ಗಡಿಭಾಗ ಪ್ರಗತಿಗೆ ಯರಗೇರಾ ತಾಲೂಕು ರಚಿಸಿ

ಯರಗೇರಾ ಗ್ರಾಮದಲ್ಲಿ ತಾಲೂಕು ಹೋರಾಟ ಸಮಿತಿ ರಚನೆ ಸಭೆ ಪಕ್ಷಭೇದ ಮರೆತು ಹೋರಾಟದಲ್ಲಿ ಪಾಲ್ಗೊಳ್ಳಲು ಮನವಿ

Team Udayavani, Feb 3, 2020, 4:24 PM IST

3-Febrauary-24

ರಾಯಚೂರು: ಗಡಿಭಾಗದ ಸಮಗ್ರ ಅಭಿವೃದ್ಧಿ ಆಗಬೇಕಾದರೆ, ಈ ಭಾಗದಲ್ಲಿ ಸರ್ಕಾರದ ಅನುದಾನ ಮತ್ತು ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕಾದರೆ ಯರಗೇರಾ ತಾಲೂಕು ಕೇಂದ್ರ ರಚನೆ ಆಗಬೇಕು ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಖಾಸಿಮ್‌ ನಾಯಕ್‌ ಅಭಿಪ್ರಾಯಪಟ್ಟರು.

ತಾಲೂಕಿನ ಯರಗೇರಾ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಯರಗೇರಾ ತಾಲೂಕು ಹೋರಾಟ ಸಮಿತಿ ರಚನೆ ಕುರಿತು ರವಿವಾರ ನಡೆದ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ಈ ಭಾಗದ ಹಳ್ಳಿಗಳ ಜನ ಯಾವುದೇ ಕೆಲಸ ಕಾರ್ಯಗಳಿಗೂ ರಾಯಚೂರು ತಾಲೂಕಿಗೆ ಹೋಗಬೇಕು. ಆದರೆ, ಸೂಕ್ತ ಸಾರಿಗೆ ಸೌಕರ್ಯವಿರದ ಕಾರಣ ನಗರಕ್ಕೆ ಬರಲು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ. ಅಲ್ಲದೇ, ಈ ಪ್ರದೇಶ ಆಂಧ್ರಪ್ರದೇಶದ ಗಡಿ ಭಾಗವಾಗಿದ್ದು, ಕನ್ನಡ ಭಾಷೆಗೆ ಸಾಕಷ್ಟು ತೊಡಕುಗಳಿವೆ. ಗ್ರಾಮಗಳ ಅಭಿವೃದ್ಧಿಗೆ ಯರಗೇರಾ ಗ್ರಾಮವನ್ನು ತಾಲೂಕು ಕೇಂದ್ರವನ್ನಾಗಿಸುವುದು ಅತ್ಯವಶ್ಯಕ ಎಂದರು.

ಮುಖಂಡ ನಿಜಾಮುದ್ದೀನ್‌ ಮಾತನಾಡಿ, ಈಗಾಗಲೇ ತಾಲೂಕಿನ ಅವಶ್ಯಕತೆ ಬಗ್ಗೆ ಜನರಿಗೆ ಮಾಹಿತಿ ಮತ್ತು ಜಾಗೃತಿ ನೀಡಲಾಗುತ್ತಿದೆ. ಎಲ್ಲ ಗ್ರಾಮ ಪಂಚಾಯಿತಿಗಳ ಸಭೆಗಳಲ್ಲಿ ಯರಗೇರಾ ತಾಲೂಕು ಕೇಂದ್ರ ಮಾಡುವಂತೆ ನಿರ್ಣಯ ಕೈಗೊಳ್ಳುವಂತೆ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸಚಿವರಿಗೆ, ಶಾಸಕರಿಗೆ ಮತ್ತು ಸಂಸದರಿಗೆ ಮನವಿ ನೀಡಿ ಒತ್ತಾಯಿಸಲಾಗುವುದು. ತಾಲೂಕು ರಚನೆಗಾಗಿ ಪಕ್ಷಭೇದ ಮರೆತು ಎಲ್ಲರೂ ಹೋರಾಟದಲ್ಲಿ ಭಾಗವಹಿಸಬೇಕು ಎಂದರು.

ವಿವಿಧ ಗ್ರಾಮಗಳ ಮುಖಂಡರಾದ ಮೆಹಬೂಬ್‌ ಪಟೇಲ, ಕೃಷ್ಣಾಜಿ, ಜನಾರ್ದನ ರೆಡ್ಡಿ, ಬಸಣ್ಣ ಉಪ್ಪಾಳ, ಮಲ್ಲಿಕಾರ್ಜುನ ಗೌಡ, ವೆಂಕಟೇಶ ನಾಯಕ, ನಲ್ಲರೆಡ್ಡಿ ನಾಯಕ, ಈರಣ್ಣ ನಾಯಕ, ವಿದ್ಯಾನಂದ ರೆಡ್ಡಿ, ಬಸವರಾಜ, ಲಕ್ಷ್ಮೀಪತಿ, ಮಹ್ಮದ್‌ ರಫಿ, ಸುಬ್ರಹ್ಮಣ್ಯ, ಮೂಕಪ್ಪ ನಾಯಕ, ಹಾಜಿ ಮಲಂಗ್‌, ಸೈಯ್ಯದ್‌ ಬುರಾನ, ಬಜಾರಪ್ಪ ಸೇರಿದಂತೆ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.