ಜಲಾಮೃತ ಯೋಜನೆ ಅನುಷ್ಠಾನ ಸಮರ್ಪಕವಾಗಲಿ

Team Udayavani, Jun 4, 2019, 10:25 AM IST

ರಾಮನಗರ: ಸಮುದಾಯದ ಸಹಕಾರದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಜಲಾಮೃತ ಯೋಜನೆ ಅನುಷ್ಠಾನವಾಗೊಳಿಸಿ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಹಾಗೂ ಜಿಪಂನಿಂದ ಜಲಾಮೃತ ಯೋಜನೆ ಅನುಷ್ಠಾನ ಕುರಿತ ಸಭೆ ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಜಾಗತಿಕ ಹವಾಮಾನ ಬದಲಾವಣೆಯ ಪ್ರತಿಕೂಲಪರಿಣಾಮಗಳನ್ನು ಸತತ ಬರಗಾಲಗಳ ಮುಖಾಂತರ ಎದುರಿಸುತ್ತಿದ್ದೇವೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿನ ಕೆರೆಗಳನ್ನು ಪಟ್ಟಿಮಾಡಿ ಕೆರೆಗಳ ಹೂಳು ತೆಗೆಯುವ ಹಾಗೂ ಪರಿಸರ ಅಭಿವೃದ್ಧಿ ಕೆಲಸಗಳನ್ನು ಮಾಡ ಬೇಕಿದೆ ಎಂದರು.

ಜಲವರ್ಷ-2019: ಕರ್ನಾಟಕ ಸರ್ಕಾರ 2019ನ್ನು ಜಲವರ್ಷವೆಂದು ಘೋಷಿಸಿದೆ. ಜಲಸಂರಕ್ಷಣೆ, ಜಲಸಾಕ್ಷರತೆ, ಜಲಮೂಲಗಳ ಪುನಶ್ಚೇತನ ಹಾಗೂ ಹಸಿರೀಕರಣ ವನ್ನು ಕೇಂದ್ರವಾಗಿಟ್ಟುಕೊಂಡು ಜಲಾಮೃತ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆಎಂದು ಹೇಳಿದರು. ಜಲಾಮೃತ ಯೋಜನೆಯು ಸಮುದಾಯ ಆಧಾರಿತ ಚಳವಳಿಯಾಗಿದೆ. ಎಲ್ಲಾ ಸಂಬಂಧಿತ ಸರ್ಕಾರಿ ಇಲಾಖೆಗಳು,ಶಾಲಾ ಕಾಲೇಜುಗಳು, ಖಾಸಗಿ ಸಂಸ್ಥೆಗಳು, ಸ್ಥಳೀಯ ಸಮುದಾಯಗಳು ಹಾಗೂ ಜಲ ಸಂರಕ್ಷಣೆ ಸಂಬಂಧಿತ ಸಂಘ ಸಂಸ್ಥೆಗಳೊಂದಿಗೆ ಅನುಷ್ಠಾನಗೊಳಿಸಲು ಸರ್ಕಾರ ಉದ್ದೇಶಿಸಿದೆ. ಜಲಾಮೃತ ಯೋಜನೆಗೆ ಭಾಗಿದಾರ ಸಂಸ್ಥೆಗಳಾಗಿ ಎರಡು ಖಾಸಗಿ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. ಈ ಸಂಸ್ಥೆಗಳು ಇನ್ನಿತರ ಸಂಸ್ಥೆಗಳ ಸಹಕಾರ ದೊಂದಿಗೆ ನಾಲ್ಕು ತಾಲೂಕುಗಳಲ್ಲಿನ ಕೆರೆಗಳನ್ನು ಹೂಳು ತೆಗೆಯುವ ಹಾಗೂ ಕೆರೆಗಳ ಅಭಿವೃದ್ಧಿ ಪಡಿಸುವ ಕಾಮಗಾರಿ ಮಾಡಬೇಕಿದೆ ಎಂದರು.

ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ತಲಾ ಎರೆಡೆರೆಡು ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಸಂಬಂಧಿಸಿದ ಸಂಸ್ಥೆ ಮತ್ತು ಇಲಾಖೆ ಜಲಾನಯನ ಪ್ರದೇಶಗಳನ್ನು ಗುರುತಿಸಿ, ಕೆರೆಗಳ ಹೂಳು ಎತ್ತುವ ಕೆಲಸ ವನ್ನು ಜವಾಬ್ದಾರಿಯುತ ವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎರಡು ಖಾಸಗಿ ಸಂಸ್ಥೆಗಳು ಸಣ್ಣ ಸಣ್ಣ ಖಾಸಗಿ ಸಂಸ್ಥೆಗಳೊಂದಿಗೆ ಸೇರಿ ಕೈಗಾರಿಕಾ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ಸಸಿ ನೆಡುವ ಕೆಲಸಗಳನ್ನು ಮಾಡಬೇಕು. ಇದುಪರಿಸರವನ್ನು ಸುಂದರವಾಗಿ ಕಾಣುವಂತೆ ಮಾಡುತ್ತದೆ ಎಂದರು. ಜಿಪಂ ಸಿಇಒ ಎಂ.ಪಿ. ಮುಲ್ಲೆ„ ಮುಹಿಲನ್‌, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌,ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಉಮೇಶ್‌ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಚನ್ನಪಟ್ಟಣ: ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಪ್ರಮುಖ ರಸ್ತೆಗಳಲ್ಲಿ ದನಗಳ ಕಾಟ ಅತಿಯಾಗಿದ್ದು, ರಸ್ತೆಯಲ್ಲಿ ಸಾಗಲು ವಾಹನ ಸವಾರರು ಹಾಗೂ ಪಾದಚಾರಿಗಳು...

  • ಕುದೂರು: ತಿಪ್ಪಸಂದ್ರ ಹೋಬಳಿ ಸಮೀಪವಿರುವ ಡಿಸಿಎಂ ಅಶ್ವತ್ಥ ನಾರಾಯಣ್‌ ತವರೂರಾದ ಚಿಕ್ಕಕಲ್ಯಾ ಗ್ರಾಮದ ರಸ್ತೆಯಲ್ಲಿ ಮಳೆ ಬಂದರೆ ಸಾಕು ರಸ್ತೆಯಲ್ಲಿ ನೀರು ನಿಂತು...

  • ಮಾಗಡಿ: ಶ್ರೀರಂಗ ಏತ ನೀರವಾರಿ ಯೋಜನೆಗೆ ಸಂಬಂಧಿಸಿದಂತೆ ರೈತರ ಭೂ ಸ್ವಾಧೀನ ಕುರಿತು ಹತ್ತು ದಿನಗಳೊಳಗೆ 1 ರಿಂದ 5 ದಾಖಲೆ ಪೂರ್ಣಗೊಳಿಸಿ ಪಟ್ಟಿ ನೀಡಬೇಕು ಎಂದು...

  • ಕುದೂರು: ಮಾಗಡಿ ತಾಲೂಕಿನ ವೀರೇಗೌಡನದೊಡ್ಡಿ ಗ್ರಾಪಂ ವ್ಯಾಪ್ತಿ ಮತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು ಜನತೆ ಸಂಕಷ್ಟ ಎದುರಿಸುವಂತಾಗಿದೆ....

  • ತಿರುಮಲೆ ಶ್ರೀನಿವಾಸ್‌ ಮಾಗಡಿ: ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು, ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಸಂಚರಿಸಲು ತೀವ್ರ ತೊಂದರೆಯಾಗಿದೆ...

ಹೊಸ ಸೇರ್ಪಡೆ