ಬೆಂ.ಗ್ರಾಮಾಂತರ ಕ್ಷೇತ್ರ; 2456207 ಮತದಾರರು, 2688 ಮತಗಟ್ಟೆ

Team Udayavani, Mar 12, 2019, 7:43 AM IST

loka-sam-rtam.jpg

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2456207 ಮತದಾರರು ಲೋಕಸಭೆಗೆ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಕ್ಷೇತ್ರದ ಚುನಾವಣಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ತಿಳಿಸಿದರು.

ನಗರದ ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳ ಸಂಕೀರ್ಣದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 1267379 ಪುರುಷ ಮತದಾರರು, 1188207 ಮಂದಿ ಮಹಿಳಾ ಮತದಾರರು 340 ಇತರೆ ಮತದಾರರು, 281 ಸೇವಾ ಮತದಾರರು ಒಟ್ಟು 2456207 ಮತದಾರರಿದ್ದಾರೆಂದು ತಿಳಿಸಿದರು.  

ಎಲ್ಲೆಲ್ಲಿ ಎಷ್ಟು ಮತದಾರರು?: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಕುಣಿಗಲ್‌  ಕ್ಷೇತ್ರದಲ್ಲಿ 189772 ಮತದಾರರು, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 445847, ಬೆಂಗಳೂರು ದಕ್ಷಿಣ 598230, ಆನೇಕಲ್‌ 356638, ಮಾಗಡಿ 222853, ರಾಮನಗರ 207388, ಕನಕಪುರ 219866, ಚನ್ನಪಟ್ಟಣದಲ್ಲಿ 215613 ಮತದಾರರಿದ್ದಾರೆಂದು ಹೇಳಿದರು.
 
ಮತಗಟ್ಟೆಗಳು ಎಷ್ಟು?: ಕ್ಷೇತ್ರವ್ಯಾಪ್ತಿಯಲ್ಲಿ 2456207 ಮತದಾರರು ತಮ್ಮ ಮತಹಕ್ಕು ಚಲಾಯಿಸಲು 2688 ಮತಗಟ್ಟೆ ಸ್ಥಾಪಿಸಲಾಗಿದೆ. ಈ ಪೈಕಿ 16 ಹೆಚ್ಚುವರಿ ಮತಗಟ್ಟೆ ಸ್ಥಾಪಿಸಲಾಗುತ್ತದೆ. ಕುಣಿಗಲ್‌ನಲ್ಲಿ 266, ರಾಜರಾಜೇಶ್ವರಿ ನಗರ 390, ಬೆಂಗಳೂರು ದಕ್ಷಿಣ 520, ಆನೇಕಲ್‌ 369, ಮಾಗಡಿ 300, ರಾಮನಗರ 279, ಕನಕಪುರ 298, ಚನ್ನಪಟ್ಟಣದಲ್ಲಿ 266 ಮತಗಟ್ಟೆಗಳು ಸ್ಥಾಪನೆಯಾಗಲಿವೆ ಎಂದು ಹೇಳಿದರು.  

ಮಸ್ಟರಿಂಗ್‌, ಡಿ.ಮಸ್ಟರಿಂಗ ಸ್ಥಳಗಳ ವಿವರ: ಮತದಾನಕ್ಕೆ ಮುನ್ನ ಚುನಾವಣಾ ಮತಪೆಟ್ಟಿಗೆ ಸಾಗಿಸುವುದು ಮತ್ತು ಮತದಾನದ ನಂತರ ಮತಗಟ್ಟೆ ಸ್ವೀಕರಿಸುವ ಮಸ್ಟರಿಂಗ್‌, ಡಿ ಮಸ್ಟರಿಂಗ್‌ ಕೇಂದ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಸ್ಥಾಪಿಸಲಾಗುವುದು. ಆದರೆ, ಮತ ಎಣಿಕೆ ರಾಮನಗರದ ಅರ್ಚಕರಹಳ್ಳಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯಲಿದೆ ಎಂದರು. 

ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜು ಕುಣಿಗಲ್‌, ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ, ಹಲಗೇವಡೇರಹಳ್ಳಿ, ರಾಜರಾಜೇಶ್ವರಿನಗರ, ನ್ಯಾಷಿನಲ್‌ ಕಾಲೇಜು, ಜಯನಗರ, ಬೆಂಗಳೂರು ದಕ್ಷಿಣ, ಸ್ವಾಮಿ ವಿವೇಕಾನಂದ ಗ್ರಾಮಾಂತರ ಶಾಲೆ, ಚಂದಾಪುರ, ಆನೇಕಲ್‌, ಸರ್ಕಾರಿ ಪದವಿ ಪೂರ್ವ ಕಾಲೇಜು ಗುಡೇಮಾರನಹಳ್ಳಿ ರಸ್ತೆ, ಮಾಗಡಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಮನಗರ, ರೂರಲ್‌ ಪದವಿ ಪೂರ್ವ ಕಾಲೇಜು, ಕನಕಪುರ ಮತ್ತು ಬಾಲಕರ ಸರ್ಕಾರಿ  ಪದವಿ ಪೂರ್ವ ಕಾಲೇಜು, ಚನ್ನಪಟ್ಟಣ ಇಲ್ಲಿ ಮಸ್ಟರಿಂಗ್‌, ಡಿ.ಮಸ್ಟರಿಂಗ್‌ ಕೇಂದ್ರಗಳು ಸ್ಥಾಪನೆಯಾಗಲಿವೆ ಎಂದರು.  

ವೆಚ್ಚದ ಮಿತಿ 70 ಲಕ್ಷ ರೂ.: ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚವನ್ನು ಚುನಾವಣಾ ಆಯೋಗ ತಲಾ 70 ಲಕ್ಷ ರೂ. ಮಿತಿ ಹೇರಿದೆ. ಚುನಾವಣೆ ವೇಳೆ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ವಾಹನ ಪರವಾನಗಿಯನ್ನು  ರಾಮನಗರದ ತಮ್ಮ ಕಚೇರಿಯಲ್ಲಿ ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯೇ ಆಗಿದೆ ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಪಕ್ಷಗಳು ಕಾರ್ಯಕ್ರಮಗಳಿಗೆ ಅನುಮತಿ ಕೋರಲು “ಸುವಿಧಾ” ತಂಬ ತಂತ್ರಾಂಶದ ಮೂಲಕ  ಅರ್ಜಿ ಸಲ್ಲಿಸಬೇಕಾಗಿದೆ. ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಿಂದ ಅನುಮತಿ ಸಿಗಲಿದೆ ಎಂದರು. ಅಲ್ಲದೇ, ಚುನಾವಣೆಗೆ ಸಂಬಂಧ ಪಟ್ಟ ಮಾಹಿತಿಯನ್ನು ನಾಗರೀಕರು 1950 ಸಂಖ್ಯೆಗೆ ಕರೆ ಮಾಡಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳೇ ಗಮನಿಸಿ!: ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಅಭ್ಯರ್ಥಿ ಭಾರತ ಚುನಾವಣಾ ಆಯೋಗ ನೀಡಿರುವ ಪರಿಷ್ಕೃತ ನಮೂನೆ-26ರಲ್ಲಿ  ಪ್ರಮಾಣ ಪತ್ರ ಸಲ್ಲಿಸಬೇಕಾಗಿದೆ. ಸ್ಪರ್ಧಿಸುವ ಅಭ್ಯರ್ಥಿ ಮೇಲೆ ಯಾವುದಾದರೂ ಕ್ರಿಮಿನಲ್‌ ಮೊಕದ್ದಮ್ಮೆ ದಾಖಲಾಗಿದ್ದರೆ ಆ ಬಗ್ಗೆ ಸಿ-1, ಸಿ-2 ಮತ್ತು ಸಿ-3ರಲ್ಲಿ ಮಾಹಿತಿ ಸಲ್ಲಿಸಬೇಕು. 3 ಬಾರಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಬೇಕು. ಪ್ರಮಾಣ ಪತ್ರದಲ್ಲಿ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತ ಪಾವತಿಸಿ ಸಂಬಂಧಪಟ್ಟ ನಿರಾಕ್ಷೇಪಣಾ ಪತ್ರ ಪಡೆದು ಸಲ್ಲಿಸಬೇಕು. ನಿರಾಕ್ಷೇಪಣ ಪತ್ರ ಅಪೂರ್ಣವಾಗಿದ್ದರೆ ನಾಮಪತ್ರ ತಿರಸ್ಕರಿಸಲಾಗುವುದು.  

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.