ರಕ್ಕೆ ಪೂಜೆ ಮತ್ತು ಮಾಲಾರ್ಪಣೆ ಮಾಡುವ ಮೂಲಕ ಶಾಸಕ ಡಾ| ಶಿವರಾಜ ಪಾಟೀಲ ಮೆರವಣಿಗೆಗೆ ಚಾಲನೆ ನೀಡಿದರು.

ಪ್ರಮುಖ ವೃತ್ತ, ರಸ್ತೆಗಳಲ್ಲಿ ಸಂಚರಿಸಿದ ಮೆರವಣಿಗೆ ರಂಗಮಂದಿರಕ್ಕೆ ಆಗಮಿಸಿ ಸಭೆಯಾಗಿ ಮಾರ್ಪಟ್ಟಿತು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಸಸಿ ನೆಟ್ಟು ವೇಮನ ಜಯಂತಿ ಆಚರಣೆ: ನಗರದ ಡಿಎಆರ್‌ ಪೊಲೀಸ್‌ ಕಚೇರಿಯಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ, ಗ್ರೀನ್‌ ರಾಯಚೂರು, ಜಿಲ್ಲಾಡಳಿತ, ನಗರಸಭೆ, ಶಿಲ್ಪಾ ಫೌಂಡೇಶನ್‌, ವಿವಿಧ ಸಂಘ, ಸಂಸ್ಥೆಗಳಿಂದ ಶ್ರೀ ಮಹಾಯೋಗಿ ವೇಮನ ಜಯಂತಿ ನಿಮಿತ್ತ ಸಸಿಗಳನ್ನು ನೆಡಲಾಯಿತು. ಎಸ್‌ಪಿ ಡಾ| ಸಿ.ಬಿ.ವೇದಮೂರ್ತಿ ನೇತೃತ್ವದಲ್ಲಿ ಮಕ್ಕಳು ಪ್ಲಾಸ್ಟಿಕ್‌ ಪ್ಯಾಕೆಟ್‌ಗಳಲ್ಲಿ ಮಣ್ಣು ತುಂಬಿ ಬೀಜಗಳನ್ನು ಹಾಕಿದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.