ಬಡವರ ಯೋಜನೆಗಳಿಗೆ ನ್ಯಾಯಾಲಯ ಕಣ್ಗಾವಲು


Team Udayavani, Sep 24, 2020, 2:54 PM IST

ಬಡವರ ಯೋಜನೆಗಳಿಗೆ ನ್ಯಾಯಾಲಯ ಕಣ್ಗಾವಲು

ರಾಮನಗರ: ಕೇಂದ್ರ ಸರ್ಕಾರದ ಬಡತನ ನಿರ್ಮೂಲನಾ ಯೋಜನೆ 2015ರ ಅಡಿಯಲ್ಲಿ ಜಾರಿಯಲ್ಲಿರುವ ವಿವಿಧ ಯೋಜನೆಗಳು ಅರ್ಹ ಫ‌ಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದರ ಬಗ್ಗೆ ನ್ಯಾಯಾಲಯ ಮೇಲ್ವಿಚಾರಣೆ ನಡೆಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ತಿಳಿಸಿದರು.

ವಾರ್ತಾ ಇಲಾಖೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಬಡ ಜನರ ಶ್ರೇಯೋಭಿವೃದ್ಧಿಗಾಗಿ ಜಾರಿಯಾಗಿರುವ ಯೋಜನೆಗಳ ಸವಲತ್ತುಗಳು ಇನ್ನು ಅರ್ಹ ಫ‌ಲಾನುಭವಿಗಳನ್ನು ತಲುಪಿಲ್ಲ ಎಂಬುದು ಮೇಲ್ನೋ ಟಕ್ಕೆ ಕಂಡು ಬಂದಿದೆ. ಹೀಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಈ ವಿಚಾರದಲ್ಲಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.

ಸಮಿತಿ ರಚನೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನವನ್ನು ರಾಜ್ಯ ಹೈಕೋರ್ಟ್‌ ಗಂಭೀರವಾಗಿ ಪರಿಗಣಿಸಿ, ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿತ್ತು. ಅದರಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ  ಪ್ರಾಧಿಕಾರನಿ ವೃತ್ತ ಹೈಕೋರ್ಟ್‌ನ್ಯಾಯಮೂರ್ತಿ ವೇಣುಗೋಪಾಲಗೌಡರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ ಎಂದರು.

ಗ್ರಾಮ ಭೇಟಿ: ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ವತಿಯಿಂದ ಆಯ್ಕೆಗೊಂಡ ಪ್ಯಾನಲ್ ವಕೀಲರುಗಳನ್ನು “ಕಾನೂನು ಸೇವೆಗಳ ಅಧಿಕಾರಿ’ ಎಂದು ನೇಮಿ ಸಿದೆ. ಪ್ರತಿ ಅಧಿಕಾರಿ ಸೇರಿದಂತೆ ಮೂರು ಮಂದಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಸಮಿತಿ ರಚಿಸಿ, ಸಮಿತಿಯ ಸದಸ್ಯರು ಮನೆ ಮನೆಗೆ ಭೇಟಿ ಕೊಟ್ಟು ಯೋಜನೆಯ ಲಾಭ ಸಿಕ್ಕಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಲಿದ್ದಾರೆ ಎಂದರು. ಈ ಸಮಿತಿಗಳ ಉಸ್ತುವಾರಿಗೆ ಪ್ರತಿ ತಾಲೂಕಿಗೆ ಒಬ್ಬ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಸೇರಿದಂತೆ ಇತರ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಹೊಣೆ ನೀಡಲಾಗುವುದು ಎಂದರು.

ನ್ಯಾಯಾಲಯ ಗಮನಿಸುವಯೋಜನೆಗಳು : ಪ್ರಧಾನ ಮಂತ್ರಿ ರೋಜಗಾರ್‌ ಯೋಜನೆ (ಪಿಎಂಆರ್‌ವೈ), ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಆರ್‌ಇಜಿಪಿ), ಸ್ವರ್ಣಜಯಂತಿ ಷಹರಿ ರೋಜಗಾರ್ ಯೋಜನೆ (ಎಸ್‌ಜೆಎಸ್‌ಆರ್‌ವೈ), ಸ್ವರ್ಣಜಯಂತಿ ಗ್ರಾಮ ರೋಜಗಾರ್‌ ಯೋಜನೆ (ಎಸ್‌ಜಿಎಸ್‌ವೈ), ಇಂದಿರಾ ಆವಾಸ್‌ ಯೋಜನೆ (ಐಎವೈ), ರಾಷ್ಟ್ರೀಯ ಸಾಮಾಜಿಕ ನೆರವುಕಾರ್ಯಕ್ರಮಗಳು(ಎನ್‌ ಎಸ್‌ಎಪಿ), ಮಹಿಳಾ ಮತ್ತು ಮಕ್ಕಳ ‌ ಕಲ್ಯಾಣ ಇಲಾಖೆ ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ  ‌ತಡೆಗಟ್ಟಲು ರೂಪಿಸಲಾದ ಯೋಜನೆಗಳು, ಭಾಗ್ಯಲಕ್ಷ್ಮೀ, ಸ್ತ್ರೀಶಕ್ತಿ ಸಂಘಗಳ ಅಭಿವೃದ್ಧಿ ಯೋಜನೆ, ಮಾತೃಶ್ರೀ, ಉದ್ಯೋಗಸ್ಥ ‌ಮಹಿಳೆಯರ ಪುನರ್ವವಸತಿ ಯೋಜನೆ ಇತ್ಯಾದಿ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

1-asdsads

T20 World Cup; ಸೂಪರ್‌-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್‌ ಸವಾಲು

27

Renukaswamy Case Follwup: ರೇಣುಕಾಸ್ವಾಮಿ ಮರ್ಮಾಂಗಕ್ಕೆ ತೀವ್ರ ಹಲ್ಲೆ?

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

Congress ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್‌

DK Suresh ನನ್ನ ಸೋಲಿಗೆ ಜಾತಿ ಪ್ರಬಲವಾಗಿ ಕೆಲಸ ಮಾಡಿದ್ದು ಕಾರಣ

DK Suresh ನನ್ನ ಸೋಲಿಗೆ ಜಾತಿ ಪ್ರಬಲವಾಗಿ ಕೆಲಸ ಮಾಡಿದ್ದು ಕಾರಣ

suicide

Ramanagara; ಚುನಾವಣೆಗೆ 50 ಲಕ್ಷ ರೂ. ಬೆಟ್ಟಿಂಗ್:ಹಣ ಕೊಡಲಾಗದೆ ವ್ಯಕ್ತಿ ಆತ್ಮಹತ್ಯೆ

12

Ramanagara JDS: ಜಿಲ್ಲಾ ಜೆಡಿಎಸ್‌ಗೆ ಟಾನಿಕ್‌ ನೀಡಿದ ಡಾಕ್ಟರ್‌!

2

Chain Theft: ವೃದ್ಧೆಗೆ ಚಾಕು ತೋರಿಸಿ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು ಪರಾರಿ

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

Uppinangady: “ಮೀಶೋ’ ಹಸರಲ್ಲಿ ವಂಚನಾ ಜಾಲ: ಎಚ್ಚರಿಕೆ

Uppinangady: “ಮೀಶೋ’ ಹಸರಲ್ಲಿ ವಂಚನಾ ಜಾಲ: ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.