ಮಾವಿನಕೆರೆ ಕಾಯಕಲ್ಪಕ್ಕೆ ಬರೀ ವಿಘ್ನಗಳೇ

ಸರ್ಕಾರಿ ಸ್ಥಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾದರೂ ತೆರವು ಮಾಡುವ ಅಧಿಕಾರ ಜಿಲ್ಲಾಡಳಿತಕ್ಕಿದೆ.

Team Udayavani, Jul 19, 2021, 6:55 PM IST

Kere

ರಾಯಚೂರು: ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ಮಾವಿನಕೆರೆ ಅಭಿವೃದ್ಧಿಗೆ ಬರೀ ವಿಘ್ನಗಳೇ ಎದುರಾಗುತ್ತಿವೆ. ಬಹಳ ವರ್ಷಗಳ ಬಳಿಕ ಹೂಳು ತೆರವು ಕಾರ್ಯಕ್ಕೆ ಮುಂದಾದರೂ ಅದು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದೆ ಅರೆಬರೆಯಾಗಿದ್ದು, ಮತ್ತದೇ ಅವ್ಯವಸ್ಥೆ ಮುಂದುವರಿದಿದೆ.

ಕೆರೆ ಅಭಿವೃದ್ಧಿಗೆ ಹಣ ಮೀಸಲಿಟ್ಟಿದ್ದೇವೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಹೇಳಿಕೊಂಡು ಬರುತ್ತಿದ್ದರಾದರೂ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಮಾತ್ರ ಮಾಡುತ್ತಿಲ್ಲ. ಈಚೆಗೆ ಕೆರೆ ನೀರೆಲ್ಲ ಖಾಲಿ ಮಾಡಿ ಹೂಳು ತೆರವು ಮಾಡುವ ಕಾರ್ಯಕ್ಕೆ ಮುಂದಾಗುವಷ್ಟರಲ್ಲಿ ಮುಂಗಾರು ಶುರುವಾಗಿ ಆ ಕೆಲಸವೂ ನಿಂತು ಹೋಗಿದೆ. ಬಿಜಿಎಸ್‌ ಸಂಘಟನೆ, ನಗರಸಭೆ, ಆರ್‌ಡಿಎ ಸಹಯೋಗದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು.

ಇನ್ನೇನು ಕೆರೆಗೆ ಹೊಸ ಕಳೆ ಬರಬಹುದು, ಚರಂಡಿ ನೀರು ಕೆರೆಗೆ ಸೇರಿಕೊಳ್ಳದೆ ಶುದ್ಧ ಮಳೆನೀರು ಶೇಖರಣೆಯಾಗಬಹುದು. ವಿಹಾರಿಗಳಿಗೆ ಆಹ್ಲಾದಕರ ವಾತಾವರಣ ನಿರ್ಮಾಣ ಆಗಬಹುದು ಎಂಬೆಲ್ಲ ಲೆಕ್ಕಾಚಾರಗಳು ತಲೆ ಕೆಳಗಾಗಿದೆ. ಇನ್ನೂ ಹೂಳು ತೆರವು ಕಾಮಗಾರಿ ಶುರುವಾಗುತ್ತಿದ್ದಂತೆ ಕೆಲ ಮುಖಂಡರು ಕೆರೆ ಒತ್ತುವರಿಯಾಗಿದ್ದು, ಕೂಡಲೇ ಅದನ್ನು ತೆರವು ಮಾಡಿ ಬಳಿಕ ಹೂಳು ತೆಗೆಯುವಂತೆ ಪಟ್ಟು ಹಿಡಿದರು. ಇದರಿಂದಲೂ ಕಾಮಗಾರಿಗೆ ಅಡಚಣೆ ಉಂಟಾಯಿತು.

20 ಎಕರೆಗೂ ಅಧಿಕ ಒತ್ತುವರಿ?: ಐತಿಹಾಸಿಕ ಮಾವಿನಕೆರೆ ಸುಮಾರು 400 ವರ್ಷಗಳಿಗೂ ಅ ಧಿಕ ಇತಿಹಾಸ ಹೊಂದಿದೆ. ನಗರದ ಹೃದಯ ಭಾಗದಲ್ಲಿರುವ ಈ ಕೆರೆ ತುಂಬಿದಾಗ ನೋಡುವುದೇ ಸೋಜಿಗವೆನಿಸುತ್ತಿತ್ತು. ಒಟ್ಟು 115 ಎಕರೆ 18 ಗುಂಟೆ ವಿಸ್ತೀರ್ಣದಲ್ಲಿತ್ತು. ಈಗ 95 ಎಕರೆಯಷ್ಟು ಕೆರೆ ಉಳಿದಿದ್ದು, ಉಳಿದ ಸ್ಥಳವೆಲ್ಲ ಒತ್ತುವರಿ ಆಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಕೆರೆಯ ಮುಕ್ಕಾಲು ಭಾಗದಲ್ಲಿ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಅಲ್ಲದೇ, ಬಹುತೇಕ ಚರಂಡಿ ನೀರನ್ನು ಕೆರೆ ಬಿಡಲಾಗುತ್ತಿದೆ. ಇದರಿಂದ ನೀರೆಲ್ಲ ಕಲುಷಿತಗೊಂಡು ಜಲಚರಗಳು ಸಾವಿಗೀಡಾಗುತ್ತದೆ. ಅಲ್ಲದೇ, ಕೆಲವೊಮ್ಮೆ ಕೆರೆ ದಂಡೆ ಮಾರ್ಗವಾಗಿ ಓಡಾಡುವವರಿಗೆ ದುರ್ವಾಸನೆ ಬಡಿಯುತ್ತದೆ. ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಹಾಕಬೇಕು ಎಂಬ ಕಾರಣಕ್ಕೆ ಜಿಲ್ಲಾಡಳಿತ ಕೆರೆ ನೀರನ್ನೆಲ್ಲ ಖಾಲಿ ಮಾಡಿಸಿ ಹೂಳು ತೆರವಿಗೆ ಮುಂದಾಗಿತ್ತು

