ಭಕ್ತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಬದ್ಧ

18ಕ್ಕೆ ಸಾವನದುರ್ಗದ ಲಕ್ಷ್ಮೀನರಸಿಂಹಸ್ವಾಮಿ ಜಾತ್ರೆ • ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ

Team Udayavani, May 7, 2019, 3:44 PM IST

ramanagar-tdy-1..

ಮಾಗಡಿ ತಾಲೂಕಿನ ಸಾವನದುರ್ಗದ ಲಕ್ಷ್ಮೀನರಸಿಂಹಸ್ವಾಮಿ ಜಾತ್ರೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಟಿ.ಎನ್‌.ಕೃಷ್ಣಮೂರ್ತಿ ಮಾತನಾಡಿದರು.

ಮಾಗಡಿ: ಇತಿಹಾಸ ಪ್ರಸಿದ್ಧ ಸಾವನದುರ್ಗದ ಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದ ಮೇ 18ರಂದು ನಡೆಯಲಿದೆ. ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಭಕ್ತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ತಾಲೂಕು ಆಡಳಿತ ಬದ್ಧವಾಗಿದೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಪವಿಭಾಗಾಧಿಕಾರಿ ಟಿ.ಎನ್‌.ಕೃಷ್ಣಮೂರ್ತಿ ತಿಳಿಸಿದರು.

ತಾಲೂಕಿನ ಮಾಡಬಾಳ್‌ ಹೋಬಳಿ ಹಂಚೀಕುಪ್ಪೆ ಗ್ರಾಮ ಪಂಚಾಯ್ತಿಗೆ ಸೇರಿದ ಪ್ರಸಿದ್ಧ ಸಾವನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವದ ಪ್ರಯಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಪ್ರಕೃತಿಯ ಮಡಿಲಲ್ಲಿರುವ ಪ್ರಸಿದ್ಧ ಸಾವನದುರ್ಗ ಪ್ರವಾಸಿ ತಾಣವಾಗಿದೆ. ಮುಜರಾಯಿ ಇಲಾಖೆಗೆ ಸೇರಿದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರತಿವರ್ಷವೂ ಬ್ರಹ್ಮರಥೋತ್ಸವ ನಡೆದುಕೊಂಡು ಬರುತ್ತಿದೆ. ಆದರೆ, ಪ್ರತಿವರ್ಷವೂ ಸಹ ಜಾತ್ರಾ ಮಹೋತ್ಸವದಲ್ಲಿ ಅವ್ಯವಸ್ಥೆಯ ಹೆಚ್ಚಾಗಿದೆ ಎಂಬ ಆರೋಪ ಭಕ್ತರಿಂದ ಕೇಳಿಬರುತ್ತಿದೆ. ಆದ್ದರಿಂದ ಈ ವರ್ಷ ಯಾವುದೇ ಅವ್ಯವಸ್ಥೆಗೆ ಅವಕಾಶ ನೀಡದಂತೆ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ನಡೆಸಬೇಕೆಂಬ ಉದ್ದೇಶದಿಂದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ದೇವಸ್ಥಾನದ ಸಮಿತಿ ಮುಖ್ಯಸ್ಥರು ಹಾಗೂ ಭಕ್ತರ ಸಮ್ಮುಖದಲ್ಲಿ ಚರ್ಚಿಸಿ, ಸೂಕ್ತ ಸಲಹೆ ಮೇರೆಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿ ವರ್ಗಕ್ಕೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.

ಕಟ್ಟುನಿಟ್ಟಿನ ಕ್ರಮ: ಪ್ರತಿವರ್ಷವೂ ಸಾವನದುರ್ಗದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಜಮಾಯಿಸುತ್ತಿದ್ದಾರೆ. ಈ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಇದರಿಂದ ಈಗಿರುವ ಶೌಚಾಲಯಗಳ ಜೊತೆಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲು ಗುತ್ತಿಗೆದಾರರಿಗೆ ಗುತ್ತಿಗೆ ಕೊಡಲು ಸೂಚನೆ ನೀಡಿದ್ದೇನೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಭಕ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾಯಕನಪಾಳ್ಯದ ಗೇಟ್ನಿಂದ ಸಾವನದುರ್ಗದವರೆಗೆ ರಸ್ತೆಯ ಎರಡು ಬದಿ ಯಾವುದೇ ವಾಹನಗಳನ್ನು ಪಾರ್ಕಿಂಗ್‌ ಮಾಡದಂತೆ ಪೊಲೀಸ್‌ ಇಲಾಖೆಗೆ ಮಾರ್ಗದರ್ಶನ ಮಾಡಲಾಗಿದೆ ಎಂದು ಹೇಳಿದರು.

ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ: ಸಾವನದುರ್ಗದಲ್ಲಿ ಕಾರು, ಬಸ್‌, ಟ್ರ್ಯಾಕ್ಟರ್‌ ಹಾಗೂ ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕವಾಗಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು. ಹಾಗೊಂದು ವೇಳೆ ಹೆಚ್ಚಿನ ಪಾರ್ಕಿಂಗ್‌ ವ್ಯವಸ್ಥೆಗೆ ಸಮಸ್ಯೆಯಾದರೆ, ನಾಯಕನಪಾಳ್ಯದ ಬಳಿ ಪಾರ್ಕಿಂಗ್‌ಗೆ ವ್ಯವಸ್ಥೆಗೆ ವಿಸ್ತರಿಸಲಾಗುವುದು. ಆಟೊ, ಮಿನಿ ಬಸ್‌ಗಳಲ್ಲಿ ಸಾರ್ವಜನಿಕರನ್ನು ಕರೆದೊಯ್ಯಲು ವ್ಯವಸ್ಥೆ ಮಾಡಲು ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ. ಅಟೋಗಳಲ್ಲಿ ಸಾರಿಗೆ ನಿಯಮ ಪಾಲಿಸುವಂತೆ ನೋಡಿಕೊಳ್ಳಲು ಪೊಲೀಸರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.

ದರ್ಶನಕ್ಕೆ ಉತ್ತಮ ವ್ಯವಸ್ಥೆ: ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಮತ್ತು ದೇವಸ್ಥಾನದಲ್ಲಿನ ದೇವರ ದರ್ಶನಕ್ಕೂ ಸಹ ಯಾವುದೇ ಗೊಂದಲಕ್ಕೆ ಅವಕಾಶಕೊಡದಂತೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗುವುದು. ಕುಡಿವ ನೀರು ಪೂರೈಕೆ, ಆರೋಗ್ಯ ಸೇವೆ, ವಿದ್ಯುತ್‌ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವಂತೆ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಪ್ರಸಾದ ವಿನಿಯೋಗ ಕಡೆ ಎಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಸೂಚನೆ ನೀಡಲಾಗಿದೆ.

ಸಭೆಯಲ್ಲಿ ತಹಶೀಲ್ದಾರ್‌ ನರಸಿಂಹಮೂರ್ತಿ, ಕಾರ್ಮಿಕದತ್ತಿ ಇಲಾಖೆಯ ಕಾರ್ಯನಿವಾರ್ಹಕ ರಘು, ಮುಜರಾಯಿ ತಹಶೀಲ್ದಾರ್‌ ಲಕ್ಷ್ಮೀ ನಾರಾಯಣ, ವ್ಯವಸ್ಥಾಪನಾ ಅಧ್ಯಕ್ಷ ನಾಗರಾಜು, ಪಾರುಪತ್ತೆಗಾರ ಸೋಮಶೇಖರ್‌, ಮುಜರಾಯಿ ಗುಮಾಸ್ತಾ ಚಂದ್ರಶೇಖರ್‌, ಅರ್ಚಕರು, ದೇವಸ್ಥಾನದ ಸಿಬ್ಬಂದಿ ಭಾಗವಹಿಸಿದ್ದರು

ಟಾಪ್ ನ್ಯೂಸ್

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಚನ್ನಪಟ್ಟಣ ಟಿಕೆಟ್‌: ಮೈತ್ರಿಪಕ್ಷದಲ್ಲಿ ಪೈಪೋಟಿ?

CP Yogeshwar ಸ್ಫೋಟಕ ಹೇಳಿಕೆ ಬೆನ್ನಲ್ಲೇ ದರ್ಶನ ಜೊತೆಗಿನ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

CP Yogeshwar ಸ್ಫೋಟಕ ಹೇಳಿಕೆ ಬೆನ್ನಿಗೆ ದರ್ಶನ್ ಜೊತೆಗಿನ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

Tragedy: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

Tragedy: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

Did the Congress offer a by-election ticket to Darshan? What did CP Yogeshwar say?

ದರ್ಶನ್ ಗೆ ಉಪಚುನಾವಣೆ ಟಿಕೆಟ್ ನೀಡಲು ಮುಂದಾಗಿತ್ತಾ ಕಾಂಗ್ರೆಸ್.? ಸಿಪಿವೈ ಹೇಳಿದ್ದೇನು?

ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

Congress ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.