ಕೋವಿಡ್‌ 19 ಸೋಂಕಿತರಿಗೆ 660 ಬೆಡ್‌ ಮೀಸಲು

Team Udayavani, Jun 29, 2020, 8:02 AM IST

meesalu 660

ರಾಮನಗರ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ಹರಡುತ್ತಿರುವ ಕಾರಣ ಸೋಂಕಿತರ ಚಿಕಿತ್ಸೆಗೆ ಹೆಚ್ಚುವರಿ 660 ಬೆಡ್‌ ಸಜ್ಜುಗೊಳಿಸಲಾಗುತ್ತಿದೆ ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌. ಅಶ್ವ‌ತ್ಥ್ ನಾರಾಯಣ  ತಿಳಿಸಿದರು. ಈ ಸಂಬಂಧ ತಾವು ಕೆಂಗೇರಿ ಬಳಿಯಿರುವ ರಾಜರಾಜೇಶ್ವರಿ ಮೆಡಿಕಲ್‌ ಕಾಲೇಜು ಆಸ್ಪತ್ರೆ ಮತ್ತು ಕನಕಪುರ ತಾಲೂಕು ಹಾರೋಹಳ್ಳಿ ಸಮೀಪವಿರುವ ದಯಾನಂದ ಸಾಗರ್‌ ಆಸ್ಪ ತ್ರೆಗಳಲ್ಲಿ ಹೆಚ್ಚುವರಿ ಬೆಡ್‌ ಕಾದಿರಿಸುವಂತೆ ಆಸ್ಪತ್ರೆಗಳ ಮುಖ್ಯಸ್ಥರ ಬಳಿ ಚರ್ಚಿಸಿರುವು ದಾಗಿ ತಿಳಿಸಿದರು.

ಎರಡೂ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಿಗೆ ಭೇಟಿ ನೀಡಿದ ನಂತರ ರಾಮನಗರದ ಡೀಸಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆ ಯಲ್ಲಿ ಮಾತನಾಡಿ, ರಾಜರಾಜೇಶ್ವರಿ ಮೆಡಿ  ಕಲ್‌ ಕಾಲೇಜು ಆಸ್ಪತ್ರೆಯಲ್ಲಿ 1,600 ಬೆಡ್‌ ಗಳ ಪೈಕಿ 600 ಬೆಡ್‌ಗಳನ್ನು ಜಿಲ್ಲೆಯ ಕೋವಿಡ್‌-19 ರೋಗಿಗಳಿಗೆ ಮೀಸಲಿಡಲು ಆಡಳಿತ ಒಪ್ಪಿದೆ. ಐಸಿಯು ವಾರ್ಡಿನಲ್ಲೂ 110 ಬೆಡ್‌ಗಳನ್ನು ಜಿಲ್ಲೆಯ ಸೋಂಕಿತರಿಗೆ ಮೀಸಲಿಡಲಾಗುವುದು.

ಅಲ್ಲಿ ವೆಂಟಿಲೇಟರ್‌ ಗಳ ವ್ಯವಸ್ಥೆಯೂ ಇದೆ. ರಾಜರಾಜರಾಜೇ ಶ್ವರಿ ಕಾಲೇಜು ಆಸ್ಪತ್ರೆ ಪ್ರಾಂಶುಪಾಲ ಡಾ.ನವೀನ್‌ ತಮ್ಮಲ್ಲಿರುವ ವೈದ್ಯರು, ನರ್ಸ್‌ ಗಳನ್ನು ನಿಯೋಜಿಸುವುದಾಗಿ ಭರವಸೆ ನೀಡಿ ದ್ದಾರೆ ಎಂದರು. ಹಾರೋಹಳ್ಳಿ  ಬಳಿಯಿರುವ ದಯಾನಂದ ಸಾಗರ್‌ ಆಸ್ಪತ್ರೆ ಅಧ್ಯಕ್ಷ ಡಾ.ಹೇಮಚಂದ್ರ ಸಾಗರ್‌ ಅವರೊಂದಿಗೆ ತಾವು ಚರ್ಚೆ ನಡೆಸಿರು ವುದಾಗಿ, ಆ ಆಸ್ಪತ್ರೆಯಲ್ಲಿ ತಕ್ಷಣಕ್ಕೆ ಲಭ್ಯವಿರುವ 60 ಬೆಡ್‌ ಜಿಲ್ಲೆಯ ಕೋವಿಡ್‌-19 ಸೋಂಕಿತ ರೋಗಿಗಳಿಗೆ  ಮೀಸಲಿಡಲು ಅವರ ಒಪ್ಪಿದ್ದಾರೆ ಎಂದು ಸಚಿವರು ತಿಳಿಸಿ ದರು. ಅಲ್ಲಿರುವ ಎಲ್ಲ ರೀತಿ ಸೌಲಭ್ಯ ಸೋಂಕಿತರ ಚಿಕಿತ್ಸೆಗೆ ವಿಸ್ತರಿಸುವುದಾಗಿ ಭರವಸೆ ದೊರೆತಿದೆ ಎಂದರು.

