ಪಾಳುಬಿದ್ದ ಎಪಿಎಂಸಿ ಮಳಿಗೆಗಳು


Team Udayavani, Jan 11, 2019, 10:23 AM IST

yad-1.jpg

ದೇವದುರ್ಗ: ಸ್ಥಳೀಯ ಎಪಿಎಂಸಿ ವತಿಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಮಳಿಗೆಗಳ ಟೆಂಡರ್‌ ಪ್ರಕ್ರಿಯೆ ವಿಳಂಬವಾಗಿದ್ದರಿಂದ ವರ್ತಕರಿಗೆ ಮಳಿಗೆಗಳು ಹಂಚಿಕೆಯಾಗದೇ ಎಪಿಎಂಸಿ ಮಾರುಕಟ್ಟೆ ರೈತರಿಗೆ ವರವಾಗುವ ಬದಲು ಶಾಪವಾಗಿ ಪರಿಣಮಿಸಿದೆ.

ಸ್ಥಳೀಯ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಮಳಿಗೆಗಳ ನಿರ್ಮಾಣ ಕಾಮಗಾರಿ ವೇಗದಿಂದ ಸಾಗಿದೆ. ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ಒಳಗೆ ನಿರ್ಮಿಸಿದ ಬಹುತೇಕ ಮಳಿಗೆಗಳ ಟೆಂಡರ್‌ ಕರೆದು ವರ್ತಕರಿಗೆ ಹಂಚಿಕೆ ಮಾಡದ್ದರಿಂದ ವ್ಯಾಪಾರ ವಹಿವಾಟಿಗೆ ಬಳಕೆಯಾಗದೇ ನಿರುಪಯುಕ್ತವಾಗಿವೆ.ನಿರ್ವಹಣೆ ಕೊರತೆಯಿಂದ ಆರೇಳು ಮಳಿಗೆಗಳು ಪಾಳು ಬಿದ್ದಿವೆ. ಹೊಸದಾಗಿ ನಿರ್ಮಿಸಲಾದ 9 ಮಳಿಗೆಗಳು ವರ್ಷಗಳೇ ಗತಿಸಿದರೂ ಟೆಂಡರ್‌ ಪ್ರಕ್ರಿಯೆ ಆಗಿಲ್ಲ. ಅಧಿಕಾರಿಗಳು ಟೆಂಡರ್‌ ಪ್ರಕ್ರಿಯೆ ನಡೆಸಲು ಮೀನ-ಮೇಷ ಎಣಿಸುತ್ತಿರುವುದು ಅನುಮಾನಕ್ಕೆಡೆ ಮಾಡಿದೆ.

ಎಪಿಎಂಸಿ ಮಾರುಕಟ್ಟೆಯಲ್ಲಿ ವಾಣಿಜ್ಯಿಕ ಚಟುವಟಿಕೆಗಳು ನಡೆಯದ್ದರಿಂದ ರೈತರ ಕೃಷಿ ಉತ್ಪನ್ನ ದಾಸ್ತಾನಿಗೆ ನಿರ್ಮಿಸಿದ ಬೃಹತ್‌ ಗೋದಾಮು ಕೂಡ ನಿರುಪಯುಕ್ತವಾಗಿವೆ. ಇಲ್ಲಿನ ಕೃಷಿ ಮಾರುಕಟ್ಟೆಯನ್ನು ಪದೇಪದೆ ರಾಯಚೂರು ಎಪಿಎಂಸಿಗೆ ವಿಲೀನ ಮಾಡುವುದರಿಂದ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ರೈತಪರ ಹಲವು ಸಂಘಟನೆಗಳು ವಿಲೀನ ವಿರೋಧಿಸಿ ಹೋರಾಟ ಕೈಗೊಂಡರೂ, ರಾಜಕೀಯ ನಾಯಕರ ಪ್ರಭಾವದಿಂದಾಗಿ ಫಲ ಸಿಗದೇ ವಿಫಲವಾಗಿದೆ. ಹೀಗಾಗಿ ತಾಲೂಕಿನ ನೂರಾರು ರೈತರು ತಮ್ಮ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಬೇರೆ ತಾಲೂಕು, ಜಿಲ್ಲೆಗೆ ತೆರಳುವುದು ಅನಿವಾರ್ಯವಾಗಿದೆ.

ತಾಲೂಕಿನವರೇ ಸಂಸದ, ಶಾಸಕರು, ವಿಧಾನ ಪರಿಷತ್‌ ಸದಸ್ಯರಿದ್ದರೂ ಇಲ್ಲಿನ ಎಪಿಎಂಸಿಯಲ್ಲಿ ವ್ಯಾಪಾರ ವಹಿವಾಟು ಆರಂಭಿಸಲು ಮುಂದಾಗದಿರುವುದರಿಂದ ಪಟ್ಟಣ ವಾಣಿಜ್ಯ ಕೇಂದ್ರವಾಗಿ ಬೆಳೆಯಲು ಹಿನ್ನಡೆ ಆಗುತ್ತಿದೆ.

ಕಲ್ಯಾಣ ಮಂಟಪ ಅನಾಥ: ಇನ್ನು ಎಪಿಎಂಸಿ ಆವರಣದಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪ ನಿರ್ವಹಣೆಗೆ ಅಧಿಕಾರಿಗಳು ಹಿಂದೇಟು ಹಾಕಿದ ಪರಿಣಾಮ ಸಭೆ, ಸಮಾರಂಭ ನಡೆಯುತ್ತಿಲ್ಲ.

ಇನ್ನಾದರೂ ಚುನಾಯಿತ ಜನಪ್ರತಿನಿಧಿಗಳು ಕೃಷಿ ಮಾರುಕಟ್ಟೆಯಲ್ಲಿನ ವಾಣಿಜ್ಯ ಮಳಿಗೆಗಳನ್ನು ಟೆಂಡರ್‌ ಕರೆದು ವರ್ತಕರಿಗೆ ಹಂಚಿಕೆ ಮಾಡುವ ಮೂಲಕ ವಾಣಿಜ್ಯ ಚಟುವಟಿಕೆ ಆರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಕೆಆರ್‌ಎಸ್‌ ಸಂಘಟನೆ ಅಧ್ಯಕ್ಷ ಮಲ್ಲಯ್ಯ ಕಟ್ಟಿಮನಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.