ನಮಗೆ ಪಿಒಪಿ ಗಣೇಶನೇ ಬೇಕ್ರೀ..!


Team Udayavani, Aug 22, 2017, 3:51 PM IST

ray 1.jpg

ರಾಯಚೂರು: ಒಂದೆಡೆ ಜಿಲ್ಲಾಡಳಿತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಬಳಸಿ ನಿರ್ಮಿಸಿದ ಗಣೇಶಗಳನ್ನು ಪ್ರತಿಷ್ಠಾಪಿಸದಂತೆ ಆದೇಶ ನೀಡುತ್ತಿದ್ದರೆ, ಮತ್ತೂಂದೆಡೆ ಜನ ನಮಗೇ ಬಣ್ಣದ ಗಣೇಶಗಳೇ ಬೇಕು ಎನ್ನುತ್ತಿರುವುದು ವಿಶೇಷ. ಹೀಗಾಗಿ ನಗರದಲ್ಲಿ ಈ ಬಾರಿಯೂ ಗಣೇಶ ವಿಗ್ರಹಗಳ ಮಾರಾಟ ಎಂದಿಗಿಂತ ಜೋರಾಗಿ ನಡೆಯುತ್ತಿದೆ.
ಗಣೇಶ ಚತುರ್ಥಿ ಇನ್ನೂ ಮೂರ್‍ನಾಲ್ಕು ತಿಂಗಳು ಇರುವಾಗಲೇ ವ್ಯಾಪಾರಿಗಳು ತಮ್ಮ ಕಾಯಕ ಶುರು ಮಾಡಿದ್ದಾರೆ. ಲಕ್ಷಾಂತರ ಬಂಡವಾಳ ಹೂಡಿದ್ದು, ಈ ಸಂದರ್ಭದಲ್ಲಿ ಉತ್ತಮ ಆದಾಯ ಮಾಡಿಕೊಳ್ಳುತ್ತಾರೆ. ಕಳೆದ ಬಾರಿಗಿಂತ ಈ ಬಾರಿ ಗಣೇಶ ವಿಗ್ರಹಗಳ ದರ  ಬಾರಿಯಾಗಿದೆ. ಆದರೂ ಜನ ಯಾವುದಕ್ಕೂ ಹಿಂಜರಿಯದೆ ಮುಂಗಡ ಕೊಟ್ಟು ಗಣೇಶ ಮೂರ್ತಿಗಳನ್ನು ಕಾಯ್ದಿರಿಸುತ್ತಿದ್ದಾರೆ. ಬೇರೆ ಕಡೆಯಿಂದಲೂ ಬರ್ತಾರೆ: ಕೆಲವೆಡೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇ ಧಿಸಲಾಗಿದೆ. ಹೀಗಾಗಿ ದಾವಣೆಗೆರೆ, ಬಳ್ಳಾರಿ, ಮಂತ್ರಾಲಯ ಸೇರಿ ವಿವಿಧೆಡೆಯಿಂದ ಆಗಮಿಸುವ ಗಜಾನನ ಮಂಡಳಿಗಳ ಸದಸ್ಯರು ದುಬಾರಿ ಬೆಲೆ ನೀಡಿ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸಿದ್ದಾರೆ. ಇನ್ನು ಸ್ಥಳೀಯರು ಕೂಡ ಮೆಹಬೂಬ್‌ ನಗರ, ಕರೋಲ್‌, ಮಕ್ತಾಲ್‌, ಹೈದರಾಬಾದ್‌ಗೆ ತೆರಳಿ ಗಣೇಶ ಮೂರ್ತಿ ತರುತ್ತಾರೆ. ಬೆಲೆಯಲ್ಲಿ ರಾಜಿಯಿಲ್ಲ: ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಇಲ್ಲಿನ ವ್ಯಾಪಾರಿಗಳು ಬೆಲೆಯಲ್ಲಿ ರಾಜಿ ಮಾಡಿಕೊಳ್ಳುತ್ತಿಲ್ಲ. ಒಂದೂವರೆ ಅಡಿಯಿಂದ 11 ಅಡಿ ಎತ್ತರದ ಗಣೇಶ ಮೂರ್ತಿಗಳನ್ನು ತಯಾರಿಸಲಾಗಿದೆ. ಮೂರು ಸಾವಿರ ರೂ. ನಿಂದ 30 ಸಾವಿರ ರೂ. ವರೆಗೆ ದರ ನಿಗದಿ ಮಾಡಲಾಗಿದೆ. ಗಣೇಶ ಚತುರ್ಥಿ ಇನ್ನೂ ನಾಲ್ಕು ದಿನ ಇರುವಾಗಲೇ ಬಹುತೇಕ ಗಣೇಶ ಮೂರ್ತಿಗಳು ಮಾರಾಟವಾಗಿವೆ. ಇನ್ನೂ ಗಣೇಶ ಮೂರ್ತಿಗಳಿಗೆ ಅಂತಿಮ ಸ್ಪರ್ಶದ ಕೆಲಸಗಳು ಬಾಕಿ ಇರುವಾಗಲೇ ಮೂರ್ತಿಗಳನ್ನು