ಹೊಸ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿ

ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಿ •ನೆರೆಗೆ ಸೇತುವೆ ಹಾನಿ ಆಗಿದ್ದರೆ ತಾತ್ಕಾಲಿಕ ಸೇತುವೆ ನಿರ್ಮಿಸಿ

Team Udayavani, Aug 29, 2019, 10:54 AM IST

29-Agust-9

ರಾಯಚೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ್‌ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

ರಾಯಚೂರು: ಜಿಲ್ಲೆಯ ಅಭಿವೃದ್ಧಿ ದಿಸೆಯಲ್ಲಿ ಹೊಸದಾಗಿ ರೂಪಿಸಿದ ಯೋಜನೆಗಳು, ಕಾಮಗಾರಿಗಳ ಮಾಹಿತಿಯನ್ನು ತ್ವರಿತವಾಗಿ ತಿಳಿಸಿದಲ್ಲಿ ಅವುಗಳನ್ನು ಹೈದರಾಬಾದ್‌-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಗಳಡಿ ಸೇರಿಸುವುದಾಗಿ ಹೈದರಾಬಾದ್‌-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್‌ ಯಾದವ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬರ, ಪ್ರವಾಹ ಪರಿಸ್ಥಿತಿ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಹದಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದೆ. ಮೂಲ ಸೌಲಭ್ಯಗಳೂ ಇಲ್ಲದಾಗಿದೆ. ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಸಮಸ್ಯೆಯಾಗುತ್ತಿದೆ. ಇಂಥ ವೇಳೆ ಅವುಗಳ ಸಮರ್ಪಕ ಅನುಷ್ಠಾನ ದೃಷ್ಟಿಯಿಂದ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಯಚೂರು ವಲಯದ ಜೆಸ್ಕಾಂ ಇಇ ಮಾತನಾಡಿ, ಪ್ರವಾಹದಿಂದ ಉಭಯ ನದಿಗಳಲ್ಲಿ 879 ವಿದ್ಯುತ್‌ ಪರಿವರ್ತಕಗಳು ಹಾಳಾಗಿದ್ದು, ಅದರಲ್ಲಿ 658 ಟ್ರಾನ್ಸ್‌ಫಾರ್ಮರ್‌ ಅಳವಡಿಸಲಾಗಿದೆ. ಇನ್ನೂ 221 ಪರಿವರ್ತಕಗಳನ್ನು ಚಾರ್ಜ್‌ ಮಾಡಿ 2-3 ದಿನಗಳಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಡಾ| ಚೇತನಾ ಪಾಟೀಲ ಮಾತನಾಡಿ, ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಶೇ.95ರಷ್ಟು ಮಳೆ ವಾಡಿಕೆ ಇದ್ದು ಶೇ.45ರಷ್ಟು ಮಳೆಯಾಗಿದೆ ಎಂದರು. ತಾಲೂಕುವಾರು ಬೆಳೆಗಳ ಬಗ್ಗೆ ಸವಿವರದ ಮಾಹಿತಿ ಸಿದ್ಧಪಡಿಸಿ ವರದಿ ನೀಡುವಂತೆ ಸುಬೋಧ್‌ ಯಾದವ್‌ ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಇಇ ಗಣಪತಿ ಸಾಕ್ರೆ ಮಾತನಾಡಿ, ಜಿಲ್ಲೆಯ 117 ಗ್ರಾಮಗಳಲ್ಲಿ 148 ಖಾಸಗಿ ಬೋರ್‌ವೆಲ್ ಕೊರೆಸಿದ್ದು, ಲಿಂಗಸುಗೂರು ತಾಲೂಕಿನ 5 ಗ್ರಾಮಗಳಿಗೆ ಮಾತ್ರ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು. ಆ ಹಳ್ಳಿಗಳಲ್ಲೂ ಬೋರ್‌ವೆಲ್ ಕೊರೆಯಿಸಿ ಶಾಶ್ವತ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಿ. ಕುಡಿಯುವ ನೀರಿನ ಯೋಜನೆಗಳಿಗೆ ಯಾವುದೇ ಹಣಕಾಸಿನ ತೊಂದರೆ ಇಲ್ಲ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶರತ್‌ ಬಿ., ಎಡಿಸಿ ಗೋವಿಂದರೆಡ್ಡಿ, ಎಸಿ ಸಂತೋಷಕುಮಾರ, ಲಿಂಗಸುಗೂರು ಎಸಿ ರಾಜಶೇಖರ ಡಂಬಳ, ತಹಶೀಲ್ದಾರ್‌ ಡಾ| ಹಂಪಣ್ಣ, ಸಿರವಾರ ತಹಶೀಲ್ದಾರ್‌ ಶ್ರುತಿ ಕೆ., ಜಿಪಂ ಯೋಜನಾಧಿಕಾರಿ ಶರಣಬಸವ ಸೇರಿ ಅನೇಕರು ಪಾಲ್ಗೊಂಡಿದ್ದರು.

ಪರಿಹಾರ ಕೇಂದ್ರಗಳಲ್ಲಿರುವ ನೆರೆ ಸಂತ್ರಸ್ತರು, ತಮ್ಮ ಸ್ವ ಸ್ಥಾನಕ್ಕೆ ತೆರಳುವ ಮುನ್ನ ಅವರ ಒಪ್ಪಿಗೆ ಪಡೆದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಅಲ್ಲಿ ಅವರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಅಧಿಕಾರಿಗಳು ಒತ್ತು ನೀಡಬೇಕು. ಪ್ರವಾಹದ ವೇಳೆ ಜಲಾವೃತಗೊಂಡ ಸೇತುವೆಗಳು ಜಖಂಗೊಂಡಿದ್ದು, ಜನ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕ ಸೇತುವೆ ನಿರ್ಮಿಸಬೇಕು. ಬಳಿಕ ಶಾಶ್ವತ ಸೇತುವೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು.
ಸುಬೋಧ್‌ ಯಾದವ್‌,
ಪ್ರಾದೇಶಿಕ ಆಯುಕ್ತರು

ಟಾಪ್ ನ್ಯೂಸ್

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

4-sdsda

ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

sidda dkshi

ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

Raj THakre

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

14appeal

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

18

ಮುಂಗಾರು ಹಂಗಾಮಿಗೆ ರೈತ ಸಜ್ಜು

17

ಪ್ರವಾಹ ತಡೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

16

ಮಳೆ-ಜಲಾಶಯ ಮಾಹಿತಿ ವಿನಿಮಯಕ್ಕೆ ಸೂಚನೆ

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

14appeal

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

18

ಮುಂಗಾರು ಹಂಗಾಮಿಗೆ ರೈತ ಸಜ್ಜು

17

ಪ್ರವಾಹ ತಡೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

16

ಮಳೆ-ಜಲಾಶಯ ಮಾಹಿತಿ ವಿನಿಮಯಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.