ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ

Team Udayavani, Sep 17, 2019, 4:48 PM IST

rn-tdy-1

ಮಾಗಡಿ: ಪ್ರತಿ ಸೋಮವಾರ ತಾಲೂಕು ಕಚೇರಿಯಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದು ಶಾಸಕ ಎ.ಮಂಜುನಾಥ್‌ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅರ್ಜಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಿದಂತೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜನಸಂಪರ್ಕ ಸಭೆ ಕರೆಯಲು ತೀರ್ಮಾನ ಮಾಡಿದ್ದೇವೆ. ಈ ಮೂಲಕ ಗ್ರಾಮೀಣ ಜನರ ಸಮಸ್ಯೆಗಳನ್ನು ತಗ್ಗಿಸಬೇಕೆಂದಿದ್ದೇನೆ ಎಂದರು.

ಜಮೀನು ಮಂಜೂರಾತಿ: ಬಗರ್‌ ಹುಕ್ಕಂ ಸಾಗುವಳಿ ಸಭೆ ನಡೆಸುತ್ತಿದ್ದೇವೆ. ಎಷ್ಟು ಗೋಮಾಳ ಭೂಮಿಯಿದೆ.ಹಿಂದೆ ಎಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಮಂಜೂರಾದ ರೈತರಿಗೆ ಖಾತೆ ಆಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸುತ್ತೇವೆ. ಹೊಸದಾಗಿ ಅರ್ಜಿ ಸಲ್ಲಿಸಿರುವವರಿಗೆ ಜಮೀನು ಆಧಾರದ ಮೇಲೆ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಸ್ಮಶಾನ ಜಾಗ ಗುರುತಿಸಲು ಸೂಚನೆ: ಜಿಲ್ಲಾ ಕೆಡಿಪಿ ಸಭೆಯಲ್ಲಿ ಡೀಸಿ ಮುಖೇನಾ ತಹಶೀಲ್ದಾರ್‌ ಮೂಲಕ ಅಧಿಕಾರಿಗಳ ಹಾಗೂ ಸರ್ವೇಯರ್‌ ಸಭೆಯನ್ನು ಕರೆದು ಅವರಿಗೆ ಜವಾಬ್ದಾರಿ ನೀಡಿ ಆದಷ್ಟು ಬೇಗ ಸ್ಮಶಾನ ಜಾಗ ಗುರುತಿಸಿ ಸರ್ವೇ ಮಾಡಿಸಿ, ಆಯಾ ಗ್ರಾಪಂಗೆ ವಶಕ್ಕೆ ನೀಡುವಂತೆ ತಾಕೀತು ಮಾಡಲಾಗುವುದು ಎಂದು ಹೇಳಿದರು.

ಈ ವೇಳೆ ನೂರಾರು ಮಂದಿ ರೈತರು ತಮ್ಮ ಸಮಸ್ಯೆಗಳ ಸರಮಾಲೆಯನ್ನೇ ಹೊತ್ತು ಶಾಸಕರ ಮುಂದೆಯೇ ತಹಶೀಲ್ದಾರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಖಾತೆ, ರಸ್ತೆ, ಸ್ಮಶಾನ ಸಮಸ್ಯೆಗಳ ಕುರಿತು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಜಿಪಂ ಸದಸ್ಯ ದಿವ್ಯಾ ಗಂಗಾಧರ್‌, ತಾಪಂ ಸದಸ್ಯ ನರಸಿಂಹಮೂರ್ತಿ, ಗ್ರಾಪಂ ಸದಸ್ಯರಾದ ಮಂಜುನಾಥ್‌, ಮುದ್ದಹನುಮೇ ಗೌಡ, ಕಲ್ಲೂರು ಶಿವಣ್ಣ, ಚಿಕ್ಕಕಲ್ಯಾ ರಮೇಶ್‌, ರಂಗಣ್ಣಿ, ನಾಗರಾಜು, ರೇವಣ್ಣ, ಕಲ್ಕರೆ ಶಿವಣ್ಣ, ಮೂರ್ತಿ, ಗವಿನಾಗಮಂಗಲ ಶಿವಣ್ಣ, ಪುರಸಭಾ ಮಾಜಿ ಸದಸ್ಯ ಎಂ.ಎನ್‌.ಮಂಜುನಾಥ್‌, ಶಿವಕುಮಾರ್‌, ತಹಶೀಲ್ದಾರ್‌ ಎನ್‌.ರಮೇಶ್‌, ರೆವಿನ್ಯೂ ಇನ್ಸ್‌ಫೆಕ್ಟರ್‌ ಶಿವರುದ್ರಯ್ಯ, ರಮೇಶ್‌, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.