ಆ.10ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ
Team Udayavani, Jul 20, 2022, 6:25 AM IST
ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.10ರಿಂದ 16ರವರೆಗೆ ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಾತ್ರೋತ್ಸವವು ಜರುಗಲಿದೆ.
ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ಜರುಗಲಿವೆ. ಈ ವರ್ಷ ಮಂತ್ರಾಲಯದ ವಿದ್ವಾನ್ ಅರ್ಚಕ ಕೃಷ್ಣಾಚಾರ್, ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಆರ್.ಪ್ರಭಾಕರರಾವ್, ತಿರುವನಂತಪುರದ ವಿದ್ವಾನ್ ಆರ್.ಕೃಷ್ಣಮೂರ್ತಿ ಶಾಸ್ತ್ರಿ, ಬೆಂಗಳೂರಿನ ವಿದ್ವಾನ್ ಮಾಳಗಿ ರಾಮಾಚಾರ, ಮೈಸೂರಿನ ವಿದ್ವಾನ್ ಸಿ.ಎಚ್. ಶ್ರೀನಿವಾಸಮೂರ್ತಿ, ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಇಲಾಖೆ ನಿವೃತ್ತ ಜಂಟಿ ಆಯುಕ್ತ ಎಲ್. ಮಾಧವಶೆಟ್ಟಿ, ಕರ್ನೂಲ್ನ ಡಾ|ಜಿ.ಆರ್ ಚಂದ್ರಶೇಖರ, ಹುಬ್ಬಳ್ಳಿಯ ಡಾ|ವಿ.ಜಿ ನಾಡಗೌಡ, ದಾನಿ ಎಂ.ಸೋಮಶೇಖರ ಅವರಿಗೆ ಶ್ರೀ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
12ರಂದು ಶ್ರೀಗುರು ಸಾರ್ವಭೌಮರ ಪೂರ್ವಾರಾಧನೆ ನಿಮಿತ್ತ ರಜತ ಸಿಂಹ ವಾಹನೋತ್ಸವ, 13ರಂದು ಮಧ್ಯಾರಾಧನೆ, ಗಜ-ರಜತ-ಸ್ವರ್ಣ ರಥೋತ್ಸವ ನಡೆಯಲಿದೆ.
14ರಂದು ಉತ್ತರಾರಧನಾ ಮಹೋತ್ಸವದ ನಿಮಿತ್ತ ಮಹಾರಥೋತ್ಸವ ನಡೆಯಲಿದೆ.
15ರಂದು ಶ್ರೀಸುಗುಣೇಂದ್ರ ತೀರ್ಥರ ಆರಾಧನೆ, 16ರಂದು ಸರ್ವ ಸಮರ್ಪಣೋತ್ಸವ ಕಾರ್ಯಕ್ರಮ ನಡೆಯಲಿದೆ.
ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ನಿಮಿತ್ತ ಪ್ರತಿದಿನವೂ ವಿದ್ವಾಂಸರಿಂದ ಪ್ರವಚನ, ಉಪನ್ಯಾಸ, ವಿವಿಧ ಸಂಗೀತ ಕಲಾವಿದರಿಂದ ದಾಸವಾಣಿ ಕಾರ್ಯಕ್ರಮ, ಭರತನಾಟ್ಯ, ನೃತ್ಯ ರೂಪಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶ್ರೀಮಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