ಅಖಾಡದಲಿ ಕಾದಾಟಕ್ಕೆ ಅಭ್ಯರ್ಥಿಗಳು ಸಿದ್ಧ

Team Udayavani, Mar 28, 2019, 4:57 PM IST

Udayavani Kannada Newspaper
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಖಾಡ ಸಿದ್ಧವಾಗಿದೆ. ತ್ರಿಕೋನ ಸ್ಪರ್ಧೆ ಇರುತ್ತಿದ್ದ ಈ ಕ್ಷೇತ್ರದಲ್ಲಿ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಹೀಗಾಗಿ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ನಡುವೆ ನೇರ ಹಣಾಹಣಿ ಏರ್ಪಡಲಿದೆ.
ಡಿ.ಕೆ.ಸುರೇಶ್‌ ಮೂರನೇ ಬಾರಿಗೆ ಸ್ಪರ್ಧೆ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌
ಅಭ್ಯರ್ಥಿ ಡಿ.ಕೆ.ಸುರೇಶ್‌ ಇದು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.  2009ರಲ್ಲಿ ಅಸ್ಥಿತ್ವಕ್ಕೆ ಬಂದ ಈ ಕ್ಷೇತ್ರದಿಂದ ಎಚ್‌.ಡಿ.ಕುಮಾರಸ್ವಾಮಿ ಆಯ್ಕೆಯಾಗಿ ಲೋಕಸಭೆಯನ್ನು ಪ್ರಥಮ ಬಾರಿಗೆ ಪ್ರವೇಶಿಸಿದ್ದರು. 2013ರಲ್ಲಿ ಅವರು ರಾಜ್ಯ ರಾಜಕಾರಣಕ್ಕೆ ಮರಳಿದ ಕಾರಣ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್‌ ಸ್ಪರ್ಧಿಸಿ ವಿಜೇಯಿಯಾದರು. 2014ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿಯೂ ಅವರು ಮತ್ತೆ ಸ್ಪರ್ಧಿಸಿ ಗೆಲುವು ಸಾಧಿಸಿದರು.
ಬಿಜೆಪಿ ಅಭ್ಯರ್ಥಿ ಅಶ್ವತ್ಥ ನಾರಾಯಣ್‌ ಅವರು ಲೋಕಸಭೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲು. ಈ ಮೊದಲು
ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಎರಡನೇ ಬಾರಿಗೆ ಸಾರ್ವತ್ರಿಕ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
25 ಲಕ್ಷ ಮತದಾರರನ್ನು ತಲುಪುವ ಸವಾಲಿನ ಕೆಲಸ: ಏಪ್ರಿಲ್‌ 18 ಮತದಾನದ ದಿನವಾಗಿದ್ದು, ಜಿಲ್ಲೆಯಲ್ಲಿ ರಾಜಕೀಯ ಕಾವು ಪಡೆದುಕೊಂಡಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 25 ಲಕ್ಷ ಮತದಾರರಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ನಗರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 16 ಲಕ್ಷ ಮತದಾರರಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 9 ಲಕ್ಷ ಮತದಾರರಿದ್ದಾರೆ. ಈ ಪ್ರಮಾಣದಲ್ಲಿರುವ ಮತದಾರರ ಮನವೊಲಿಸುವುದು ಸವಾಲಿನ ಕೆಲಸ. ಹೀಗಾಗಿ ರಾಜಕೀಯ ಪಕ್ಷಗಳು ತಮ್ಮ ಬೂತ್‌ ಮಟ್ಟದ ಕಾರ್ಯಕರ್ತರನ್ನೇ ನೆಚ್ಚಿಕೊಂಡಿದ್ದಾರೆ. ಮೇಲಾಗಿ ಬಿಸಿಲಿನ ಝಳ ತೀವ್ರವಾಗಿದ್ದು, ಪ್ರಚಾರ ಕಾರ್ಯ ಎಂತಹವರನ್ನು ಹೈರಾಣಾಗಿಸುವಂತಿದೆ. ಪಕ್ಷಗಳ ನಾಯಕರು ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕಾಗಿದೆ.
