ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರು, ಸಿಬ್ಬಂದಿ ನೇಮಕಕ್ಕೆ ಕ್ರಮ


Team Udayavani, Dec 30, 2020, 12:28 PM IST

ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರು, ಸಿಬ್ಬಂದಿ ನೇಮಕಕ್ಕೆ ಕ್ರಮ

ರಾಮನಗರ: ಜಿಲ್ಲೆಯಲ್ಲಿ ನಿರ್ಮಾಣ ಪೂರ್ಣ ಹಂತದಲ್ಲಿರುವ 550 ಹಾಸಿಗೆ ಸಾಮರ್ಥ್ಯದ ಜಿಲ್ಲಾ ಆಸ್ಪತ್ರೆಗೆ ಅಗತ್ಯ ತಜ್ಞ ವೈದ್ಯರು, ವೈದ್ಯರು ಹಾಗೂ ಸಿಬ್ಬಂದಿಗಳನ್ನು ನೇಮಿಸುವ ವಿಚಾರದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಮಂಗಳವಾರ ನಗರಕ್ಕೆ ಭೇಟಿ ನೀಡಿದ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿಂದ ವಿಡಿಯೋಮೂಲಕ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದರು.

ಹಾಲಿ ಜಿಲ್ಲಾಸ್ಪತ್ರೆ ತಾಯಿ, ಮಕ್ಕಳ ಆಸ್ಪತ್ರೆ: ನೂತನ ಕಟ್ಟಡಕ್ಕೆ ಜಿಲ್ಲಾಸ್ಪತ್ರೆ ಸ್ಥಳಾಂತರವಾದ ನಂತರ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ 100 ಹಾಸಿಗೆಗಳ ಜಿಲ್ಲಾಸ್ಪತ್ರೆಯನ್ನು ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಬೇಕು. ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ಹೊಸ ಜಿಲ್ಲಾಸ್ಪತ್ರೆಗೆ ನಿಯೋಜಿಸಿಕೊಳ್ಳಬೇಕು ಎಂದು ತಿಳಿಸಿದರು.

ಟ್ರಾಮಾ ಸೆಂಟರ್‌: ಮೈಸೂರು ಮತ್ತು ಬೆಂಗಳೂರಿನ ನಡುವೆ 10 ಪಥದ ರಸ್ತೆ ನಿರ್ಮಾಣವಾಗುತ್ತಿದ್ದು, ಮೈಸೂರು ಮತ್ತು ಬೆಂಗಳೂರು ಹೊರತು ಪಡಿಸಿದರೆ ಮಧ್ಯಭಾಗದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಹಾಗೂ ಟ್ರಾಮಾ ಸೆಂಟರ್‌ಗಾಗಿ ಬೇಕಿರುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇಲ್ಲಿಗೆ ತಜ್ಞ ವೈದ್ಯರನ್ನು ನೇಮಿಸುವ ವಿಚಾರದಲ್ಲಿ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅವರೊಂದಿಗೆ ಚರ್ಚಿಸಿದರು.

ಮಾವು ಸಂಸ್ಕರಣ ಘಟಕ: ವಿಡಿಯೋ ಸಂವಾದದಲ್ಲಿ ತೋಟಗಾರಿಕೆ ಇಲಾಖೆ ನಿರ್ದೇಶಕರು ಚನ್ನಪಟ್ಟಣ ತಾಲೂಕಿನ ಭೈರಪಟ್ಟಣದಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆ ವಿಚಾರದಲ್ಲಿ ಸಚಿವರ ಗಮನ ಸೆಳೆದರು. ಇಲ್ಲಿ ಮಾವು ಸೇರಿದಂತೆ ವಿವಿಧ ಹಣ್ಣುಗಳ ಸಂಸ್ಕರಿಸುವ ವಿಚಾರದಲ್ಲಿ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಯಾವುದೇ ತೊಂದರೆ ಇದ್ದಲ್ಲಿ ತಮ್ಮ ಗಮನ ಸೆಳೆಯುವಂತೆ ತಿಳಿಸಿದರು. ಸಮಸ್ಯೆ ಪರಿಹರಿಸಿಕೊಂಡು ಶೀಘ್ರವಾಗಿ ಮಾವು ಸಂಸ್ಕರಣ ಘಟಕದ ಕೆಲಸ ಪ್ರಾರಂಭಿಸುವಂತೆಅಧಿಕಾರಿಗಳಿಗೆ ತಿಳಿಸಿದರು.

ರೇಷ್ಮೆ ಗೂಡು ಹೈಟೆಕ್‌ ಮಾರುಕಟ್ಟೆ: ರೇಷ್ಮೆ ಇಲಾಖೆ ನಿರ್ದೇಶಕರು ಮಾತನಾಡಿ, ಪೊಲೀಸ್‌ ತರಬೇತಿ ಕೇಂದ್ರದ ಹತ್ತಿರವಿರುವ ರೇಷ್ಮೆ ತರಬೇತಿ ಸಂಸ್ಥೆಗೆ ಸೇರಿದ ಭೂಮಿಯಲ್ಲಿ ರೇಷ್ಮೆ ಗೂಡು ಹೈಟೆಕ್‌ ಮಾರುಕಟ್ಟೆ ನಿರ್ಮಾಣಕ್ಕೆ ಕನ್ಸಲ್ಟೆನ್ಸಿ ಸರ್ವಿಸ್‌ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ.ಮಾರುಕಟ್ಟೆ ನಿರ್ಮಾಣಕ್ಕೆ 75 ಕೋಟಿ ರೂ.ಗಳು ವೆಚ್ಚವಾಗಲಿದ್ದು, ಈಗಾಲೇ ನಬಾರ್ಡ್‌ 35 ಕೋಟಿ ರೂ. ನೀಡಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಹೊಸ ಮಾರುಕಟ್ಟೆ ನಿರ್ಮಾಣ ಶೀಘ್ರ ಕೈಗೆತ್ತಿ ಕೊಳ್ಳಿ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಶಿಧರ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚನ್ನಪಟ್ಟಣ, ಮಾಗಡಿ ತಾಲೂಕಿನಲ್ಲಿ 50 ಹಾಸಿಗೆಯುಳ್ಳ ಆಸ್ಪತ್ರೆಗಳಿದ್ದು, ಈ ಆಸ್ಪತ್ರೆಗಳನ್ನು 100 ಹಾಸಿಗೆಗೆ ಉನ್ನತೀಕರಿಸಿ ಕೊಡಲು ಆರೋಗ್ಯ ಇಲಾಖೆಯ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಬೇಕು. ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಉಪಮುಖ್ಯಮಂತಿ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.