- Sunday 08 Dec 2019
ಕನಕದಾಸರ 530ನೇ ಜಯಂತ್ಯುತ್ಸವ ಆಚರಣೆ
Team Udayavani, Nov 16, 2019, 3:51 PM IST
ಕನಕಪುರ: ಬಾಗಿಲನು ತೆರೆದು ಸೇವೆಯನು ಕೊಡೋ ಹರಿಯೇ ಎಂದು ಹಾಡುವ ಮೂಲಕ ಕನಕದಾಸರು ಕಿಂಡಿಯಲ್ಲಿ ಕೃಷ್ಣನ ದರ್ಶನ ಪಡೆ ದವರು ಎಂದು ತಹಶೀಲ್ದಾರ ಆನಂದಯ್ಯ ತಿಳಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 530ನೇ ಕನಕದಾಸರ ಜಯಂತ್ಯುತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತನ್ನ ತಂದೆಯ ಅಕಾಲಿಕ ಮರಣದ ನಂತರ ಅಧಿಕಾರ ವಹಿಸಿಕೊಂಡ ದಂಡ ನಾಯಕನಾಗಿ ಮೊದಲ ಯುದ್ಧದಲ್ಲಿ ಸೋತ ನಂತರ ವೈರಾಗ್ಯ ಹೊಂದಿ ವ್ಯಾಸ ರಾಯರ ಶಿಷ್ಯರಾಗಿ ಕನಕದಾಸ ಎಂದು ನಾಮಾಂಕಿತರಾಗಿ ದಾಸ ಪರಂಪರೆಯ 250 ದಾಸರಲ್ಲಿ ಶ್ರೇಷ್ಠ ದಾಸರಾದರು ಎಂದು ಹೇಳಿದರು.
ಕನಕದಾಸರು ಪುರಂದರದಾಸರು, ವಾದಿರಾಜರ ಸ್ನೇಹ ಗಳಿಸಿಕೊಂಡು ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಕೃಷ್ಣನ ನೆನೆದು ಹಾಡಿ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದರು ಅದೇ ಕನಕನ ಕಿಂಡಿ. 316 ಕೀರ್ತನೆಗಳು ಐದು ಕೃತಿ ಗಳನ್ನು ರಚಿಸಿ ತಿಮ್ಮಪ್ಪನಾಯಕ ಕನಕದಾಸ ಕನಕ ನಾಯಕ ಎಂಬ ಬಿರುದು ಪಡೆದು ವಿಶ್ವಮಾನವರಾಗಿ ಹೊರ ಹೊಮ್ಮಿದರು ಎಂದು ತಿಳಿಸಿದರು.
ಆಹಾರ ಇಲಾಖೆ ಅಧಿಕಾರಿ ಪ್ರಕಾಶ್ ಮಾತನಾಡಿ, ಯಾವುದೇ ವ್ಯಕ್ತಿ ಹುಟ್ಟಿನಿಂದ ಶ್ರೇಷ್ಠನಾಗಲು ಸಾಧ್ಯವಿಲ್ಲ. ಅವನ ಸಂಸ್ಕಾರದಿಂದ ಶ್ರೇಷ್ಠನಾಗಲು ಸಾಧ್ಯ. ಒಬ್ಬ ಸಾಧಾರಣ ತಿಮ್ಮಪ್ಪ ನಾಯಕ ಎಂಬ ವ್ಯಕ್ತಿ ಕನಕದಾಸನಾಗಿ ಪರಿವರ್ತನೆಯಾಗಿ ದೇಶದ ಆಸ್ತಿಯಾಗಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ಕೊಟ್ಟಿದ್ದಾರೆ. ನಮ್ಮ ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಕನಕದಾಸರು ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಮಹನೀಯರ ಜಯಂತಿಯನ್ನು ಆಚ ರಿಸುವುದರ ಜೊತೆಗೆ ಅವರ ವ್ಯಕ್ತಿತ್ವವನ್ನು ಇಂದಿನ ಯುವ ಪೀಳಿಗೆಗೆ ತಿಳಿಸ ಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ಬಸಪ್ಪ, ತಾಪಂ ಸದಸ್ಯ ಬೊಜಿಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಮುನಿ ಉಚೇ ಗೌಡ, ಶಿರಸ್ತೆದಾರ್ ರಘು, ಅಧಿಕಾರಿಗಳು ಉಪಸ್ಥಿತರಿದ್ದರು
ಈ ವಿಭಾಗದಿಂದ ಇನ್ನಷ್ಟು
-
ರಾಮನಗರ/ಬೆಂಗಳೂರು: ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಹಿಂದಕ್ಕೆ ಪಡೆದಿರುವ ಬಿಜೆಪಿ ಸರಕಾರದ ಕ್ರಮಕ್ಕೆ ಕನಕಪುರ ಶಾಸಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್...
