ಡಿವೈಡರ್ ಹಾರಿ ಬಂದ ಕಾರು ಬೈಕ್ ಗೆ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
Team Udayavani, Jan 31, 2020, 10:13 AM IST
ರಾಮನಗರ: ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚನ್ನಪಟ್ಟಣದ ಮತ್ತೀಕೆರೆಯಲ್ಲಿ ನಡೆದಿದೆ.
ಬೈಕ್ ಸವಾರರಾದ ರಾಹುಲ್ (18), ಅಭಿಷೇಕ್ (20) ಮೃತ ಯುವಕರು. ಘಟನೆಯಲ್ಲಿ ಓರ್ವ ಪಾದಚಾರಿ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಚನ್ನಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿಯ ಮತ್ತೀಕೆರೆಯ ಶಿವಳ್ಳಿ ಹೋಟೆಲ್ ಬಳಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿತ್ತು ಎನ್ನಲಾಗಿದೆ.
ಮೃತರಿಬ್ಬರು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕು ಸೀಬನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