ಜೀವಜಲಕ್ಕೆ ಗ್ರಾಮಸ್ಥರ ಪರದಾಟ

Team Udayavani, Jan 1, 2018, 3:37 PM IST

ray-3.jpg

ಹಟ್ಟಿ ಚಿನ್ನದ ಗಣಿ: ಹಟ್ಟಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಮೋಟಾರ್‌ ದುರಸ್ತಿಗೀಡಾಗಿದ್ದು, ಕಳೆದ 20 ದಿನಗಳಿಂದ ಹಟ್ಟಿ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜೀವಜಲಕ್ಕಾಗಿ ತತ್ತರಿಸುವಂತಾಗಿದೆ.

ಕೃಷ್ಣಾ ನದಿಯಿಂದ ಪಟ್ಟಣಕ್ಕೆ ನೀರು ಪಂಪ್‌ ಮಾಡುವ ಮೋಟಾರ್‌ ಸುಟ್ಟುಹೋಗಿದ್ದು ರಿಪೇರಿ ಮಾಡಿಸುವವರೇ ಇಲ್ಲದಂತಾಗಿದೆ. ಈ ಹಿಂದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಖಾಸಗಿ ಏಜೆನ್ಸಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿತ್ತು. ಅವರ ಅವಧಿ ಮುಗಿದಿದ್ದು, ಈಗ ನಿರ್ವಹಣೆ ಮಾಡುವವರೆ ಇಲ್ಲದಂತಾಗಿದೆ.

ಪರಿಣಾಮ ಪೈದೊಡ್ಡಿ, ಗುರುಗುಂಟಾ, ಹಟ್ಟಿ, ಕೋಠಾ ಪಂಚಾಯತ್‌ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಸಮಸ್ಯೆ ತಲೆದೋರಿದೆ.

ಪರ್ಯಾಯ ಮಾರ್ಗ: ಹಟ್ಟಿ ಪಟ್ಟಣದ ಜನತೆ ನೀರಿನ ಸಮಸ್ಯೆಯಿಂದ ರೋಸಿ ಹೋಗಿ ಪ್ರತಿಭಟಿಸಿದಾಗ ಸ್ಥಳೀಯ ಗ್ರಾಮ ಪಂಚಾಯತಿಯಿಂದ ಜಿಲ್ಲಾ ಪಂಚಾಯತ್‌ಗೆ ಮನವಿ ಮಾಡಿಕೊಂಡಿದ್ದರಿಂದ ಜಿಪಂ ವತಿಯಿಂದ ತಾತ್ಕಾಲಿಕವಾಗಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ.

ಹಟ್ಟಿ ಪಟ್ಟಣದ 12 ವಾರ್ಡ್‌ಗಳಲ್ಲಿ ಸುಮಾರು 26 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದೆ. ಪ್ರತಿ ವಾರ್ಡಿಗೆ ಎರಡು ದಿನಕ್ಕೊಮ್ಮೆ ಒಂದೇ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದ್ದು, ಇದು ಸಾಲುತ್ತಿಲ್ಲ. ನೀರಿನ ಅಭಾವದಿಂದ ನಿವಾಸಿಗಳು ಕ್ಯಾಂಪಿನ ಪೊಲೀಸ್‌ ಠಾಣೆ, ಲಿಂಗಾವಧೂತ ದೇವಸ್ಥಾನದ ನಲ್ಲಿಗಳಲ್ಲಿ ಮುಗಿಬಿದ್ದು ಅಹೋರಾತ್ರಿ ನೀರು ತರುವಂತಾಗಿದೆ. ಸಮಸ್ಯೆಗಳನ್ನು ನಿಭಾಯಿಸಬೇಕಾದ ಗ್ರಾಮ ಪಂಚಾಯ್ತಿ ಸದಸ್ಯರು ನಾಪತ್ತೆಯಾಗಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸಂಬಂಧಪಟ್ಟವರು ನೀರಿನ ಬವಣೆ ನೀಗಿಸದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಂ.ಸಿ. ಚಂದ್ರಶೇಖರ, ಜಯ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಎಚ್ಚರಿಸಿದ್ದಾರೆ. 

ಚಳಿಗಾಲದಲ್ಲಿ ನಡಗುತ್ತಾ ಮಧ್ಯರಾತ್ರಿಯಲ್ಲಿ ಹುಳು-ಹುಪ್ಪಡಿಗಳ ಭಯ ಭೀತಿಯಲ್ಲಿ ನೀರು ತರುವಡಾತಲ್ಕ. ಕೂಡಲೆ ಸಮಸ್ಯೆ ನಿವಾರಿಸಬೇಕು. 
 ಶರಣುಗೌಡ ಗುರಿಕಾರ, ಹಟ್ಟಿ ಗ್ರಾಮದ ನಿವಾಸಿ.

ಮೋಟಾರ್‌ ರಿಪೇರಿಗೆ ಜಿಲ್ಲಾ ಪಂಚಾಯತಿಗೆ ಪತ್ರ ಬರೆದಿದ್ದು, 1,98,000 ರೂ. ಬಿಡುಗಡೆ ಮಾಡಿದೆ. ಮೋಟಾರ್‌ನ್ನು ದುರಸ್ತಿಗಾಗಿ ಹೈದರಾಬಾದ್‌ ಗೆ ಕೊಂಡೊಯ್ಯಲಾಗಿದೆ. ರಿಪೇರಿಯಾದ ಕೂಡಲೇ ಅಳವಡಿಸಿ ನೀರು ಪೂರೈಸಲು ಕ್ರಮ
ವಹಿಸಲಾಗುವುದು.
 ಶಂಕರಗೌಡ ಬಳಗಾನೂರು, ಅಧ್ಯಕ್ಷರು ಗ್ರಾಪಂ ಹಟಿ

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.