ಬಿಎಸ್ ವೈ ವಿರುದ್ಧ ಯಾರೇ ಮಾತನಾಡಿದರೂ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಲಕ್ಷ್ಮಣ ಸವದಿ
Team Udayavani, Nov 1, 2020, 12:51 PM IST
ರಾಯಚೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಬಗ್ಗೆ ಯಾರೇ ಮಾತನಾಡಿದರೂ ಅಂಥವರ ವಿರುದ್ಧ ಪಕ್ಷದ ವರಿಷ್ಠರು ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಎಚ್ಚರಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ ಆಗಲಿ, ಸವದಿಯಾಗಲಿ ವರಿಷ್ಠರ ಬಗ್ಗೆ ಮಾತನಾಡಿದರೆ ಶಿಸ್ತು ಕ್ರಮ ಎದುರಿಸಲೇಬೇಕು. ಅದನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರು ನೋಡಿಕೊಳ್ಳುತ್ತಾರೆ ಎಂದರು.
ಇದನ್ನೂ ಓದಿ:ನಾವು ಮೊದಲೇ ಕಾಂಗ್ರೆಸ್‌ನಲ್ಲಿದ್ದೆವು, ಸಿದ್ದರಾಮಯ್ಯ ಕೊನೆಯಲ್ಲಿ ಸೇರಿದ್ರು: ಸೋಮಶೇಖರ್
ಜಿಲ್ಲೆಯ ಗಡಿಭಾಗದ ಹಳ್ಳಿಗಳ ಸಮಸ್ಯೆ ನಿವಾರಣೆಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗುವುದು. ಅಲ್ಲಿನ ಮಕ್ಕಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದರು.