ಯೋಗ ಆಗಲಿ ಜೀವನದ ಭಾಗ


Team Udayavani, Jun 22, 2018, 4:39 PM IST

raichuru-1.jpg

ರಾಯಚೂರು: ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಜಿಲ್ಲಾದ್ಯಂತ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬೆಳಗಿನ ಜಾವ ಒಂದೆಡೆ ಸೇರಿದ ಜನ ವಿವಿಧ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಿದರು. ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಯೋಗಾಭ್ಯಾಸ ನಡೆಯಿತು.

ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್‌ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಮಾತನಾಡಿ, ಸದೃಢ ಆರೋಗ್ಯ ಕಾಪಾಡಲು, ದೇಹಕ್ಕಂಟಿದ ರೋಗಗಳ ನಿವಾರಣೆಗೆ ಯೋಗವೇ ದಿವ್ಯ ಔಷಧ. ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ವೈದ್ಯರ ಬಳಿಗೆ ತೆರಳುವ ಅನಿವಾರ್ಯತೆಯೇ ಬರುವುದಿಲ್ಲ. 

ಯೋಗ ದಿನದಂದು ಮಾತ್ರ ಯೋಗಾಸನ ಮಾಡಿದರೆ ಸಾಲದು ಪ್ರತಿನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಯೋಗಕ್ಕೆ ಕೇವಲ ದೇಹದ ಕಾಯಿಲೆಗಳನ್ನು ಮಾತ್ರವಲ್ಲದೇ ಮನಸಿನ
ಕಾಯಿಲೆಗಳನ್ನು ದೂರ ಮಾಡುವ ಶಕ್ತಿ ಇದೆ. ಯಾವ ವ್ಯಕ್ತಿ ಯೋಗ ಸಾಧನೆ ಮಾಡುವನೋ ಆತನ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.

ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನವನ್ನು ಕಳೆದ ನಾಲ್ಕು ವರ್ಷದಿಂದ ವಿಶ್ವದ ಎಲ್ಲ ರಾಷ್ಟ್ರಗಳು ಆಚರಿಸುತ್ತಿವೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿನಿತ್ಯ 3ರಿಂದ 4 ಜನರಲ್ಲಿ ಒಬ್ಬರು ಖನ್ನತೆಯಿಂದ ಬಳಲುತ್ತಿದ್ದಾರೆ. ನಿತ್ಯ ಯೋಗ ಮಾಡುವುದರಿಂದ ಖನ್ನತೆಯಿಂದ ದೂರವಿರಬಹುದು ಎಂದರು.

ಯೋಗದ ಬಗ್ಗೆ ವಿಶ್ವಾದ್ಯಂತ ಪ್ರಚಾರ ನಡೆಯುತ್ತಿದೆ. ಕರ್ನಾಟಕದ ಯೋಗ ಗುರುಗಳು ಇಡೀ ಜಗತ್ತಿನಲ್ಲಿ ಯೋಗದ ಕುರಿತು ಪ್ರಚಾರ ಮಾಡುವಲ್ಲಿ ಸಫಲರಾಗಿದ್ದಾರೆ. ಮೈಸೂರು ಜಗತ್ತಿನ ಯೋಗ ಕೇಂದ್ರದ ಸ್ಥಾನವಾಗಿದ್ದು, ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದ ಒಂದು ಭಾಗವಾಗಿಸಬೇಕು ಎಂದರು. 

ಯೋಗ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಡಿ.ಕಿಶೋರಬಾಬು, ಅಪರ ಜಿಲ್ಲಾಧಿಕಾರಿ ಜಿ.ಗೋವಿಂದರೆಡ್ಡಿ, ಕೆಜಿಎಎಂಒ ರಾಜ್ಯಾಧ್ಯಕ್ಷ ಆಯುಷ್‌ ಡಾ| ಶಂಕರಗೌಡ ಎಸ್‌ .ಪಾಟೀಲ, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ರೂಪಾಬಾಯಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ ಗುಣಾರೆ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿವಿಧೆಡೆ ಯೋಗ ದಿನಾಚರಣೆ: ಜಿಲ್ಲಾ ಕಾರಾಗೃಹದಲ್ಲೂ ಯೋಗ ದಿನ ಆಚರಿಸಲಾಯಿತು. ಆಯುಷ್‌ ಜಿಲ್ಲಾಧಿಕಾರಿ ಡಾ| ರೂಪಾಬಾಯಿ ಕಾರ್ಯಕ್ರಮ ಉದ್ಘಾಟಿಸಿದರು. ನವೋದಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲೂ ಯೋಗ ದಿನಾಚರಣೆ ನಡೆಯಿತು. ಸಂಸ್ಥೆ ಮುಖ್ಯಸ್ಥ ಎಸ್‌.ಆರ್‌.ರೆಡ್ಡಿ ನೇತೃತ್ವದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಗರದ ಸೋಮಸುಭದ್ರಮ್ಮ ರಾಮನಗೌಡ ಮಹಿಳಾ ವಿದ್ಯಾಲಯದಲ್ಲೂ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ವತಿಯಿಂದ ಯೋಗ ದಿನ ಆಚರಿಸಲಾಯಿತು. ಸಂಸ್ಥೆ ಸಂಚಾಲಕ ಮಲ್ಲಿಕಾರ್ಜುನ ಸ್ವಾಮಿ ಯೋಗದ ಕುರಿತು ಉಪನ್ಯಾಸನೀಡಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.