ರೈತರ ಕೃಷಿ ಪಂಪ್‌ಸೆಟ್‌ಗೆ ಹಗಲಿನಲ್ಲಿ ವಿದ್ಯುತ್‌ ನೀಡಲು ಮನವಿ

Team Udayavani, Feb 25, 2023, 2:33 PM IST

TDY-11

ಕನಕಪುರ: ರೈತರ ಕೃಷಿ ಪಂಪ್‌ಸೆಟ್‌ಗೆ ರಾತ್ರಿ ಬದಲು ಹಗಲಿನಲ್ಲಿ ವಿದ್ಯುತ್‌ ಪೂರೈಸಿ, ಕಾಡುಪ್ರಾಣಿಗಳಿಂದ ರೈತರಿಗಾಗುವ ಸಮಸ್ಯೆ ತಪ್ಪಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಚೀಲೂರು ಮುನಿರಾಜು ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.

ರೇಷ್ಮೆ ರೈತ ಉತ್ಪಾದಕರ ಕಂಪನಿ ಹಾಗೂ ರಾಜ್ಯ ರೈತ ಸಂಘದಿಂದ ಕುರುಪೇಟೆ ಬಳಿ ಇರುವ ಬೆಸ್ಕಾಂ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ತಾಲೂಕು ಬಹುತೇಕ ಕಾಡಂಚಿನ ಗ್ರಾಮಗಳು ಹೆಚ್ಚಾಗಿದ್ದು, ನಿರಂತರವಾಗಿ ಕಾಡು ಪ್ರಾಣಿಗಳ ಹಾವಳಿ ಇರುವುದರಿಂದ ರೈತರು ರಾತ್ರಿ ವೇಳೆ ವಿಷಜಂತುಗಳು, ಕಾಡುಪ್ರಾಣಿಗಳು ದಾಳಿ ಮಾಡುವ ಭಯದಲ್ಲೇ ರೈತರು ತಮ್ಮ ಕೃಷಿ ಬೆಳೆಗಳಿಗೆ ನೀರು ಹಾಯಿಸುವ ಅನಿವಾರ್ಯತೆ ಇದೆ. ಬೆಸ್ಕಾಂ ಇಲಾಖೆ ರಾತ್ರಿ ವೇಳೆ ವಿದ್ಯುತ್‌ ಪೂರೈಸುವುದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಹೇಳಿದರು.

ರೇಷ್ಮೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಡಿ.ಕೆ. ರಾಮಕೃಷ್ಣ ಮಾತನಾಡಿ, ರಾಜ್ಯದಲ್ಲಿಯೇ ರಾಮನಗ ಜಿಲ್ಲೆ ಅತಿ ಹೆಚ್ಚು ರೇಷ್ಮೆ ಬೆಳೆಯುವುದರಲ್ಲಿ ಹೆಸರುವಾಸಿ ಆಗಿದೆ. ಜಿಲ್ಲೆಯಲ್ಲಿ ಕನಕಪುರ ತಾಲೂಕಿನಲ್ಲಿ ಅತಿ ಹೆಚ್ಚು ರೇಷ್ಮೆ ಬೆಳೆಯುವ ರೈತರಿದ್ದಾರೆ. ಆದರೆ, ರೇಷ್ಮೆ ಬೆಳೆಗಾರರಿಗೆ ಸರಿಯಾದ ಉತ್ತೇಜನ ಸಿಗದೆ, ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾಡುಪ್ರಾಣಿಗಳ ಭಯ: ತಾಲೂಕಿನ ಬಹುತೇಕ ರೇಷ್ಮೆ ಬೆಳೆಗಾರರು ಕೃಷಿ ಪಂಪ್‌ ಸೆಟ್‌ ಅವಲಂಬಿಸಿಯೇ ರೇಷ್ಮೆ ಕೃಷಿ ಮಾಡುತ್ತಾರೆ. ಬೇಸಿಗೆ ಆರಂಭವಾಗಿದೆ. ಹಾಗಾಗಿ, ಎಲ್ಲರೂ ರೇಷ್ಮೆ ತೋಟಕ್ಕೆ ನೀರು ಹಾಯಿಸುವುದು ಅನಿವಾರ್ಯ. ಕೃಷಿ ಪಂಪ್‌ ಸೆಟ್‌ಗಳಿಗೆ ರಾತ್ರಿ ವೇಳೆ ವಿದ್ಯುತ್‌ ಕೊಡುವುದರಿಂದ ರೈತರು ಕಾಡುಪ್ರಾಣಿಗಳ ಭಯದಿಂದ ನೀರು ಹಾಯಿಸಲು ಹಿಂಜರಿಯುತ್ತಿದ್ದಾರೆ. ಇದರಿಂದ ಕೃಷಿ ಬೆಳೆಗಳಿಗೆ ನೀರಿನ ಅಭಾವ ಉಂಟಾಗಿ ರೈತರು ಕೃಷಿಯಲ್ಲಿ ನಷ್ಟಕ್ಕೆ ಸಿಲುಕ ಬೇಕಾಗುತ್ತದೆ. ಹಾಗಾಗಿ, ರಾತ್ರಿ ವೇಳೆ ಕೊಡುವ 7 ತಾಸು ವಿದ್ಯುತ್‌ನ್ನು ಹಗಲಿನಲ್ಲಿ ಕೊಡಬೇಕು ಎಂದು ಮನವಿ ಮಾಡಿದರು.

ರೈತ ಸಂಘ ಮತ್ತು ರೇಷ್ಮೆ ರೈತ ಉತ್ಪಾದಕ ಕಂಪನಿಯ ಕರಿಯಪ್ಪ, ಶಿವರಾಜು, ಚಾಮ, ಸತೀಶ್‌, ವೆಂಕಟೇಶ್‌, ಮುಕ್ತರ್‌, ಮುನೇಶ್‌, ಮುನಿಮಾದು, ಶಿವಕುಮಾರ್‌, ಬೋಜೆಗೌಡ, ಸಾಗರ್‌ ಇದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.