ಸ್ಪೀಕರ್ ನಿರ್ಧಾರವನ್ನು ಸುಪ್ರೀಂ ಎತ್ತಿ ಹಿಡಿಯುವ ವಿಶ್ವಾಸವಿದೆ: ಸಿದ್ದರಾಮಯ್ಯ

Team Udayavani, Oct 1, 2019, 1:10 PM IST

ರಾಯಚೂರು: ಅನರ್ಹ ಶಾಸಕರ ಪ್ರಕರಣದಲ್ಲಿ ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಮೀಪದ ಯರಮರಸ್ ಸರ್ಕ್ಯೂಟ್ ಹೌಸ್ ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅನರ್ಹ ಶಾಸಕರ ವಿಚಾರದ ಬಗ್ಗೆ ನಾನು ಹೆಚ್ಚೇನು ಮಾತನಾಡುವುದಿಲ್ಲ. ಪಕ್ಷಾಂತರ ಕಾಯ್ದೆ ಪ್ರಕಾರವೇ ಅನರ್ಹತೆ ಮಾಡಲಾಗಿದೆ. 15 ಶಾಸಕರು ಯಾವುದೇ ಬಲವಾದ ಕಾರಣಕ್ಕೆ ರಾಜೀನಾಮೆ ನೀಡಿಲ್ಲ. ಬಿಜೆಪಿ ಸೇರಬೇಕು ಎಂಬ ಏಕೈಕ ಕಾರಣಕ್ಕೆ ರಾಜೀನಾಮೆ ನೀಡಿದ್ದರಿಂದ ಅವರ ವಿರುದ್ಧ ಅನರ್ಹತೆ ಅಸ್ತ್ರ ಪ್ರಯೋಗಿಸಲಾಯಿತು ಎಂದರು.

ಪ್ರಮಾಣ ವಚನ ಸ್ವೀಕರಿಸುವಾಗಲೇ ಅನರ್ಹ ಶಾಸಕರಿಗೂ ಸಚಿವ ಸ್ಥಾನ ನೀಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಅಮಿತ್ ಶಾ ಅನರ್ಹರಿಗೆ ಟಿಕೆಟ್ ಪಕ್ಕಾ ಎಂದಿದ್ದರು. ಈಗ ಅವರೆಲ್ಲಿ ಎಂದು ಪ್ರಶ್ನಿಸಿದರು.

ಅನರ್ಹರು ಮತ್ತೆ ಪಕ್ಷ ಬಂದಲ್ಲಿ ಸೇರಿಸಿಕೊಳ್ಲುವ ಪ್ರಶ್ನೆಯೆ ಇಲ್ಲ ಎಂದು ಪುನರುಚ್ಛರಿಸಿದರು.

ಮೂರು ದಿನದ ಅಧಿವೇಶನದಲ್ಲಿ ಏನು ಚರ್ಚೆ ಮಾಡಲು ಸಾಧ್ಯ. ಬೆಳಗಾವಿಯಲ್ಲಿ  20  ದಿನ ನಡೆಸುವಂತೆ ಪತ್ರ ಬರೆಯಲಾಗಿತ್ತು. ನೆರೆ ಬರ ವಿಚಾರವೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