ಇಂದು ರಾಯಚೂರು ಕೃಷಿ ವಿವಿ ಘಟಿಕೋತ್ಸವ


Team Udayavani, Feb 26, 2019, 5:24 AM IST

gul-5.jpg

ರಾಯಚೂರು: ಇಲ್ಲಿನ ಕೃಷಿ ವಿಜ್ಞಾನ ವಿವಿ 8ನೇ ಘಟಿಕೋತ್ಸವ ಫೆ.27ರಂದು ಬೆಳಗ್ಗೆ 11 ಗಂಟೆಗೆ ವಿವಿಯ ಪ್ರೇಕ್ಷಾಗೃಹದಲ್ಲಿ ನಡೆಯಲಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿ ಡಾ| ಕೆ.ಎನ್‌.ಕಟ್ಟಿಮನಿ ತಿಳಿಸಿದರು.

ಕೃಷಿ ವಿವಿ ಅಂತಾರಾಷ್ಟ್ರೀಯ ಅತಿಥಿ ಗೃಹದಲ್ಲಿ ಸೋಮವಾರ ಸುದ್ದಿಗೋಷ್ಠಯಲ್ಲಿ ಮಾತನಾಡಿ, ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ ಉಪ ಮಹಾನಿರ್ದೇಶಕ ಡಾ| ನರೇಂದ್ರ ಸಿಂಗ್‌ ರಾಠೊರೆ ಘಟಿಕೋತ್ಸವ ಮುಖ್ಯ ಭಾಷಣ ಮಾಡುವರು. ಕೃಷಿ ಸಚಿವ ಎನ್‌. ಎಚ್‌. ಶಿವಶಂಕರ ರೆಡ್ಡಿ ಆಗಮಿಸುವರು. ರಾಜ್ಯಪಾಲ ಹಾಗೂ ವಿವಿ ಕುಲಾಧಿ ಪತಿ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

2016-17ನೇ ಸಾಲಿನಲ್ಲಿ ಸ್ನಾತಕ ಪದವಿಗೆ 328 ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿಗೆ 203 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಕ್ರಮವಾಗಿ 124 ಮತ್ತು 74 ವಿದ್ಯಾರ್ಥಿನಿಯರಿದ್ದಾರೆ. ಈ ಬಾರಿ 243 ಸ್ನಾತಕ, 93 ಸ್ನಾತಕೋತ್ತರ ಹಾಗೂ 25 ವಿದ್ಯಾರ್ಥಿಗಳಿಗೆ ಡಾಕ್ಟರೇಟ್‌ ಪದವಿ ಸೇರಿ 361 ಹಾಗೂ ಅನುಪಸ್ಥಿತಿಯಲ್ಲಿ 63 ಪದವಿ ಪ್ರದಾನ ಮಾಡಲಾಗುವುದು. ಹಾಗೆಯೇ ಸ್ನಾತಕ ಪದವಿಗಳಲ್ಲಿ 20 ಚಿನ್ನದ ಪದಕ, ಸ್ನಾತಕೋತ್ತರ ಪದವಿಗಳಲ್ಲಿ 10 ಚಿನ್ನದ ಪದಕ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ 8 ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.

ಕೃಷಿ ವಿವಿಯನ್ನು ರೈತಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮ, ಸಂಶೋಧನೆಗಳನ್ನು ನಡೆಸಲಾಗುತ್ತಿದೆ. ಆರು ಕೃಷಿ ವಿಜ್ಞಾನ ಕೇಂದ್ರ ಹಾಗೂ ನಾಲ್ಕು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳಿಂದ ವಿಸ್ತರಣೆ ಕಾರ್ಯ ಪರಿಶೀಲನೆ, ಮಾರ್ಪಾಡು ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಿ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ವಿಭಾಗಗಳಿಗೆ ಸಂಬಂಧಿಸಿ ಹೊಸ ಯೋಜನೆ ರೂಪಿಸಲಾಗಿದೆ. ಆಹಾರ ತಂತ್ರಜ್ಞಾನದಲ್ಲಿ ಸ್ನಾತಕ ಪದವಿ ಆರಂಭಿಸುವ ಕುರಿತು ಚಿಂತನೆ ನಡೆಸಲಾಗಿದೆ.

ನೀರು ನಿರ್ವಹಣೆ ಮತ್ತು ಸಮಗ್ರ ಜಲಾನಯನ ಅಭಿವೃದ್ಧಿ, ನಿರಂತರ ಕೃಷಿ, ನಿಖರ ಕೃಷಿ, ಆಹಾರ ಸುರಕ್ಷತೆ, ಅಫ್ಲಾಟಾಕ್ಸಿನ್‌ ಸಂಶೋಧನೆ, ಪೀಡೆನಾಶಕ ಮುಕ್ತ ಆಹಾರ ಕುರಿತು ನಿರಂತರ ಸಂಶೋಧನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. 

