ನಿರುದ್ಯೋಗ ಸಮಸ್ಯೆಗೆ ಕೌಶಲ ಕೊರತೆ ಕಾರಣ


Team Udayavani, Oct 7, 2020, 4:22 PM IST

ನಿರುದ್ಯೋಗ ಸಮಸ್ಯೆಗೆ ಕೌಶಲ ಕೊರತೆ ಕಾರಣ

ರಾಯಚೂರು: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉದ್ಯೋಗಕ್ಕೆ ಬೇಕಾದ ವೃತ್ತಿ ಕೌಶಲ ಕಲಿಸಲು ಶಿಕ್ಷಕರಿಗೆ ಈ ಕಾರ್ಯಾಗಾರ ಹಮ್ಮಿಕೊಂಡಿದ್ದು, ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ್‌ ಸಲಹೆ ನೀಡಿದರು.

ನಗರದ ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆಗಳ ಯೋಜನೆಯಡಿ ಜಿಲ್ಲಾಡಳಿತ, ಉದ್ಯೋಗಾವಕಾಶಗಳು ಮತ್ತು ಕಲಿಕಾ ಕೇಂದ್ರ (ಸಿ-ಇಒಎಲ್‌) ಮತ್ತು ಚೆನ್ನೈನ ಪ್ಯಾನ್‌ಟೆಕ್‌ ಇ-ಲರ್ನಿಂಗ್‌ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಫ್ಯಾಕಲ್ಟಿ ಡೆವಲಪ್‌ಮೆಂಟ್‌ ವರ್ಕ್ ಶಾಪ್‌ ಕಾರ್ಯಾಗಾರಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಕರು ಮಕ್ಕಳಿಗೆ ಹೊಸ ತಂತ್ರಜ್ಞಾನ, ಯಂತ್ರೋಪಕರಣಗಳು ಹಾಗೂ ವಿಜ್ಞಾನಿಗಳ ಸಾಧನೆ ಬಗ್ಗೆ ತಿಳಿ ಹೇಳಬೇಕು. ಕೇಂದ್ರ-ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕಲ್ಪಿಸಿದೆ. ನಿತ್ಯ ತರಗತಿ ಆರಂಭಕ್ಕೂ ಮುನ್ನ ಮಕ್ಕಳಿಗೆ ಕೌಶಲ್ಯ ಬಗ್ಗೆ ತರಬೇತಿ ನೀಡುವ ಕೆಲಸವಾಗಬೇಕು. ಉದ್ಯೋಗಕ್ಕಾಗಿ ಜಿಲ್ಲೆಯಿಂದ ಗುಳೆ ಹೋಗುವವರ ಪ್ರಮಾಣ ಹೆಚ್ಚಿದೆ. ಅದಕ್ಕೆ ಮುಖ್ಯವಾಗಿ ಯುವಕರಲ್ಲಿ ಇರುವ ಕೌಶಲ್ಯದ ಕೊರತೆಯೇ ಕಾರಣ ಎಂದರು.

ಕೋವಿಡ್‌ ಹರಡುವುದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಲಾಕ್‌ ಡೌನ್‌ ವೇಳೆ ಜಿಲ್ಲೆಯ ಅಕ್ಕಿಯನ್ನು ದಕ್ಷಿಣ ಭಾರತದ ರಾಜ್ಯಗಳಿಗೆ ಎಚ್ಚರಿಕೆಯಿಂದ ಸರಬರಾಜು ಮಾಡಲಾಗಿದೆ ಎಂದರು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಶಿಕ್ಷಣ ನಿರ್ದೇಶಕ ಡಾ| ಎಂ.ಜಿ. ಪಾಟೀಲ್‌ ಮಾತನಾಡಿ, ದೇಶದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರ. ಶಿಕ್ಷಕರು ಮಕ್ಕಳಿಗೆ ಹೊಸ ತಂತ್ರಜ್ಞಾನ ಮೂಲಕ ಬೋಧಿ  ಸಬೇಕಿದೆ ಎಂದರು.

ಎಡಿಸಿ ದುರುಗೇಶ, ಡಯಟ್‌ ಕಾಲೇಜು ಪ್ರಾಚಾರ್ಯ ವೃಷಭೇಂದ್ರಯ್ಯ ಸ್ವಾಮಿ, ಜಿಪಂ ಯೋಜನಾ ಧಿಕಾರಿ ಡಾ.ಟಿ. ರೋಣಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿ ಎಂ.ಎಸ್‌. ಗೋನಾಳ, ಚೆನ್ನೈನ ಪ್ಯಾಂಟೆಕ್‌ ಗ್ರುಪ್‌ ಆಫ್‌ ಕಂಪನಿಗಳ ನಿರ್ದೇಶಕ ಸೆಂಥಿಲ್‌ ಕುಮಾರ್‌, ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಶಿ, ಶ್ರೀನಿವಾಸ ಇತರಿದ್ದರು.

ಬಿಇಒ ಚಂದ್ರಶೇಖರ ದೊಡ್ಡಮನಿ ಸ್ವಾಗತಿಸಿದರು. ಮುರಳೀಧರ ಕುಲಕರ್ಣಿ, ಶಿಕ್ಷಕ ಲಕ್ಷ್ಮೀಕಾಂತ ರೆಡ್ಡಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿ ನಿರ್ವಹಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.