ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ

• ದೇವದುರ್ಗ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಎರಡಂಕಿ ದಾಟದ ವಿದ್ಯಾರ್ಥಿಗಳ ಪ್ರವೇಶ

Team Udayavani, Jul 2, 2019, 11:27 AM IST

rc-tdy-3..

ದೇವದುರ್ಗ: ಶಿಥಿಲಗೊಂಡ ಸರ್ಕಾರಿ ಬಾಲಕರ ಪ.ಪೂ. ಕಾಲೇಜು ಕಟ್ಟಡ.

ದೇವದುರ್ಗ: ಒಂದೆಡೆ ಉಪನ್ಯಾಸಕರ ಕೊರತೆ ಮತ್ತೂಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿ ಮಧ್ಯೆ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಪ್ರವೇಶ ಕುಸಿತದಿಂದ ಪಟ್ಟಣದ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜು ತನ್ನ ಅಸ್ತಿತ್ವ ಕಳೆದುಕೊಳ್ಳುವತ್ತ ಸಾಗಿದೆ.

ಪಟ್ಟಣದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು 1973ರಲ್ಲಿ ಆರಂಭವಾಗಿದ್ದು ಆಗ ಕಲಾ ವಿಭಾಗ ಮಾತ್ರ ಇತ್ತು. 1993ರಲ್ಲಿ ವಿಜ್ಞಾನ ವಿಭಾಗ ಮತ್ತು 2007ರಲ್ಲಿ ವಾಣಿಜ್ಯ ವಿಭಾಗ ಆರಂಭವಾಗಿದೆ. ಈಗ ಸದ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ವಿದ್ಯಾರ್ಥಿಗಳು ಪ್ರವೇಶ ಪಡೆಯುವುದೇ ಅಪರೂಪವಾಗಿದೆ. ಅದೂ ಪ್ರಸಕ್ತ ವರ್ಷ ಕಲಾ ವಿಭಾಗಕ್ಕೆ 22 ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ವಿಜ್ಞಾನ, ವಾಣಿಜ್ಯ ವಿಭಾಗಕ್ಕೆ ವಿದ್ಯಾರ್ಥಿಗಳೇ ಇಲ್ಲದಂತಾಗಿದೆ. ಕೇವಲ ಕಲಾ ವಿಭಾಗಕ್ಕೆ ಮಾತ್ರ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದು, ಅದು ಎರಡಂಕಿ ಕೂಡ ದಾಟದಿರುವುದು ವಿಪರ್ಯಾಸವಾಗಿದೆ.

ಉಪನ್ಯಾಸಕರ ಹುದ್ದೆ ಖಾಲಿ: ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಪ್ರಾಚಾರ್ಯ ಸೇರಿ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಇಂಗ್ಲಿಷ್‌, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಭೌತಶಾಸ್ತ್ರ, ಗಣಿತ ಶಾಸ್ತ್ರ, ಜೀವಶಾಸ್ತ್ರ, ವಾಣಿಜ್ಯ ಸೇರಿ 8 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಕನ್ನಡ, ಸಮಾಜಶಾಸ್ತ್ರ ಉಪನ್ಯಾಸಕರಿದ್ದು, ಸಮಾಜ ಶಾಸ್ತ್ರ ಉಪನ್ಯಾಸಕರೇ ಪ್ರಭಾರಿ ಪ್ರಚಾರ್ಯರಾಗಿದ್ದಾರೆ. ಎಸ್‌ಡಿಎ, ಪರಿಚಾರಕ ಹುದ್ದೆಗಳು ಖಾಲಿ ಇವೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯದ್ದರಿಂದ ಉಪನ್ಯಾಸಕಿ ಸುಮಲತಾ ಟಿ.ಎ. ಮೈಸೂರು ಜಿಲ್ಲೆಯ ಸರ್ಕಾರಿ ಪ.ಪೂ. ಕಾಲೇಜಿಗೆ ಎರವಲು ಸೇವೆ ಮೇಲೆ ಹೋಗಿದ್ದಾರೆ. ಇನ್ನು ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪರಿಕರಗಳು ಕೋಣೆಯಲ್ಲಿ ನಿರುಪಯುಕ್ತವಾಗಿವೆ.

ವಿಜ್ಞಾನ-ವಾಣಿಜ್ಯ ವಿಭಾಗಕ್ಕೆ ವಿದ್ಯಾರ್ಥಿಗಳೇ ಇಲ್ಲ: ಇನ್ನು ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಹಿನ್ನೆಲೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಮುಂದಾಗುತ್ತಿಲ್ಲ. ಹೀಗಾಗಿ ಕಲಾ ವಿಭಾಗ ಮಾತ್ರ ನಡೆಸಲಾಗುತ್ತಿದೆ.

ಜಾಗೃತಿ ಕೊರತೆ: ಕಾಲೇಜಿನಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕುಸಿತವಾಗುತ್ತಿದ್ದರೂ ಕಾಲೇಜಿನ ಆಡಳಿತ ಮಂಡಳಿ ಜಾಗೃತಿ ಮೂಡಿಸಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವಲ್ಲಿ ವಿಫಲವಾಗಿದೆ. ಇದೇ ರೀತಿ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತ ಸಾಗಿದಲ್ಲಿ ಮುಂದೊಂದು ದಿನ ಕಾಲೇಜನ್ನು ಮುಚ್ಚಿದರೂ ಅಚ್ಚರಿಪಡಬೇಕಿಲ್ಲ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೂಡ ಕ್ರಮ ವಹಿಸುತ್ತಿಲ್ಲ.

ಸೌಲಭ್ಯ ಕೊರತೆ: ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿ ಅಗತ್ಯ ಸೌಲಭ್ಯಗಳ ಕೊರತೆ ಇದೆ. ಹಳೆ ಕೋಣೆಗಳು ಶಿಥಿಲಗೊಂಡಿವೆ. ಹೊಸದಾಗಿ ಕಟ್ಟಡ ಮತ್ತು ಶೌಚಾಲಯ ನಿರ್ಮಿಸಿದ್ದು, ಇನ್ನೂ ಕಟ್ಟಡವನ್ನು ಉದ್ಘಾಟಿಸಿ ಕಾಲೇಜಿಗೆ ಹಸ್ತಾಂತರಿಸಿಲ್ಲ. ಕೂಡಲೇ ಕ್ಷೇತ್ರದ ಶಾಸಕರು, ಅಧಿಕಾರಿಗಳು ಕಾಲೇಜಿನಲ್ಲಿ ಅಗತ್ಯ ಉಪನ್ಯಾಸಕರ ನೇಮಕದ ಜೊತೆಗೆ ವಿದ್ಯಾರ್ಥಿಗಳ ಪ್ರವೇಶ ಹೆಚ್ಚಿಸಲು ಕ್ರಮ ವಹಿಸಬೇಕೆಂದು ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಲಿಂಗಣ್ಣ ಮಕಾಶಿ ಆಗ್ರಹಿಸಿದ್ದಾರೆ.

•ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.