ಪ್ರಚಾರಕ್ಕೆ ಸಿದ್ಧತೆ: ಮಂಗಳವಾರ ನಾಮಪತ್ರಗಳ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಪ್ರಚಾರ ಕಾರ್ಯಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುವ ಕಾರ್ಯದಲ್ಲಿ ಅಭ್ಯರ್ಥಿಗಳು ತೊಡಗಿಸಿಕೊಂಡರು. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ಈಗಾಗಲೇ ಬೂತ್‌ ಮಟ್ಟದ ನಾಯಕರ ಒಂದೆರೆಡು ಸಭೆಗಳನ್ನು ಆಯೋಜಿಸಿದ್ದಾರೆ. ಕೊನೆಗಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿಯ ಅಖೈರಾದ ಕಾರಣ ಇನ್ನಷ್ಟೇ ಈ ಪಕ್ಷದ ಕಾರ್ಯಕರ್ತರ ಸಭೆಗಳನ್ನು ನಡೆಸಬೇಕಾಗಿದೆ.
ಮಾರ್ಚ್‌ 31ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳ ಬೃಹತ್‌ ಸಮಾವೇಶವನ್ನು ಹಮ್ಮಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ ಸೇರಿದಂತೆ ಅತಿ ಗಣ್ಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಕಾರ್ಯತಂತ್ರ ಚುರುಕು: ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ತಾವು ಸಹ ತಮ್ಮ ಕಾರ್ಯತಂತ್ರವನ್ನು ಚುರುಕುಕೊಳಿಸುವುದಾಗಿ ಹೇಳಿದ್ದಾರೆ. ನರೇಂದ್ರ ಮೋದಿಯವರ ಸಭೆಯನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ಅಶ್ವತ್ಥನಾರಾಯಣ್‌ ಅವರಿಗೆ ಚುನಾವಣಾ ರಾಜಕೀಯ ಚೆನ್ನಾಗಿ ಪರಿಚಯವಿದೆ. ಕ್ಷೇತ್ರದ ಪರಿಚಯ ಇಲ್ಲ ಎಂಬ ಮೈತ್ರಿ ಪಕ್ಷಗಳ ಟೀಕೆಯನ್ನು ತಳ್ಳಿ ಹಾಕಿರುವ ಬಿಜೆಪಿ ಕಾರ್ಯಕರ್ತರು ಇಡೀ ಕ್ಷೇತ್ರದಲ್ಲಿ ಅಶ್ವತ್ಥನಾರಾಯಣ್‌ ಸಂಭಾವಿತ ಅಭ್ಯರ್ಥಿ ಅಂತಲೇ ಗುರುತಿಸಿಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ಕ್ಷೇತ್ರದ ಚುನಾವಣಾ ಅಖಾಡ ಸಿದ್ಧವಾಗಿದೆ. ಇನ್ನೇನಿದ್ದರು ರಣಕಲಿಗಳು ಅಖಾಡದಲ್ಲಿ ಕಾದಾಟ ನಡೆಸಬೇಕಾಗಿದೆ. ಕೇಂದ್ರ ಸರ್ಕಾರದಲ್ಲಿ ತಮ್ಮ ಪ್ರತಿನಿಧಿಯಾರಾಗಬೇಕು ಎಂಬ ಅಂತಿಮ ನಿರ್ಧಾರವನ್ನು ಮತದಾರರು ಏಪ್ರಿಲ್‌ 18ರಂದು
ಬರೆಯಲಿದ್ದಾರೆ. ಮೇ 23ರಂದು ಮತದಾರರ ನಿರ್ಧಾರ ಏನು ಎಂಬುದು ಪ್ರಕಟವಾಗಲಿದೆ.
ರಣತಂತ್ರಕ್ಕೆ ಬಿಜೆಪಿ ಸಿದ್ಧತೆ ಬಿಜೆಪಿ ಕಾರ್ಯಕರ್ತರು ತಾವು ಸಹ ತಮ್ಮ ಕಾರ್ಯತಂತ್ರವನ್ನು ಚುರುಕುಕೊಳಿಸುವುದಾಗಿ
ಹೇಳಿದ್ದಾರೆ. ನರೇಂದ್ರ ಮೋದಿಯವರ ಸಭೆಯನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಅಶ್ವತ್ಥನಾರಾಯಣ್‌ಗೆ ಚುನಾವಣಾ ರಾಜಕೀಯ ಚೆನ್ನಾಗಿ ಪರಿಚಯವಿದೆ. ಇಡೀ ಕ್ಷೇತ್ರದಲ್ಲಿ ಅಶ್ವತ್ಥನಾರಾಯಣ್‌ ಸಂಭಾವಿತ ಅಭ್ಯರ್ಥಿ ಅಂತಲೇ ಗುರುತಿಸಿಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
●ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.