ಗಮನ ಸೆಳೆದ ಗ್ರಾಮೀಣ ಕ್ರೀಡಾಕೂಟ

Team Udayavani, May 15, 2022, 1:12 PM IST

9sports

ರಾಯಚೂರು: ತಾಲೂಕಿನ ಮಮದಾಪುರ ಗ್ರಾಮದಲ್ಲಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ)ವತಿಯಿಂದ ನಡೆದ ಪಂಚಾಯಿತಿ ಮಟ್ಟದ ಗ್ರಾಮೀಣ ಕ್ರೀಡಾಕೂಟ ಗಮನ ಸೆಳೆಯಿತು.

ಕ್ರೀಡಾ ಕೂಟವನ್ನು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಚಾಲನೆ ನೀಡಲಾಯಿತು. ಮಮದಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳ 50ಕ್ಕೂ ಹೆಚ್ಚಿನ ಯುವಕರು ಸ್ಪರ್ಧೆಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

ಕೈಕಲ್ಲು ಎತ್ತುವ ಸ್ಪರ್ಧೆಯಲ್ಲಿ 80ಕೆ.ಜಿ ಕಲ್ಲು ಎತ್ತಿದ ಮಹಾದೇವ ಬಸ್ಸಪ್ಪ ಪ್ರಥಮ ಬಹುಮಾನ, 75ಕೆ.ಜಿ ಎತ್ತಿದ ಶಿವಾನಂದ ದ್ವಿತೀಯ ಬಹುಮಾನ ಹಾಗೂ 70ಕೆ.ಜಿ ಎತ್ತಿದ ರಾಜು ಸೋಮರೆಡ್ಡಿ ತೃತೀಯ ಬಹುಮಾನ ಪಡೆದರು. ಉಸುಕಿನ ಚೀಲ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಆಶಾಪುರದ ನರಸಪ್ಪ 120ಕೆ.ಜಿ ಉಸುಕಿನ ಚೀಲ ಎತ್ತಿದರೆ, ದ್ವಿತೀಯ ಬಹುಮಾನ ಪಡೆದ ಮಹೇಶ 110 ಕೆ.ಜಿ ಹಾಗೂ ತƒತೀಯ ಬಹುಮಾನ ಶಿವಾನಂದ 110ಕೆ.ಜಿ ಎತ್ತಿದರು. ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಮಹೇಶ್‌ ಬಸಪ್ಪ 8ಮೀಟರ್‌ ದೂರ ಎಸೆದರು, 7.1ಮೀಟರ್‌ ದೂರ ಎಸೆದ ಈರೇಶ್‌ ಯಾದವ್‌ ಎರಡನೇ ಸ್ಥಾನ ಮತ್ತು ಏಳು ಮೀಟರ್‌ ದೂರ ಎಸೆದ ಈರೇಶ್‌ ಮುನಿಸ್ವಾಮಿ ಮೂರನೇ ಬಹುಮಾನ ಪಡೆದರು. ಮೂರು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಬೆಳ್ಳಿ ಪದಕ ನೀಡಲಾಯಿತು. ಹಾಗೂ ಬಹುಮಾನ ಪಡೆದ ಎಲ್ಲರಿಗೂ ನೇತಾಜಿ ಫೋಟೊ, ಕಪ್‌ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಎಐಡಿವೈಒ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್‌ ಮಾತನಾಡಿ, ಇಂದು ಗ್ರಾಮೀಣ ಯುವಕರನ್ನು ಒಂದುಗೂಡಿಸುವ ಕಲೆ, ಕ್ರೀಡೆಗಳು ನಶಿಸಿ ಹೋಗುತ್ತಿವೆ. ಈ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಅವಶ್ಯಕತೆ ಇದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಜಿರಹಿತವಾಗಿ ಹೋರಾಡಿ ಬಲಿದಾನ ಮಾಡಿದ ಮಹಾನ್‌ ನೇತಾಜಿ ನಮ್ಮ ಯುವಕರಿಗೆ ಆದರ್ಶವಾಗಬೇಕಾಗಿದೆ. ಐಸಿಎಸ್‌ ಪರೀಕ್ಷೆಯನ್ನು ಪಾಸುಮಾಡಿ ಬ್ರಿಟಿಷ್ ಗುಲಾಮ ಅಧಿಕಾರಿಯಾಗದೆ ಜನರ ವಿಮೋಚನೆಗಾಗಿ ಹೋರಾಡಿದರು. ಅಂತಹ ನಾಯಕರ ಜೀವನ ಹೋರಾಟವನ್ನು ಅರಿತುಕೊಳ್ಳಬೇಕು. ಅವರ ಕನಸಿನ ಭಾರತವನ್ನು ಕಟ್ಟಲು ಯುವಕರು ಮುಂದೆ ಬರಬೇಕು ಎಂದು ಕರೆ ನೀಡಿದರು.

ಎಐಡಿವೈಒ ರಾಜ್ಯ ಅಧ್ಯಕ್ಷ ಶರಣಪ್ಪ ಉದಾºಳ್‌, ಗ್ರಾಮದ ಹಿರಿಯರಾದ ಮಹಾದೇವಪ್ಪಗೌಡ, ವೀರನಗೌಡ, ನಿಂಗಯ್ಯ, ಗಂಗಣ್ಣ, ಮಲ್ಲಿಕಾರ್ಜುನ ಗೌಡ, ಗಂಗಣ್ಣ ನಾಯಕ್‌, ಗೋಕರಪ್ಪ ನಾಯಕ್‌, ಮಲ್ಲಪ್ಪ ಬಾಗಲಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಾರ್ಕ್‌, ದೇವರಾಜ್‌, ಪೋಸ್ಟ್‌ ಈರಣ್ಣ, ತಮಟೆ ಹನುಮಂತ, ಪೋಸ್ಟ್‌ ಈರಣ್ಣ, ರಾಘವೇಂದ್ರ ಆಶಾಪುರ, ಗ್ರಾಮದ ಯುವಕರಾದ ಮಂದಕಲ್‌, ಸುಗ್ರೀವ, ಜಂಬಣ್ಣ, ಉಮೇಶ್‌, ರಮೇಶ್‌, ತಾಯಪ್ಪ, ವನಮುಕ್ತಿ, ಭೀಮನಾಯಕ್‌ ಹಾಗೂ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ವಿನೋದ್‌ ಕುಮಾರ್‌, ಕೃಷ್ಣ ಮನಸಲಾಪೂರ, ಜಾಫರ್‌ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.