ದೇಶದ ಸಂಸ್ಕೃತಿ ಬಗ್ಗೆ ಎಚ್ಚರ ವಹಿಸದಿದ್ದರೆ ವಿನಾಶ ನಿಶ್ಚಿತ: ಗುರೂಜಿ

Team Udayavani, Feb 7, 2020, 6:18 PM IST

7-February-34

ಸಿಂಧನೂರು: ದೇಶದ ಸಂಸ್ಕೃತಿಯು ಇಂದು ನಶಿಸುವ ಹಂತದಲ್ಲಿದೆ. ದೇಶದ ಸಂಸ್ಕೃತಿಯ ಬಗ್ಗೆ ಎಚ್ಚರಗೊಳ್ಳದಿದ್ದರೆ ಮುಂದೊಂದು ದಿನ ವಿನಾಶದ ಕಡೆಗೆ ನಾವೆಲ್ಲರೂ ವಾಲಬೇಕಾಗಿದೆ ಎಂದು ಆರ್ಟ್‌ ಆಫ್‌ ಲಿವೀಂಗ್‌ನ ಸಂಸ್ಥಾಪಕ ರವಿಶಂಕರ್‌ ಗುರೂಜಿ ಹೇಳಿದರು.

ನಗರದ ಶ್ರೀಕೃಷ್ಣದೇವರಾಯ ಶಿಕ್ಷಣ ಸಂಸ್ಥೆಯಲ್ಲಿ ಆರ್ಟ್‌ ಆಫ್‌ ಲಿವೀಂಗ್‌ನಿಂದ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣ ಕರ್ನಾಟಕ ಮಹೋತ್ಸವದ ಗುರುವಂದನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರಪಂಚದಲ್ಲಿ ಯಾವ ದೇಶದಲ್ಲಿ ಮಾಡದ ಹಿಂದಿನಿಂದಲೂ ಅನೇಕ ವಿಭಿನ್ನ ರೀತಿಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಬಂದಂತಹ ದೇಶವು ನಮ್ಮದಾಗಿದೆ. ಅತಿಥಿ ದೇವೂ ಭವ, ತಂದೆ ತಾಯಿಗಳಿಗೆ ಪಾದ ಪೂಜೆ ಗುರು ಹಿರಿಯರಿಗೆ ಗುರುವಂದನಾ ಕಾರ್ಯಕ್ರಮ. ಇವೆಲ್ಲವೂ ಭಾರತದಲ್ಲಿ ಕಾಣಲು ಸಾಧ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಇವೆಲ್ಲವೂ ನಶಿಸಿ ಹೋಗುವ ಹಂತಕ್ಕೆ ಬಂದಿರುವುದು ದುರ್ದವೈದ ಸಂಗತಿ ಎಂದರು.

ವಿದ್ಯಾರ್ಥಿಗಳು ದಿನ ನಿತ್ಯ ಏಕಾಗ್ರತೆಯಿಂದ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು. ಯಾವುದೇ ದುರಾಲೋಚನೆ ಸೇಡು. ಮತ್ತೂಬ್ಬರಿಗೆ ಕೆಡುಕು ರೀತಿಯಲ್ಲಿ ನೋಡದೆ ಪುಸ್ತಕದ ಕಡೆ ಹೆಚ್ಚು ಗಮನ ಹರಿಸಿದಾಗ ಮಾತ್ರ ಸರಳವಾಗಿ ವಿದ್ಯೆ ಜ್ಞಾನಕ್ಕೆ ಹೋಗಲು ಸಾಧ್ಯವಾಗುತ್ತದೆ. ಪಾಲಕರು ತಮ್ಮ ಮಕ್ಕಳಿಗೆ ನೀಡುವ ಆಹಾರದ ಬಗ್ಗೆ ಗಮನ ಹರಿಸಬೇಕು. ಪ್ರೋಟಿನ್‌ ಪದಾರ್ಥಗಳಿಗೆ ಹೆಚ್ಚು ಕಾಳಜಿ ವಹಿಸಬೇಕು. ಕೊಬ್ಬಿನಾಂಶದಂತಹ ಪದಾರ್ಥಗಳಿಗೆ ಒತ್ತು ನೀಡಬಾರದು. ನಾವೂ ಊಟದಲ್ಲಿ ಸ್ವಲ್ಪ ಪರಿವರ್ತನೆ ಮಾಡಿಕೊಂಡರೆ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಯೋಗ, ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ರೂಢಿಸಿಕೊಳ್ಳ ಬೇಕು ಎಂದರು.

ಸಿಂಧನೂರು ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಹೆಚ್ಚು ಕಾಣುತ್ತದೆ. ಇದರ ಬಗ್ಗೆ ಗಮನ ಹರಿಸುವ ಕೆಲಸವು ನಿಮ್ಮಿಂದ ಆಗಬೇಕು. ಪ್ರತಿಯೊಬ್ಬರು ವಿದೇಶಿ ಸಾಬೂನುಗಳಿಗೆ ಹಾಗೂ ಇತರ ದಿನ ನಿತ್ಯದ ಬಳಕೆಗಳಿಗೆ ಯಾರು ಮಾರು ಹೋಗಬಾರದು. ನಮ್ಮಲ್ಲಿ ಸಿಗುವ ನೈರ್ಸಗಿಕ ಸಂಪನ್ಮೂಲಗಳಿಗೆ ನಾವು ಜಾಸ್ತಿ ಒತ್ತು ಕೊಡಬೇಕು. ಜತೆಗೆ ಸಸಿಗಳನ್ನು ನೆಡುವುದು ಆದ್ಯ ಕರ್ತವ್ಯ ಎಂಬ ಭಾವನೆ ನಮ್ಮಲ್ಲಿ ಮೂಡಬೇಕು. ಆಗ ಮಾತ್ರ ನೀರಿನ ಸಂರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಸಂಸ್ಥೆಯ ವತಿಯಿಂದ ನೀರು ಉಳಿಸುವುದರ ಬಗ್ಗೆ ಜಿಲ್ಲೆಯ ಎಲ್ಲಾ ಪದಾ ಧಿಕಾರಿಗಳೊಂದಿಗೆ ಚರ್ಚಿಸಿ ನಾವೊಂದು ಕಾರ್ಯಕ್ರಮ ಆಯೋಜಿಸುವುದರ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ಶಾಸಕ ವೆಂಕಟರಾವ್‌ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಶ್ರೀಕೃಷ್ಣದೇವರಾಯ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ವೈ.ನರೇಂದ್ರನಾಥ, ಆರ್ಟ್‌ ಆಫ್‌ ಲಿವಿಂಗ್‌ನ ಸತ್ಯಂ ಸೇರಿದಂತೆ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.