ಕೃಷಿ ಉತ್ಪನ್ನ ಕಳವಿಗೆ ಕಡಿವಾಣ ಹಾಕಿ

Team Udayavani, Dec 14, 2021, 6:41 PM IST

31farmer

ರಾಯಚೂರು: ಕೃಷಿ ಉತ್ಪನ್ನಗಳು ಹಾಗೂ ಕೃಷಿಗೆ ಬಳಸುವ ದುಬಾರಿ ಸಾಮಗ್ರಿಗಳ ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ. ನಿಖೀಲ್‌ ಅವರಿಗೆ ಮನವಿ ಸಲ್ಲಿಸಿದರು.

ಹತ್ತಿ, ಮೆಣಸಿನಕಾಯಿ, ಹೊಲದಲ್ಲಿರುವ ಕಡಲೆ ಸೇರಿದಂತೆ ಇನ್ನಿತರ ಬೆಳೆಗಳು, ಜಾನುವಾರು ಹಾಗೂ ಕೃಷಿ ಯಂತ್ರೋಪಕರಣಗಳಾದ ಪಂಪ್‌ಸೆಟ್‌, ಪೈಪ್‌ಗಳು ಕಳುವಾಗುತ್ತಿವೆ. ರೈತರು ಕಷ್ಟಪಟ್ಟು ಸಾಲ ಸೋಲ ಮಾಡಿ ಕೃಷಿ ಮಾಡಿಕೊಂಡಿದ್ದಾರೆ. ಈಗ ಅದಕ್ಕೂ ರಕ್ಷಣೆ ಇಲ್ಲದಂತಾದ ಸ್ಥಿತಿ ಇದೆ. ಈ ರೀತಿ ಅನೇಕ ಘಟನೆಗಳು ನಡೆದಿದ್ದು, ಸಂಬಂಧಿಸಿದ ಠಾಣೆಗಳಿಗೆ ದೂರು ನೀಡಿದರೆ ಪ್ರಯೋಜನವಾಗುತ್ತಿಲ್ಲ. ಸಾಕ್ಷಿ ಸಮೇತ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದರೆ ದಿನದೊಳಗೆ ದುಷ್ಕರ್ಮಿಗಳು ಹೊರಗೆ ಓಡಾಡುತ್ತಿರುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಗುಂಜಹಳ್ಳಿಯಲ್ಲಿ ಎಮ್ಮೆ ಕಳ್ಳರನ್ನು, ಚಂದ್ರಬಂಡಾದಲ್ಲಿ ಎತ್ತು, ಕುರಿಗಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು. ಹೊಸೂರು, ಬಾಯಿದೊಡ್ಡಿ ಹಾಗೂ ನೆಲಹಾಳ ಗ್ರಾಮಗಳಲ್ಲಿ ಹತ್ತಿ ಕಳ್ಳತನವಾಗುತ್ತಿದೆ. ಈ ಕುರಿತೂ ಗ್ರಾಮೀಣ ಠಾಣೆಗೆ ದೂರು ನೀಡಿದರೆ ಯಾವುದೇ ಕ್ರಮ ಜರುಗಿಸಿಲ್ಲ. ತಾಲೂಕಿನ ಬಾಪೂರದಲ್ಲಿ ಮೋಟರ್‌ ಮತ್ತು ಮೊಬೈಲ್‌ ಕಳ್ಳತನ ಮಾಡಿದ ಆರೋಪಿತನನ್ನು ಹಿಡಿದು ಯರಗೇರಾ ಠಾಣೆಗೆ ಒಪ್ಪಿಸಿದರೆ ಮರುದಿನವೇ ಆತ ರಾಜಾರೋಷವಾಗಿ ಓಡಾಡುತ್ತಿದ್ದಾನೆ ಎಂದು ದೂರಿದರು.

ಇನ್ನಾದರೂ ಪೊಲೀಸರು ರೈತರ ರಕ್ಷಣೆಗೆ ಮುಂದಾಗಬೇಕು. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆ ರಕ್ಷಣೆಗೆ ನೆರವಾಗಬೇಕು. ಇಲ್ಲವಾದರೆ ರೈತರು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಜಿಲ್ಲಾ ಗೌರವಾಧ್ಯಕ್ಷ ನರಸಿಂಗರಾವ್‌ ಕುಲಕರ್ಣಿ ಚಂದ್ರಬಂಡಾ, ಸದಸ್ಯರಾದ ಕೆ. ವೀರೇಶ ಗೌಡ, ನರಸರೆಡ್ಡಿ ಬಾಯಿದೊಡ್ಡಿ, ಹುಲಿಗೆಪ್ಪ ಜಾಲಿಬೆಂಚಿ, ಗಾಣಧಾಳ ರಮೇಶ, ಚಂದಾಸಾಬ್‌, ಎಸ್‌. ಮಹೆಬೂಬ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.