ಅಧಿಕ ಇಳುವರಿಯ ಭತ್ತದ ನೂತನ ತಳಿ ಜಿಎನ್‌ವಿ 10-89, ಹತ್ತಿ ತಳಿ ಬಿಜಿಡಿಎಸ್‌-1063, ಮೆಣಸಿನಕಾಯಿ ಹೈಬ್ರಿಡ್‌ ಜೆಸಿಎಚ್‌-42 ಹಾಗೂ ಸಿಒ-06027 ಕಬ್ಬಿನ ತಳಿ ಸಂಶೋಧಿಸಿ ಪ್ರಯೋಗ ಮಾಡಲಾಗಿದೆ. ತಂತ್ರಜ್ಞಾನ ಅಭಿವೃದ್ಧಿ ಮತ್ತು ವಿವಿಧ ಬೆಳೆಗಳ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ವಿವಿಯು ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಒಟ್ಟು 2056.04ಲಕ್ಷ ಮೌಲ್ಯದ ಹೊಸ ಯೋಜನೆ ಪಡೆದಿದೆ ಎಂದು ತಿಳಿಸಿದರು.

ವಿವಿಯ ಸಾಕಷ್ಟು ವಿದ್ಯಾರ್ಥಿಗಳು ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಜ್ಯೂನಿಯರ್‌ ಫೆಲೋಶಿಪ್‌ಗೆ ಆಯ್ಕೆಯಾಗಿದ್ದಾರೆ. ಇಬ್ಬರು ಐಸಿಎಆರ್‌ ಜೆಆರ್‌ಎಫ್‌ ಹಾಗೂ ವಿದ್ಯಾರ್ಥಿ ಗೇಟ್‌ ಶಿಷ್ಯವೇತನ ಪಡೆದಿದ್ದಾರೆ. ಎಸ್‌ಆರ್‌ಎಫ್‌ ಶಿಷ್ಯವೇತನ ಮೂವರಿಗೆ, ನವದೆಹಲಿಯ ವಿಜ್ಞಾನ ತಂತ್ರಜ್ಞಾನ ಇಲಾಖೆಯಿಂದ ಆರು ಸಂಶೋಧನಾ ವಿದ್ಯಾರ್ಥಿಗಳು ಇನ್‌ಸ್ಪೇರ್‌ ಫೆಲೋಶಿಪ್‌, ಒಬ್ಬ ವಿದ್ಯಾರ್ಥಿಗೆ ಇಕ್ರಿಸ್ಯಾಟ್‌ ಫೆಲೋಶಿಪ್‌, ಮೂರು ವಿದ್ಯಾರ್ಥಿಗಳಿಗೆ ಯುಜಿಸಿ ಸಂಸ್ಥೆಯ ರಾಜೀವಗಾಂಧಿ ಫೆಲೋಶಿಪ್‌, ಐವರು ವಿದ್ಯಾರ್ಥಿಗಳಿಗೆ ಮೌಲಾನಾ ಆಜಾದ್‌ ಫೆಲೋಶಿಪ್‌ ಹಾಗೂ ಒಬ್ಬ ವಿದ್ಯಾರ್ಥಿಗೆ ಡೌವ್‌ ಅಗ್ರೊ ಸೈನ್ಸ್‌ ಫೆಲೋಶಿಪ್‌ ಲಭಿಸಿದೆ. ಒಬ್ಬ ವಿದ್ಯಾರ್ಥಿಗೆ ಐಸಿಆರ್‌ ಎಸ್‌ಆರ್‌ಎಫ್‌ ಹಾಗೂ ಒಬ್ಬ ವಿದ್ಯಾರ್ಥಿಗೆ ಸಿಎಸ್‌ಐಆರ್‌ ಫೆಲೋಶಿಪ್‌ ಲಭಿಸಿದೆ ಎಂದು ವಿವರಿಸಿದರು.

ಕುಲಸಚಿವ ಡಾ| ಎಂ.ಬಿ.ಪಾಟೀಲ, ಕೃಷಿ ವಿಸ್ತರಣಾ ನಿರ್ದೇಶಕ ಡಾ| ಬಿ.ಎಂ.ಚಿತ್ತಾಪುರ, ಶಿಕ್ಷಣ ನಿರ್ದೇಶಕ ಡಾ| ಎಸ್‌.ಕೆ.ಮೇಟಿ, ಸಂಶೋಧನಾ ನಿರ್ದೇಶಕ ಡಾ| ಬಿ.ಕೆ.ದೇಸಾಯಿ, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ| ಪ್ರಮೋದ ಕಟ್ಟಿ, ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ| ಎಂ.ಶೇಖರಗೌಡ ಇತರರು ಇದ್ದರು.

ಶಿಕ್ಷಣ ಸಂಶೋಧನೆಗೆ ಬಜೆಟ್‌ನಲ್ಲಿ 26.5 ಕೋಟಿ ಶಿಕ್ಷಣ ಸಂಶೋಧನೆ ಮತ್ತು ವಿಸ್ತರಣೆಗಾಗಿ ಸರ್ಕಾರಕ್ಕೆ 155 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಈಚೆಗೆ ಮಂಡನೆಯಾದ ಬಜೆಟ್‌ನಲ್ಲಿ 26.5 ಕೋಟಿ ರೂ. ಮಾತ್ರ ನೀಡಲಾಗಿದೆ. ಅದರಲ್ಲಿ 11 ಕೋಟಿ ರೂ. ಸಂಶೋಧನೆಗೆ ಹಾಗೂ 15.5 ಕೋಟಿ ಶಿಕ್ಷಣಕ್ಕೆ ಮೀಸಲಿಡಲಾಗಿದೆ. ಸಿರಿಧಾನ್ಯಗಳ ಉತ್ತೇಜನಕ್ಕೆ ವಿಶೇಷ ಒತ್ತು ನೀಡಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸರ್ಕಾರದಿಂದ 3.75 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಲಬುರಗಿ, 

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.