Udayavni Special

ಮೊದಲ ಸುತ್ತಲ್ಲಿ ರಾಯಚೂರಿಗಿಲ್ಲ ಪ್ರಾತಿನಿಧ್ಯ

Team Udayavani, Aug 21, 2019, 5:15 PM IST

Udayavani Kannada Newspaper

ರಾಯಚೂರು: ಹಿಂದುಳಿದ ಜಿಲ್ಲೆಗೆ ಪ್ರಾತಿನಿಧ್ಯ, ಪರಿಶಿಷ್ಟ ಪಂಗಡದ ಕೋಟಾದಡಿ ಜಿಲ್ಲೆಗೆ ಸಿಗಬಹುದು ಎಂಬ ಸಚಿವ ಸ್ಥಾನ ಕೈ ತಪ್ಪಿದೆ. ಆದರೆ, ಈಗ 17 ಶಾಸಕರು ಮಾತ್ರ ಸಂಪುಟ ಸೇರಿದ್ದು, ಎರಡನೇ ಹಂತದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ಒಲಿಯಬಹುದು ಎಂಬ ಆಶಾಭಾವ ಮಾತ್ರ ಉಳಿದಿದೆ.

ಹಿಂದುಳಿದ ಎಂಬ ಕಾರಣಕ್ಕೆ ಹೈ-ಕ ಭಾಗಕ್ಕೆ ನಂಜುಂಡಪ್ಪ ವರದಿ ಅನ್ವಯ ಸಿಗಬೇಕಿದ್ದ ಸಚಿವ ಸ್ಥಾನಗಳಲ್ಲಿ ಅರ್ಧದಷ್ಟು ಕೂಡ ಸಿಗದಿರುವುದು ವಿಪರ್ಯಾಸ. ಹೈ-ಕ ಭಾಗದ ಆರು ಜಿಲ್ಲೆಗಳಿಗೆ ಒಂದು ಮಾತ್ರ ಸಚಿವ ಸ್ಥಾನ ಲಭಿಸಿದೆ.

ಬಿ.ಶ್ರೀರಾಮುಲು ಬಳ್ಳಾರಿಯವರಾದರೂ ಗೆದ್ದಿದ್ದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದಿಂದ. ಹೀಗಾಗಿ ಅವರಿಗೆ ಸಿಕ್ಕ ಸಚಿವ ಸ್ಥಾನ ಹೈ-ಕಕ್ಕೆ ಸಿಕ್ಕಿದ್ದು ಎನ್ನಲಾಗದು. ಆದರೆ, ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಜಿಲ್ಲೆಗೆ ಒಂದು ಸಚಿವ ಸ್ಥಾನದ ಜತೆಗೆ ಮೂರು ನಿಗಮ ಮಂಡಳಿ ಸ್ಥಾನಗಳು ಲಭಿಸಿದ್ದವು. ಅದಕ್ಕೆ ಹೋಲಿಸಿದರೆ ಹೊಸ ಸರ್ಕಾರದಿಂದ ಜಿಲ್ಲೆಗೆ ಭಾರೀ ಅನ್ಯಾಯವಾಗಿರುವುದು ಖಚಿತ. ಹಿಂದಿನ ಸರ್ಕಾರ ಬೀಳಲು ಕಾರಣರಾದ ಶಾಸಕರಲ್ಲಿ ಜಿಲ್ಲೆಯ ಮಸ್ಕಿ ಕ್ಷೇತ್ರದ ಪ್ರತಾಪಗೌಡ ಪಾಟೀಲ ಕೂಡ ಒಬ್ಬರು. ಒಂದು ವೇಳೆ ಅವರ ರಾಜೀನಾಮೆ ಅಂಗೀಕಾರವಾಗಿದ್ದೇ ಆದಲ್ಲಿ ಅವರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದರೋ ಏನೋ? ಆದರೆ, ಈಗ ಅವರು ಅಡಕತ್ತರಿಯಲ್ಲಿ ಸಿಲುಕಿದ್ದು, ಅವರ ಶಾಸಕತ್ವ ಅನರ್ಹ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಮುಂದೆ ಅವರ ರಾಜೀನಾಮೆ ಅಂಗೀಕಾರವಾಗಿ ಉಪಚುನಾವಣೆ ನಡೆದು ಅವರೇ ಗೆಲುವು ಸಾಧಿಸುವರೋ, ಸ್ಪೀಕರ್‌ ನಿರ್ಧಾರ ಎತ್ತಿ ಹಿಡಿದು ಶಾಸಕರು ಅನರ್ಹಗೊಳ್ಳುವರೋ ಎಂಬ ಕುತೂಹಲ ಮೂಡಿದೆ. ಬಹುಶಃ ಈ ಪ್ರಕರಣ ಮುಂದಿಟ್ಟುಕೊಂಡು ಸಿಎಂ ಬಿ.ಎಸ್‌.ಯಡಿಯೂರಪ್ಪ ಜಿಲ್ಲೆಯನ್ನು ಸಚಿವ ಸ್ಥಾನದಿಂದ ಹೊರಗಿಟ್ಟಿರುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು.

