ಸಮಾಜದಿಂದ ಸಂಘಟಿತ ಹೋರಾಟ ಅಗತ್ಯ


Team Udayavani, Feb 15, 2022, 3:08 PM IST

21social

ಸಿಂಧನೂರು: ವೀರಶೈವ ಸಮುದಾಯದ ಭಾಗವಾದ ಬಣಜಿಗ ಸಮಾಜ ಅನೇಕ ರೀತಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿದೆ. ಯಾವುದೇ ಹೊಸ ಪೀಠ ರಚಿಸಿಕೊಳ್ಳದ ಸಮುದಾಯ ಮಠಗಳ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಸಂಘಟಿತವಾಗಿ ಸೌಲಭ್ಯ ಪಡೆಯಲು ಮುಂದಾಗಬೇಕಿದೆ ಎಂದು ಬಣಜಿಗ ಸಮಾಜದ ಮುಖಂಡ ಸಿದ್ರಾಮಪ್ಪ ಕಾಡ್ಲೂರು ಹೇಳಿದರು.

ನಗರದ ಗಂಗಾವತಿ ರಸ್ತೆಯಲ್ಲಿರುವ ಎನ್‌.ಶಿವನಾಗಪ್ಪ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು, ತಾಲೂಕು ಘಟಕ ಹಾಗೂ ಯುವ ಘಟಕದಿಂದ ಏರ್ಪಡಿಸಿದ್ದ ಸಂಘಟನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಬಸವಣ್ಣ, ಅಕ್ಕಮಹಾದೇವಿ ಮತ್ತು ಮಲ್ಲಿಕಾರ್ಜುನ ಅಗಡಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮಾತನಾಡಿದರು.

ಯುವ ಘಟಕದ ಉಪಾಧ್ಯಕ್ಷ ಶರಣಪ್ಪ ಮಾಲಿ ಪಾಟೀಲ್‌ ಮಾತನಾಡಿ, ಏಪ್ರಿಲ್‌ ತಿಂಗಳಲ್ಲಿ ಅಕ್ಕಮಹಾದೇವಿ ಜಯಂತಿ ಆಚರಿಸಬೇಕಾಗಿದ್ದು, ಅದರೊಂದಿಗೆ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕಾಗಿದೆ. ಕಾರಣ ಸಮಾಜದ ಹಿರಿಯರು ಸಹಕರಿಸಬೇಕು ಎಂದರು.

ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಶಿವಕುಮಾರ ಜವಳಿ ಮಾತನಾಡಿ, ಬಣಜಿಗ ಸಮಾಜವು ರಾಜ್ಯಕ್ಕೆ ಏಳು ಮುಖ್ಯಮಂತ್ರಿಗಳನ್ನು ಕೊಟ್ಟ ಹೆಗ್ಗಳಿಕೆ ಹೊಂದಿದೆ. 2003ರಲ್ಲಿ ಬಣಜಿಗ ಸಮಾಜ ಪ್ರಾರಂಭವಾಗಿದ್ದು, 2005ರಲ್ಲಿ ಬೃಹತ್‌ ಸಮಾವೇಶ ನಡೆಸಿ ರಾಜ್ಯದಲ್ಲಿ ಗಮನ ಸೆಳೆದಿದೆ ಎಂದರು.

ಯುವ ಘಟಕದ ಗೌರವಾಧ್ಯಕ್ಷ ಸಂತೋಷ, ಮಾಜಿ ಅಧ್ಯಕ್ಷ ಗುಂಡಪ್ಪ ಬಳಿಗಾರ, ಉಪನ್ಯಾಸಕ ಬಸವರಾಜ ಬಳಿಗಾರ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ನೀಟ್‌ ಪರೀಕ್ಷೆಯಲ್ಲಿ 648ನೇ ರ್‍ಯಾಂಕ್‌ ಪಡೆದ ಸಿದ್ದಾರ್ಥ ಜವಳಿ, ಗ್ರಾಪಂ ಸದಸ್ಯೆಯರಾದ ಶರಣಮ್ಮ ಶರಬಣ್ಣ, ದಾಕ್ಷಾಯಿಣಿ ನಾಗರಾಜ, ದಿದ್ದಗಿ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಮಹಾಂತೇಶ, ಎಸ್‌ ಡಿಎಂಸಿ ಅಧ್ಯಕ್ಷ ಸೂಗಪ್ಪ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಸಿದ್ರಾಮಪ್ಪ ಮಾಡಸಿರವಾರ, ಶಾಂತಪ್ಪ ಚಿಂಚಿರಕಿ, ಎಂ.ಲಿಂಗಪ್ಪ ದಢೇಸುಗೂರ, ಎನ್‌.ಅಮರೇಶ, ಬಸವರಾಜ ತೊಂತನಾಳ, ವಿರೂಪಾಕ್ಷಪ್ಪ ಕೆಂಗಲ್‌, ಡಾ| ಮಲ್ಲಿಕಾರ್ಜುನ ಗಿಣಿವಾರ, ಚಂದ್ರಶೇಖರ ಯರದಿಹಾಳ ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.