ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರ ಆಕ್ರೋಶ

Team Udayavani, Mar 6, 2019, 7:25 AM IST

adhikari.jpg

ರಾಮನಗರ: ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಹಿಂಬಾಲಕರಿಗೆ ಮಾತ್ರ ಕಾಮಗಾರಿಗಳ ಗುತ್ತಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ತವರು ಕ್ಷೇತ್ರ ಚನ್ನಪಟ್ಟಣದ ಗುತ್ತಿಗೆದಾರರು ಸೇರಿದಂತೆ ಜಿಲ್ಲೆಯ ಗುತ್ತಿಗೆದಾರರು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಗುತ್ತಿಗೆದಾರರು ಇಲ್ಲಿನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಯಾವುದೇ ಟೆಂಡರ್‌ ಪ್ರಕ್ರಿಯೆ ನಡೆಸದೆ ಕಾಮಗಾರಿಗಳ ಗುತ್ತಿಗೆಯನ್ನು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಿಂಬಾಲಕರಿಗೆ ನೀಡುತ್ತಿದ್ದಾರೆ ಎಂದು ದೂರಿದರು. 

ಪರವಾನಗಿ ಇಲ್ಲದವರಿಗೂ ಗುತ್ತಿಗೆ: ವೇಳೆ ಗುತ್ತಿಗೆದಾರ ಪ್ರೇಮ್‌ಕುಮಾರ್‌ ಮಾತನಾಡಿ, ಚನ್ನಪಟ್ಟಣದಲ್ಲಿ ಗ್ರಾಮೀಣ ರಸ್ತೆ ಹಾಗೂ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ 1.90 ಕೋಟಿ ರೂ, ಅನುದಾನ ಬಿಡುಗಡೆ ಆಗಿದೆ. ಪ್ರತಿ ಕಾಮಗಾರಿಯನ್ನು 5 ಲಕ್ಷದೊಳಗೆ ತುಂಡು ಗುತ್ತಿಗೆಗಳನ್ನಾಗಿ ವಿಂಗಡಿಸಿ, ಜೆಡಿಎಸ್‌ ಕಾರ್ಯಕರ್ತರಿಗೆ ಸೀಕ್ರೆಟ್‌ ಟೆಂಡರ್‌ ಅಡಿಯಲ್ಲಿ ಕಾಮಗಾರಿಯ ಗುತ್ತಿಗೆ ನೀಡಲಾಗುತ್ತಿದೆ. ಗುತ್ತಿಗೆ ಪರವಾನಗಿ ಹೊಂದಿಲ್ಲದವರಿಗೂ ಅಧಿಕಾರಿಗಳು ಗುತ್ತಿಗೆ ನೀಡಲು ಮುಂದಾಗಿದ್ದಾರೆ. ಟೆಂಡರ್‌ ಕರೆದು 21 ದಿನಗಳ ಕಾಲಾವಕಾಶ ನೀಡುವುದು ಮುಂತಾದ ಯಾವ ನಿಯಮವನ್ನು ಅಧಿಕಾರಿಗಳು ಪಾಲಿಸಿಲ್ಲ ಎಂದು ಆರೋಪಿಸಿದರು.

ಅಧಿಕಾರಿಗಳಿಂದ ಅಕ್ರಮ: ಸೀಕ್ರೆಟ್‌ ಟೆಂಡರ್‌ ಮೂಲಕ ಮುಖ್ಯಮಂತ್ರಿ ಹಿಂಬಾಲಕರು ಮತ್ತು ಜೆಡಿಎಸ್‌ನ ಒಂದು ಬಣದ ಕಾರ್ಯಕರ್ತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಕಾನೂನು ಪ್ರಕಾರ ಟೆಂಡರ್‌ ಅಧಿಸೂಚನೆ ಹೊರಡಿಸಿ, ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ಬುಲೆಟಿನ್‌ ಹೊರತಂದಿಲ್ಲ. ಇಲಾಖೆಯ ಅಧಿಕಾರಿಗಳು ಅಕ್ರಮಕ್ಕೆ ಕೈಜೋಡಿಸಿದ್ದಾರೆ ಎಂದು ದೂರಿದರು.

ಕೆಲ ಮುಖಂಡರಿಗೆ ಮಾತ್ರ ಅನುಕೂಲ: ರಾಮನಗರಕ್ಕೂ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇಲ್ಲಿಯೂ ಕೆಲವು ಮುಖಂಡರಿಗೆ ಮಾತ್ರ ಅಧಿಕಾರಿಗಳು ಅನುಕೂಲ ಮಾಡಿಕೊಡುತ್ತಿದ್ದಾರೆ. ಆರೇಳು ತಿಂಗಳಿಂದೀಚೆ ಈ ಚಾಳಿ ಶುರುವಾಗಿದ್ದು, ಈ ಕ್ಷೇತ್ರಗಳ ಶಾಸಕರ ಆಪ್ತರಿಗೆ ಮಾತ್ರ ಕೆಲಸ ನೀಡಲಾಗುತ್ತಿದೆ ಎಂದು ದೂರಿದರು.

ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಒಪನ್‌ ಟೆಂಡರ್‌ ಕರೆಯಬೇಕು. ಇಲ್ಲವೆ ಕಾಮಗಾರಿಗಳ ಬಗ್ಗೆ ಗುತ್ತಿಗೆದಾರರ ಸಂಘಕ್ಕೆ ಮಾಹಿತಿ ನೀಡಬೇಕು. ಆದರೆ, ಅಧಿಕಾರಿಗಳು ಅದ್ಯಾವುದನ್ನು ಮಾಡುತ್ತಿಲ್ಲ. ಎಲ್ಲಾ ಗುತ್ತಿಗೆದಾರರನ್ನು ಅಧಿಕಾರಿಗಳು ಪರಿಗಣಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.