-
ರಾಮನಗರ: ಕನಿಷ್ಠ ಬೆಂಬಲ ಬೆಲೆಯೋಜನೆಯಡಿ ಜಿಲ್ಲೆಯಲ್ಲಿ ಬೆಳೆದಿರುವ ರಾಗಿ ಮತ್ತು ಭತ್ತ ಖರೀದಿ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್....
-
ರಾಮನಗರ: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳು ದಿನದ ಆಚರಣೆಗೆ ಸೀಮಿತವಾಗದೇ ವರ್ಷ ಪೂರ್ತಿ ಆಚರಣೆಯಾಗಲಿ ಎಂದು ಜಿಲ್ಲಾಧಿಕಾರಿ ಎಂ....
-
ಮಾಗಡಿ: ಪಟ್ಟಣದ ಐತಿಹಾಸಿಕ ನಾಡಪ್ರಭು ಕೆಂಪೇಗೌಡ ಕೋಟೆ ಮೈದಾನದಲ್ಲಿ ಡಿ.12ರ ಗುರುವಾರ ದಿನದಂದು ನಡೆಯಲಿರುವ ಕೆಂಪೇಗೌಡರ 511ನೇ ಜಯಂತ್ಯುತ್ಸವದ ಬೃಹತ್ ವೇದಿಕೆ...
-
ಮಾಗಡಿ: ಮಂಚನಬೆಲೆ ಜಲಾಯದಿಂದ ಮಾಗಡಿ ಪಟ್ಟಣಕ್ಕೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಪೈಪ್ ವಿ.ಜಿ.ದೊಡ್ಡಿ ಮಂಚನಬೆಲೆ ಮಾರ್ಗಮಧ್ಯೆದಲ್ಲಿ ಹೊಡೆದು ಹೋಗಿದ್ದು,...
ಹೊಸ ಸೇರ್ಪಡೆ
-
ಕರಿಬೇವಿನ ಎಲೆಯಲ್ಲಿರುವ ಗಂಧಕಯುಕ್ತ ಎಣ್ಣೆಯ ಅಂಶವೇ "ಘಮ…' ಎನ್ನುವ ಸುವಾಸನೆಗೆ ಕಾರಣ. ಇದನ್ನು ಅಡುಗೆ ಮನೆಯಲ್ಲಿ ಮಾತ್ರವೇ ಅಲ್ಲದೆ, ಆಯುರ್ವೇದ ಔಷಧಗಳ ತಯಾರಿಕೆಗೂ...
-
"ಬಲೆ ಬೆಳೆ' ಎಂದರೆ ಮುಖ್ಯಬೆಳೆಯನ್ನು ಕೀಟಬಾಧೆಯಿಂದ ರಕ್ಷಿಸುವುದು. ಬಲೆ ಬೆಳೆಯಾಗಿ ಕೆಲವಾರು ಬೆಳೆಗಳನ್ನು ಬೆಳೆಯುತ್ತಾರೆ. ಈ ಎಲ್ಲ ಬೆಳೆಯನ್ನೂ ಒಟ್ಟಿಗೆ ಬೆಳೆಯುವ...
-
ಆ್ಯಂಡ್ರೋಕ್ಲಿಫ್ ಎಂಬ ರೈತನಿದ್ದ. ಅವನು ಶ್ರಮಪಟ್ಟು ದುಡಿದು ಬಂಜರು ಭೂಮಿಯಲ್ಲಿ ಕೃಷಿ ಮಾಡಿದ್ದ. ಹಲವಾರು ಹಣ್ಣುಗಳ ಮರಗಳನ್ನು ಬೆಳೆಸಿ ಕೈತುಂಬ ಫಸಲು ಕೊಯ್ಯುತ್ತಿದ್ದ....
-
ಆಕಾಶ ವೀಕ್ಷಕರಿಗೆ, ಪ್ರಕೃತಿಪ್ರಿಯರಿಗೆ ಸಂತಸದ ಸುದ್ದಿ. ಇದೇ ಡಿಸೆಂಬರ್ 26 ರಂದು ಬಲು ಅಪರೂಪದ ಸೂರ್ಯ ಗ್ರಹಣ! ಇದು ಕಂಕಣ ಸೂರ್ಯಗ್ರಹಣ. ದಕ್ಷಿಣಭಾರತದವರಿಗೆ...
-
ನಗರದ ಕೇಂದ್ರ ಭಾಗವಾದ ಖಾಸಗಿ ಸರ್ವಿಸ್ ಬಸ್ ನಿಲ್ದಾಣ ಅವ್ಯವಸ್ಥೆಯಿಂದ ಕೂಡಿದೆ. ಬಸ್ ನಿಲುಗಡೆಗೆ ಜಾಗವಿಲ್ಲದೆ ಎಲ್ಲೆಂದರಲ್ಲಿ ಬಸ್ಗಳನ್ನು ನಿಲುಗಡೆ ಮಾಡಲಾಗುತ್ತದೆ....