ವಸತಿ ನಿಲಯ ಕಟ್ಟಡ ಕಾಮಗಾರಿ ನಿಧಾನಗತಿ


Team Udayavani, Dec 1, 2018, 1:29 PM IST

ray-4.jpg

ಲಿಂಗಸುಗೂರು: ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ಅನುದಾನ ಖರ್ಚು ಮಾಡುತ್ತಿದೆ. ಆದರೆ ಕಾಮಗಾರಿಗಳು ಮಾತ್ರ ನಿಧಾನಗತಿಯಲ್ಲಿ ಸಾಗಿ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗುತ್ತಿದೆ ಎಂಬುದಕ್ಕೆ ಕರಡಕಲ್‌ ಹೊರಭಾಗದಲ್ಲಿ ನಡೆಯುತ್ತಿರುವ ವಸತಿ ನಿಲಯಗಳ ಕಾಮಗಾರಿಗಳೇ ತಾಜಾ ಉದಾಹರಣೆಯಾಗಿದೆ.

ಸಮಾಜ ಕಲ್ಯಾಣ, ಬಿಸಿಎಂ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡ ಇಲಾಖೆಗಳಿಗೆ ಸೇರಿದ ವಸತಿ ನಿಲಯಗಳಲ್ಲಿ ಕೆಲವು ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ. ಆರ್ಥಿಕ ಹೊರೆ ತಗ್ಗಿಸಲು ಸರ್ಕಾರ ಅನುದಾನ ನೀಡಿ ನಿಲಯದ ಕಾಮಗಾರಿ ಆರಂಭಿಸಿದೆ. ಆದರೆ ಗುತ್ತಿಗೆ ಪಡೆದ ಏಜನ್ಸಿಗಳು ಮಂದಗತಿಯಲ್ಲಿ ಕೆಲಸ ಮಾಡುತ್ತಿವೆ. ಇದರಿಂದ ವಸತಿ ನಿಲಯಗಳ ನಿರ್ಮಾಣ ಕಾರ್ಯ ವಿಳಂಬವಾಗುತ್ತಿದೆ.
 
ಇಲ್ಲಿಯ ಪುರಸಭೆ ವ್ಯಾಪ್ತಿಯ ಕರಡಕಲ್‌ ಗ್ರಾಮದ ಹೊರಭಾಗದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ 4.85 ಕೋಟಿ ರೂ. ಅನುದಾನದಲ್ಲಿ ಪರಿಶಿಷ್ಟ ಜಾತಿ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಕಳೆದ ಮಾರ್ಚ್‌ನಲ್ಲಿ ಕಾಮಗಾರಿ ಆರಂಭಿಸಲಾಗಿದೆ. ತಾಲೂಕಿನ ಈಚನಾಳ ಗ್ರಾಮದಲ್ಲಿ 3.37 ಕೋಟಿ ರೂ. ಅನುದಾನದಲ್ಲಿ ಎಸ್‌ಸಿ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯ ನಿರ್ಮಾಣಕ್ಕೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾಮಗಾರಿ ಆರಂಭವಾಗಿದೆ. 

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದ ಕಾಮಗಾರಿ ಎರಡು ವರ್ಷದಿಂದ ಸಾಗುತ್ತಲೇ ಇದೆ. ಈಗ ಪ್ಲಾಸ್ಟರ್‌ ಹಂತಕ್ಕೆ ತಲುಪಿದೆ. ಈಚನಾಳ ಗ್ರಾಮದಲ್ಲಿ ವಸತಿ ನಿಲಯದ ಕಾಮಗಾರಿ ಆಮೆವೇಗದಲ್ಲಿ ಸಾಗುತ್ತಿದೆ. ಗ್ರಾಮದಲ್ಲಿ ಬಾಡಿಗೆ ಕಟ್ಟಡದಲ್ಲಿ ಹಾಸ್ಟೆಲ್‌ ನಡೆಸುತ್ತಿದ್ದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

ಇದಲ್ಲದೆ ಪಟ್ಟಣದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಎಸ್‌ಸಿ ಮೆಟ್ರಿಕ್‌ ನಂತರದ ಬಾಲಕಿಯರ ಹಾಗೂ ಅಲ್ಪಸಂಖ್ಯಾತರ ವಸತಿ ನಿಲಯಗಳಲ್ಲಿ ಅಗತ್ಯ ಸೌಲಭ್ಯಗಳು ಇಲ್ಲದಾಗಿದೆ. ಇದರಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸ್ವಂತ ಕಟ್ಟಡಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದರಿಂದ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳು ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆ ಏಜನ್ಸಿಗೆ ತಾಕೀತು ಮಾಡಬೇಕಾಗಿದೆ.

ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ಕಾಮಗಾರಿ ನಿಧಾನದಿಂದ ಸಾಗಿರುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. 
ರವಿ, ಸಹಾಯಕ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.