ಹೈ-ಕಮಾಂಡ್‌ ನಿರ್ಧಾರ: ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಅನೇಕ ಆಕಾಂಕ್ಷಿಗಳಿರುವ ಕಾರಣ ಹೈಕಮಾಂಡ್‌ ನಿರ್ಧಾರದ ಪ್ರಕಾರ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ವರಿಷ್ಠರತ್ತ ಬೆರಳು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಇದರಿಂದ ಯಾರು ಕೂಡ ಚಕಾರ ಎತ್ತದಂತಾಗಿದೆ. ಅಲ್ಲದೇ, ಈಗ ಹಂಚಿಕೆಯಾಗಿರುವ ಸಚಿವ ಸ್ಥಾನದಲ್ಲಿ ಕೂಡ ಜಾತಿ ಲೆಕ್ಕಾಚಾರ ಅಡಗಿದ್ದು, ನಿಮ್ಮ ಸಮುದಾಯದ ನಾಯಕರಿಗೆ ನೀಡಿದ್ದೇವಲ್ಲ ಎಂದು ಸಮಜಾಯಿಷಿ ನೀಡುತ್ತಿದ್ದಾರೆ. ಈಗಾಗಲೇ ಕೆಲ ಶಾಸಕರು ರಾಜೀನಾಮೆ ಪ್ರಹಸನ ಮಾಡಿ ಇಕ್ಕಟ್ಟಿಗೆ ಸಿಲುಕಿರುವುದನ್ನು ಕಂಡಿದ್ದು, ಬಂಡಾಯದ ಹಾದಿಗೆ ಯಾರು ಇಳಿಯಕ್ಕಿಲ್ಲ ಎಂಬ ಲೆಕ್ಕಾಚಾರ ಬಿಜೆಪಿ ವರಿಷ್ಠರದ್ದು ಎನ್ನಲಾಗುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯಲ್ಲಿ ಮತ್ತೆ ನಾಲ್ಕು ಕೋವಿಡ್ 19 ಪ್ರಕರಣ

ನಿಜಾಮುದ್ದೀನ್ ನಿಂದ ಬಂದ ನಾಲ್ವರಿಗೆ ಸೋಂಕು: ಬೆಳಗಾವಿಯಲ್ಲಿ ಮತ್ತೆ ನಾಲ್ಕು ಹೊಸ ಪ್ರಕರಣ

sm-tdy-1

ಹಾಪ್‌ಕಾಮ್ಸ್‌ ಮಳಿಗೆ ತೆರೆಯಲು ಸೂಚನೆ

ಜಿಲ್ಲೆಯಲ್ಲಿಲ್ಲ ಕೊರೊನಾ ಪ್ರಕರಣ: ಸಿ.ಟಿ. ರವಿ

ಜಿಲ್ಲೆಯಲ್ಲಿಲ್ಲ ಕೋವಿಡ್ 19 ಪ್ರಕರಣ: ಸಿ.ಟಿ. ರವಿ

ಮನೋವೈದ್ಯರಿಂದ ಕೌನ್ಸೆಲಿಂಗ್‌

ಮನೋವೈದ್ಯರಿಂದ ಕೌನ್ಸೆಲಿಂಗ್‌

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