ಉಚಿತ ಚಿಕಿತ್ಸೆ ಸರ್ಕಾರದೊಂದಿಗೆ ಒಪ್ಪಂದ: ರಾಜರಾಜೇಶ್ವರಿ ಮತ್ತು ದಯಾನಂದ ಸಾಗರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಜಿಲ್ಲೆಯ ಕೋವಿಡ್‌ 19 ಸೋಂಕಿತರಿಗಾಗಿ ದೊರೆಯುವ ಚಿಕಿತ್ಸೆ ಉಚಿತವಾಗಿದ್ದು, ಸರ್ಕಾರ  ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿ ಕೊಳ್ಳಲಿದೆ ಎಂದರು. ಜಿÇÉೆಯಲ್ಲಿರುವ ಗಂಭೀರ ಹಂತದ ರೋಗಿಗಳನ್ನು ಕೂಡಲೇ ಈ ಆಸ್ಪತ್ರೆಗಳಿಗೆ ಸ್ಥಳಾಂತರಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರುತ್ತಿದ್ದು,  ಗಂಭೀರ ದಿನಗಳು ಎದುರಾದರೆ ಆಶ್ಚರ್ಯವಿಲ್ಲ. ಹೀಗಾಗಿ ಎಲ್ಲದಕ್ಕೂ ಸಜ್ಜಾಗಿರಿ ಎಂದು ಅಧಿ ಕಾರಿಗಳಿಗೆ ಸಲಹೆ ನೀಡಿದರು. ಆಸ್ಪತ್ರೆಗಳಲ್ಲಿ ಶುಚಿತ್ವಕ್ಕೆ ಹೆಚ್ಚು ಆಧ್ಯತೆ ಕೊಡಿ, ಅವಶ್ಯವಿದ್ದರೆ ಪೊಲೀಸ್‌ ಔಟ್‌ಪೋಸ್ಟ್‌  ತೆರೆಯಿರಿ ಎಂದು ಸೂಚನೆ ಕೊಟ್ಟರು.

ನಿಮ್ಮ ಸುರಕ್ಷತೆ ಮುಖ್ಯ, ಮೈ ಮರೆಯಬೇಡಿ: ಕೋವಿಡ್‌-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೈ ಮರೆಯಬಾರದು, ಕಾರಣ ನಿಮ್ಮ ಸುರಕ್ಷತೆ ಮುಖ್ಯವಾಗಿದೆ ಎಂದು ಆರೋಗ್ಯ  ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಕ್ವಾರಂಟೈನ್‌ ಸಲುವಾಗಿ ಅಗತ್ಯ ಬಿದ್ದರೆ ಹೋಟೆಲ್ ಮತ್ತು ರೆಸಾಟ್ಗಳಲ್ಲಿಯೂ ವ್ಯವಸ್ಥೆ ಮಾಡಿ ಎಂದು ಡಿಸಿಎಂ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ತಕ್ಷಣಕ್ಕೆ 4  ಆ್ಯಂಬುಲೆನ್ಸ್‌ಗಳ ಅಗತ್ಯವಿದ್ದು, ಅದನ್ನು ಖರೀದಿ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.