BJP-JDS 2ನೇ ದಿನ 22 ಕಿ.ಮೀ. ಮೈತ್ರಿ ಪಾದಯಾತ್ರೆ
Team Udayavani, Aug 4, 2024, 11:33 PM IST
ರಾಮನಗರ: ಬಿಡದಿಯಿಂದ ಆರಂಭಗೊಂಡಿದ್ದ ಮೈತ್ರಿ ಪಕ್ಷದ ಮೈಸೂರು ಚಲೋ ಪಾದಯಾತ್ರೆ ಎರಡನೇ ದಿನ 22 ಕಿ.ಮೀ. ದೂರ ಪಟ್ಟಣದ ಕೆಂಗಲ್ ಬಳಿ ಅಂತ್ಯಗೊಂಡಿತು.
ಬಿಡದಿಯಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ತಮ್ಮ ರಾಜಕೀಯ ಎದುರಾಳಿ ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ನೀಡುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಪಾದಯಾತ್ರೆ ಮಧ್ಯಾಹ್ನ ರಾಮನಗರಕ್ಕೆ ತಲುಪಿತು. ಸಂಜೆ ರಾಮನಗರ ಪ್ರವೇಶಿಸಿ ಬಹಿರಂಗ ಸಮಾವೇಶ ನಡೆಸಲಾಯಿತು. ರಾತ್ರಿ 8ಕ್ಕೆ ಕೆಂಗಲ್‌ಗೆ ಆಗಮಿಸಿ ಅಲ್ಲಿ ವಾಸ್ತವ್ಯ ಹೂಡಲಾಯಿತು.
ಬಿಜೆಪಿ ಕಾರ್ಯಕರ್ತರೇ ಹೆಚ್ಚು;
ಜೆಡಿಎಸ್ ಕಾರ್ಯಕರ್ತರು ವಿರಳ
ಪಾದಯಾತ್ರೆ 2ನೇ ದಿನದಲ್ಲಿಯೂ ಬಿಜೆಪಿ ಕಾರ್ಯ ಕರ್ತರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಜೆಡಿಎಸ್ ಕಾರ್ಯಕರ್ತರ ಸಂಖ್ಯೆ ವಿರಳವಾಗಿತ್ತು. ಜೆಡಿಎಸ್ ಬಲಿಷ್ಠವಾಗಿ ರುವ ಪ್ರಾಂತ್ಯದಲ್ಲೇ ಪಾದಯಾತ್ರೆ ಸಾಗುತ್ತಿದ್ದರೂ ಜೆಡಿಎಸ್ ಕಾರ್ಯಕರ್ತರ ಸಂಖ್ಯೆ ಕಡಿಮೆ ಇದ್ದಿದ್ದು ಅಚ್ಚರಿಗೆ ಕಾರಣವಾಯಿತು. ಬಿಜೆಪಿ ನಾಯಕರನ್ನು ಈ ಬಗ್ಗೆ ಪ್ರಶ್ನಿಸಿದಾಗ ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಡಿಯಲು ನೀರು ಉಂಟು,
ಶೌಚಾಲಯ ವ್ಯವಸ್ಥೆ ಇಲ್ಲ!
ಪಾದಯಾತ್ರೆ ಸಾಗುವ ಹಾದಿಯಲ್ಲಿ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಸೂಕ್ತ ಶೌಚಾಲಯ ವ್ಯವಸ್ಥೆ ಇರಲಿಲ್ಲ. ಶೌಚಾಲಯದ ಸಮಸ್ಯೆ ಹಲವರನ್ನು ಕಾಡಿತ್ತು. ಅದರಲ್ಲಿಯೂ ಮಹಿಳೆಯರಿಗೆ ಹೆಚ್ಚಿನ ಸಮಸ್ಯೆ ತಂದಿತ್ತು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಇರಬೇಕಿತ್ತು ಎಂದು ಬಿಜೆಪಿಯ ಮಹಿಳಾ ಕಾರ್ಯಕರ್ತೆಯೊಬ್ಬರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್‌ಐಆರ್
Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.