ಸಮಾಜದಲ್ಲಿ ಅಶಾಂತಿ ವಾತಾವರಣ ಬೇಡ

Team Udayavani, Apr 4, 2022, 5:49 PM IST

19socity

ಸಿಂಧನೂರು: ಧರ್ಮದಲ್ಲಿ ರಾಜಕಾರಣ ಬೆರೆಸಬೇಡಿ. ಇಂತಹ ಚಟುವಟಿಕೆ ನಡೆಯುತ್ತಿರುವುದರಿಂದಲೇ ಈ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸುವ ಪ್ರಯತ್ನಗಳಾಗುತ್ತಿವೆ ಎಂದು ರಂಭಾಪುರಿ ಖಾಸಾ ಶಾಖಾಮಠದ ಸೋಮನಾಥ ಶಿವಾಚಾರ್ಯರು ಹೇಳಿದರು.

ನಗರದ ಕುಷ್ಟಗಿ ರಸ್ತೆಯಲ್ಲಿನ ಕಾರುಣ್ಯಾಶ್ರಮದಲ್ಲಿ ಭಾನುವಾರ ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಭೀಮೇಶ ಕವಿತಾಳ ಅವರ ಜನ್ಮದಿನದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಯಾವತ್ತೂ ಕೂಡ ಅಶಾಂತಿ ವಾತಾವರಣ ಮೂಡಿಸುವುದು ಒಳ್ಳೆಯದಲ್ಲ. ಇವತ್ತು ಸಾಕಷ್ಟು ಗೊಂದಲ ಸೃಷ್ಟಿಯಾಗಲು ಮೂಲ ಕಾರಣ ರಾಜಕಾರಣ. ರಾಜಕಾರಣಿಗಳು ಈ ಸಮಾಜಕ್ಕೆ ಒಳ್ಳೆಯದನ್ನು ಮಾಡುವ ನಿಟ್ಟಿನಲ್ಲಿ ಆಲೋಚಿಸಬೇಕು. ಉತ್ತಮ ಶಿಕ್ಷಣ ಮೂಲ ಮಂತ್ರವಾಗಬೇಕು. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ಇದೇ ವೇಳೆ ಕಾರುಣ್ಯಾಶ್ರಮಕ್ಕೆ 20 ಗುಂಟೆ ಜಾಗವನ್ನು ಕಲ್ಪಿಸಿದ ಬೂದಿ ಬಸವರಾಜ ಸ್ವಾಮಿ ಅವರನ್ನು ಶ್ಲಾಘಿಸಿದರು. ನಗರಸಭೆ ಸದಸ್ಯ ಶೇಖರಪ್ಪ ಗಿಣಿವಾರ ಮಾತನಾಡಿ, ಇಂದು ಜಗತ್ತಿನಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿದ್ದು, ಜನ ಎಚ್ಚೆತ್ತುಕೊಳ್ಳಬೇಕು. ಅನಗತ್ಯ ವಿಷಯಗಳಿಗೆ ಮಹತ್ವ ನೀಡಬಾರದು. ಕೋಮುದಳ್ಳುರಿಯನ್ನು ಹಬ್ಬಿಸುವ ಪ್ರಯತ್ನಗಳನ್ನು ಎಲ್ಲರೂ ಒಗ್ಗಟ್ಟಾಗಿ ನಿಯಂತ್ರಿಸಲು ಜನ ಜಾಗೃತಗೊಳ್ಳಬೇಕು ಎಂದರು.

ನಿವೃತ್ತ ಪ್ರಾಂಶುಪಾಲ ಡಾ| ಶಾಶ್ವತಸ್ವಾಮಿ ಮುಕ್ಕುಂದಿಮಠ, ಅಮರಸ್ವರ ಸಂಗಮ ಸಂಸ್ಥಾಪಕ ಬಸವರಾಜ ಗಸ್ತಿ, ಕಾರುಣ್ಯಾಶ್ರಮದ ಗೌರವಾಧ್ಯಕ್ಷ ಶರಣು ಪಾ.ಹಿರೇಮಠ, ಕಾರ್ಯಾಧ್ಯಕ್ಷ ವೀರೇಶ ಯಡಿಯೂರಮಠ, ಆಡಳಿತಾಧಿಕಾರಿ ಚನ್ನಬಸವಸ್ವಾಮಿ, ವನಸಿರಿ ಪೌಂಢೇಶನ್‌ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ, ಯುವಶಕ್ತಿ ಟ್ರಸ್ಟ್‌ ರಾಜ್ಯಾಧ್ಯಕ್ಷ ಸಂತೋಷ್‌ ಅಂಗಡಿ, ಮೌಲಪ್ಪ ಮಾಡಸಿರವಾರ, ವೀರೇಶ ಬಾವಿಮನೆ, ಶ್ರೀನಿವಾಸ ಮರಾಠಿ, ಪ್ರದಿಪ್‌ ಜಿಮ್‌, ಬೂದೇಶ ಮರಾಠಿ, ರಾಮಣ್ಣ ಸಾಸಲಮರಿ, ಪತ್ರಕರ್ತ ದುರುಗೇಶ್‌, ಮೌನೇಶ ಬುದ್ದಿನ್ನಿ, ಎಸ್‌.ಎನ್‌. ವೀರೇಶ ಇದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.