ಡಿ.ಕೆ ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ, ಫೋನ್ ಕದ್ದಾಲಿಕೆ ಆರೋಪ ಶುದ್ಧಸುಳ್ಳು: ಯೋಗೇಶ್ವರ್

Team Udayavani, Aug 24, 2020, 4:21 PM IST

ಡಿ.ಕೆ ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ, ಫೋನ್ ಕದ್ದಾಲಿಕೆ ಆರೋಪ ಶುದ್ಧಸುಳ್ಳು: ಯೋಗೇಶ್ವರ್

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಪರಿಷತ್ ಸದಸ್ಯ ​ಸಿ ಸಿ.ಪಿ. ಯೋಗೇಶ್ವರ್ ಮಾತಿನ ಸಮರ ಮುಂದುವರಿಸಿದ್ದಾರೆ. ‘ಡಿ.ಕೆ ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ. ಅವರ ಫೋನ್ ಕದ್ದಾಲಿಕೆ ಮಾಡಿ ನಮ್ಮ ಸರ್ಕಾರ ಯಾವ ರಾಜ್ಯ ಗೆಲ್ಲಬೇಕಾಗಿದೆ?’ ಎಂದು ಸಿ.ಪಿ. ಯೋಗೇಶ್ವರ್ ಕುಟುಕಿದ್ದಾರೆ.

ಚನ್ನಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿವೈ, ‘ಡಿಕೆಶಿ ಫೋನ್ ಟ್ಯಾಪಿಂಗ್ ಆರೋಪ ಮಾಡುತ್ತಿದ್ದಾರೆ. ಆದರೆ, ಅವರೇ ಒಬ್ಬ ಕಳ್ಳ. ಅವರು ಇನ್ನೊಬ್ಬರ ಮೇಲೆ ಆರೋಪ ಮಾಡೋಕೆ ಏನಿದೆ? ಫೋನ್ ಕದ್ದಾಲಿಕೆ ಆರೋಪ ಶುದ್ಧಸುಳ್ಳು. ಅವರ ಫೋನ್‍ನನ್ನು ಯಾವ ಉದ್ದೇಶಕ್ಕಾಗಿ ಕದ್ದಾಲಿಕೆ ಮಾಡಬೇಕು? ಅದರ ಅಗತ್ಯ ಏನಿದೆ? ಅವರ ಫೋನ್ ಕದ್ದಾಲಿಕೆ ಮಾಡಿ ಯಾವ ರಾಜ್ಯ ಗೆಲ್ಲಬೇಕಾಗಿದೆ?’ ಎನ್ನುವ ಮೂಲಕ ಡಿಕೆಶಿ ಆರೋಪಕ್ಕೆ ವ್ಯಂಗ್ಯವಾಗಿಯೇ ತಿರುಗೇಟು ನೀಡಿದರು.

‘ಡಿಕೆ ಶಿವಕುಮಾರ್ ಅವರೇ ಈ ಹಿಂದೆ ಫೋನ್ ಟ್ಯಾಪಿಂಗ್ ಮಾಡಿಸಿ, ಅದನ್ನು ನಮ್ಮ ಪಕ್ಷದ ಮೇಲೆ ಆರೋಪ ಹೊರಿಸಿದ್ದರು. ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಅವರು ಇಂತಹ ಆರೋಪ ಮಾಡುತ್ತಿದ್ದಾರೆ ಎಂದ ಯೋಗೇಶ್ವರ್​, ಫೋನ್​ ಕದ್ದಾಲಿಕೆ ಮಾಡುವುದರಲ್ಲಿ ಡಿಕೆಶಿ ಅನುಭವಿ’ ಎಂದು ಟೀಕಿಸಿದರು.

‘ಇನ್ನು ನರೇಗಾ ಹಣವನ್ನು ಕನಕಪುರದವರು ಜಾಸ್ತಿ ಪಡೆಯುತ್ತಿದ್ದಾರೆ. ಇದರಿಂದಾಗಿ ಮೂರು ತಾಲೂಕುಗಳಿಗೆ ಅನ್ಯಾಯವಾಗುತ್ತಿದೆ. ಅಧಿಕಾರಿಗಳು ಜಿಲ್ಲೆಯಲ್ಲಿ ಹಣವನ್ನು ಸಮಾನ ಹಂಚಿಕೆ ಮಾಡಬೇಕು. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುವ ಸಮಯಕ್ಕೆ ಸರಿಯಾಗಿ ಒಬ್ಬರು ಅಧಿಕಾರಿಗಳ ಸಭೆ ಕರೆಯುತ್ತಾರೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿದ್ದಂತೆ, ಕನಕಪುರದವರು ಹಣ ಡ್ರಾ ಮಾಡಿಕೊಳ್ಳುತ್ತಾರೆ’ ಎಂದ ಯೋಗೇಶ್ವರ್​, ಸಂಸದ ಡಿ.ಕೆ.ಸುರೇಶ್​ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ತಪ್ಪು ಮಾಹಿತಿಯಿಂದ ಟ್ವೀಟ್ ಮಾಡಿದ್ದೆ’: ವಿವಾದವಾಗುತ್ತಿದ್ದಂತೆ ಉಲ್ಟಾ ಹೊಡೆದ ಕಪಿಲ್ ಸಿಬಲ್

ಇನ್ನು ಎಂಎಲ್​ಸಿ ಆಗಿ ನಾಮನಿರ್ದೇನಗೊಂಡ ಮರುದಿನವೇ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಯೋಗೇಶ್ವರ್​, ‘ಮಾಜಿ ಸಿಎಂ ಎಚ್‍ಡಿಕೆ ಮತ್ತು ಡಿಕೆಶಿ ವಿರುದ್ಧ ಹೋರಾಡಲು ನನಗೆ ಕಷ್ಟವೇನಿಲ್ಲ. ಇವರಿಬ್ಬರೂ ರಿಟೈಡ್ ಆಗಿರುವ ಕುದುರೆಗಳು’ ಎಂದು ಕುಟುಕಿದ್ದರು.

ಇದೀಗ ಎಚ್​.ಡಿ. ಕುಮಾರಸ್ವಾಮಿ ಪರ ಮೃದುಧೋರಣೆ ವ್ಯಕ್ತಪಡಿಸುತ್ತಿರುವ ಸಿಪಿವೈ, ‘ಬಿಜೆಪಿ ಸರ್ಕಾರವನ್ನು ಕುಮಾರಸ್ವಾಮಿ ಹೊಗಳುತ್ತಿದ್ದಾರೆ. ಅವರು ನಮ್ಮ ಸರ್ಕಾರದ ಜೊತೆ ಹೊಂದಾಣಿಕೆಯಿಂದ ಇದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕುಮಾರಸ್ವಾಮಿ ಬಲಯುತವಾಗಿದ್ದಾರೆ. ಅವರು ಸರ್ಕಾರದಿಂದ ಹಣ ತಂದು ಅಭಿವೃದ್ಧಿ ಮಾಡಲು ಶಕ್ತರಾಗಿದ್ದಾರೆ. ನಾನು ಕೂಡ ಅವರೊಂದಿಗೆ ಸಹಕರಿಸುತ್ತೇನೆ’ ಎಂದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.