ಕಾಯ್ದಿರಿಸಲಾಗಿದೆ. ಹೀಗಾಗಿ ವರ್ತಕರು ಈ ಬಾರಿ ಸ್ವಲ್ಪ ಜಾಸ್ತಿಯೇ ಖುಷಿಯಲ್ಲಿದ್ದಾರೆ. ಅವರೇ ಹೇಳುವಂತೆ ಬೇಡಿಕೆ ಹೆಚ್ಚಾಗಿದ್ದು, ನಾವು ಬೆಲೆಯಲ್ಲಿ ರಾಜಿಯಾಗುತ್ತಿಲ್ಲ ಎನ್ನುತ್ತಾರೆ. ಕಟ್ಟುನಿಟ್ಟಿನ ಆದೇಶವಿಲ್ಲ: ಇನ್ನು ಪಿಒಪಿ ಬಗ್ಗೆ ಎಲ್ಲೆಡೆ ಜಾಗೃತಿ ಹೆಚ್ಚುತ್ತಿದ್ದರೂ ಜಿಲ್ಲೆಯಲ್ಲಿ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳಾಗುತ್ತಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ಅ ಧಿಕಾರಿಗಳು ಈಚೆಗೆ ತೆರಳಿ ಪಿಒಪಿ ಗಣೇಶ ನಿರ್ಮಿಸದಂತೆ ತಾಕೀತು ಮಾಡಿದ್ದು, ಇದಕ್ಕೆ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನೀವು ಹೇಳುವುದಾದರೆ ಮೊದಲೇ ತಿಳಿಸಬೇಕು. ಈಗಾಗಲೇ ಲಕ್ಷಾಂತರ ಬಂಡವಾಳ ಹೂಡಿದ್ದು, ನಾವು ನಷ್ಟ ಎದುರಿಸಬೇಕಾಗುತ್ತದೆ. ಬೇಕಿದ್ದರೆ ಜನರಿಗೆ ಖರೀದಿಸದಂತೆ ಜಾಗೃತಿ ಮೂಡಿಸುವಂತೆ ವ್ಯಾಪಾರಿಗಳು ತಿಳಿಸುತ್ತಿದ್ದಾರೆ. ಇನ್ನು ಜನರು ಕೂಡ ಇದಕ್ಕೆ ಸಹಮತ ತೋರುತ್ತಿಲ್ಲ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲೇ ಪಿಒಪಿ ಗಣೇಶ ಮೂರ್ತಿಗಳ ಬಳಕೆಗೆ ಕಡಿವಾಣ ಹಾಕುವುದು ಸರಿಯಲ್ಲ ಎಂದು ಹಲವರು ವಾದಿಸಿದ್ದರು. ಹೀಗಾಗಿ ಜಿಲ್ಲೆಯ ಮಟ್ಟಿಗೆ ಬಣ್ಣದ ಗಣೇಶನಿಗೆ ಯಾವುದೇ ಅಡೆತಡೆಗಳು ಕಂಡು ಬರುತ್ತಿಲ್ಲ. ನಗರದಲ್ಲಿ ಸಿದ್ಧತೆ ಜೋರು: ಇನ್ನು ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ನಗರದಲ್ಲಿ ಸಿದ್ಧತೆ ಚಟುವಟಿಕೆಗಳು ಗರಿಗೆದರಿವೆ. ಎಂದಿನಂತೆ ಮಂಡಳಿಗಳು, ಸಮಿತಿಗಳು ವೇದಿಕೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿವೆ. ಚಂದ್ರಮೌಳೇಶ್ವರ ವೃತ್ತ, ಸರಾಫ್‌ ಬಜಾರ್‌, ಕಲ್ಲಾನೆ, ಜೈನ ಮಂದಿರ ಸೇರಿದಂತೆ ಪ್ರಮುಖ ಬಡಾವಣೆಗಳಲ್ಲಿ ಬೃಹತ್‌ ವೇದಿಕೆ ಸಿದ್ಧತೆ ಕಾರ್ಯ ಶುರುವಾಗಿದೆ. ಇನ್ನು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ನಗರಸಭೆ ಕೂಡ ಸ್ವತ್ಛತೆ, ರಸ್ತೆ ದುರಸ್ತಿಯಂಥ ಕಾರ್ಯಗಳಿಗೆ ಮುಂದಾಗಿದೆ.

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.