ಮಾವಿನ ಕೆರೆ ಒತ್ತುವರಿ ತೆರವಿಗೆ ಪಟ್ಟು ಹಿಡಿದ ಕಾರಣ ಡಿಸಿಯವರು ಕಮಿಟಿ ರಚಿಸಿ ಸರ್ವೇಗೆ ಸೂಚನೆ ನೀಡಿದ್ದಾರೆ. ಮಳೆಗಾಲದ ಮುನ್ನ ಹೂಳು ತೆರವು ಮಾಡುವುದು ಅವೈಜ್ಞಾನಿಕ ಎಂದಷ್ಟೇ ನಾವು ಹೇಳಿದ್ದು. ಅಲ್ಲದೇ ಮೊದಲು ಒತ್ತುವರಿ ತೆರವಾಗಲಿ. ಸರ್ಕಾರಿ ಸ್ಥಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾದರೂ ತೆರವು ಮಾಡುವ ಅಧಿಕಾರ ಜಿಲ್ಲಾಡಳಿತಕ್ಕಿದೆ. ಒತ್ತುವರಿ ತೆರವಾಗುವವರೆಗೂ ಹೋರಾಟ ಮುಂದುವರಿಸುತ್ತೇವೆ.
ಎಂ.ವಿರುಪಾಕ್ಷಿ,
ಜೆಡಿಎಸ್‌ ಜಿಲ್ಲಾಧ್ಯಕ್ಷ

ಚರಂಡಿ ನೀರಿಗೆ ಬ್ರೇಕ್‌ ಬೀಳಲಿ
ಈ ಕೆರೆ ಅಂದ ಕೆಟ್ಟಿರುವುದು ಒತ್ತುವರಿಯಿಂದಲ್ಲ; ಚರಂಡಿ ನೀರೆಲ್ಲ ಕೆರೆಗೆ ಹರಿಸುವ ಕಾರಣಕ್ಕೆ. ಕೆರೆ ಪಾತ್ರದಲ್ಲಿ ಮನೆಗಳನ್ನು ಕಟ್ಟಿಕೊಂಡವರು ರಾಜಾರೋಷವಾಗಿ ತಮ್ಮ ಮನೆ ಚರಂಡಿ ನೀರನ್ನು ನೇರವಾಗಿ ಕೆರೆಗೇ ಸಂಪರ್ಕ ಕಲ್ಪಿಸಿದ್ದಾರೆ. ಇದರಿಂದ ಕೆರೆಯಲ್ಲಿ ಮಳೆ ನೀರಿಗಿಂತ ಹೆಚ್ಚಾಗಿ ಚರಂಡಿ ನೀರೇ ಸೇರಿಕೊಳ್ಳುತ್ತಿದೆ. ಇದಕ್ಕೆ ಮೊದಲು ಬ್ರೇಕ್‌ ಹಾಕಿದರೆ ಕೆರೆಯ ಅರ್ಧ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಂತಾಗುತ್ತದೆ. ಈ ಹಿಂದೆ ಚರಂಡಿ ನೀರಿಗಾಗಿ ಪ್ರತ್ಯೇಕ ರಾಜಕಾಲುವೆ ನಿರ್ಮಿಸಿ ಅಲ್ಲಿಗೆ ಸಂಪರ್ಕ ಕಲ್ಪಿಸುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಆದರೆ, ಆ ಕೆಲಸ ಇಂದಿಗೂ ಆಗಿಲ್ಲ. ಇನ್ನಾದರೂ ಆ ಕೆಲಸಕ್ಕೆ ವೇಗ ನೀಡಬೇಕಿದೆ. ನಗರದ ಬಹುತೇಕ ತ್ಯಾಜ್ಯವನ್ನೆಲ್ಲ ಇಲ್ಲಿಯೇ ವಿಲೇವಾರಿ ಮಾಡುವ ಕೆಟ್ಟ ಪದ್ಧತಿಯೂ ಇದೆ. ಇದರಿಂದಲೂ ಕೆರೆಯ ಅಸ್ಮಿತೆಗೆ ಧಕ್ಕೆ ಉಂಟು ಮಾಡುತ್ತಿದೆ. ಇನ್ನೂ ಒತ್ತುವರಿ ತೆರವು ಮಾಡುವುದರ ಜತೆಗೆ ಸುತ್ತಲೂ ಸೂಕ್ತ ಭದ್ರತೆ ಒದಗಿಸಿ, ಅಭಿವೃದ್ಧಿ ಪಡಿಸಿದರೆ ಕೆರೆಯ ಗತವೈಭವ ಮರುಕಳಿಸಬಹುದು.

*ಸಿದ್ದಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.